ವಿದ್ಯಾಪೋಷಕ್‌ನ ೫೨ನೇ ಮನೆ ಹಸ್ತಾಂತರ

KannadaprabhaNewsNetwork |  
Published : Apr 21, 2024, 02:30 AM IST
ಮನೆ20 | Kannada Prabha

ಸಾರಾಂಶ

ಚೇರ್ಕಾಡಿಯ ಸೃಷ್ಟಿ ಇವಳಿಗೆ ಉಜ್ವಲ್ ಡೆವಲಪರ್ಸ್ ಮಾಲಕ ಪಿ. ಪುರುಷೋತ್ತಮ ಶೆಟ್ಟಿ ಅವರು ತಮ್ಮ ಮಾತೃಶ್ರೀಯವರ ನೆನಪಿನಲ್ಲಿ ನಿರ್ಮಿಸಿದ ನೂತನ ಮನೆ ‘ಭಾಗೀರಥಿ ನಿಲಯ’ವನ್ನು ಶನಿವಾರ ಹಸ್ತಾಂತರಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ, ಬ್ರಹ್ಮಾವರ ತಾಲೂಕಿನ ಚೇರ್ಕಾಡಿಯ ಸೃಷ್ಟಿ ಇವಳಿಗೆ ಉಜ್ವಲ್ ಡೆವಲಪರ್ಸ್ ಮಾಲಕ ಪಿ. ಪುರುಷೋತ್ತಮ ಶೆಟ್ಟಿ ಅವರು ತಮ್ಮ ಮಾತೃಶ್ರೀಯವರ ನೆನಪಿನಲ್ಲಿ ನಿರ್ಮಿಸಿದ ನೂತನ ಮನೆ ‘ಭಾಗೀರಥಿ ನಿಲಯ’ವನ್ನು ಶನಿವಾರ ಹಸ್ತಾಂತರಿಸಲಾಯಿತು.

ಪುರುಷೋತ್ತಮ ಶೆಟ್ಟಿ ಅವರು ಜ್ಯೋತಿ ಬೆಳಗಿಸಿ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಪುರುಷೋತ್ತಮ ಶೆಟ್ಟಿ ಅವರ ಪತ್ನಿ ಅಮೃತಾ ಪಿ. ಶೆಟ್ಟಿ, ಪುತ್ರರಾದ ಉಜ್ವಲ್, ಅಜಯ್ ಭಾಗವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್, ಸಂಸ್ಥೆಯ ದಾನಿ ಯು. ವಿಶ್ವನಾಥ ಶೆಣೈ, ಪ್ರವೀಣ್ ಹೆಗ್ಡೆ, ರಿಚ್ಮಂಡ್ ಕ್ಲೇರ್, ಮೀನಾಲಕ್ಷಣಿ ಅಡ್ಯಂತಾಯ, ಸಂಸ್ಥೆಯ ಉಪಾಧ್ಯಕ್ಷರಾದ ಎಸ್.ವಿ.ಭಟ್, ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ, ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ಚೇರ್ಕಾಡಿ ಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ ನಾಯಕ, ಪರ್ಕಳ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಆನಂದ ನಾಯ್ಕ್, ಸದಸ್ಯರಾದ ಬಿ. ಭುವನಪ್ರಸಾದ್ ಹೆಗ್ಡೆ, ವಿಜಯ ಕುಮಾರ್ ಮುದ್ರಾಡಿ, ಅನಂತರಾಜ್ ಉಪಾಧ್ಯ, ಎಚ್.ಎನ್. ವೆಂಕಟೇಶ, ಅಜಿತ್ ಕುಮಾರ್, ಗಣೇಶ್ ಬ್ರಹ್ಮಾವರ, ರಾಜೇಶ್ ನಾವಡ, ರಾಮದಾಸ್ ನಾಯಕ್, ಭಾಗವತರಾದ ಸದಾಶಿವ ಅಮೀನ್ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಭಾನುವಾರ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆಗೊಳ್ಳುತ್ತಿದ್ದು, ಅದರ ಪೂರ್ವದಲ್ಲಿ ಬಡ ಕುಟುಂಬಕ್ಕೆ ಆಶ್ರಯ ಕಲ್ಪಿಸುತ್ತಿರುವುದು ಸಂಸ್ಥೆಯ ಕಾರ್ಯಕರ್ತರಿಗೆ ಧನ್ಯತೆಯನ್ನು ಉಂಟುಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿ ಎಲ್ಲರನ್ನು ಸ್ವಾಗತಿಸಿದರು.

ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ವಂದಿಸಿದರು. ಎಚ್.ಎನ್. ಶೃಂಗೇಶ್ವರ ಸಹಕರಿಸಿದರು. ಇದು ಸಂಸ್ಥೆಯು ದಾನಿಗಳ ನೆರವಿನಿಂದ ನಿರ್ಮಿಸಿದ ೫೨ನೇಯ ಮನೆಯಾಗಿದೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ