ಕನ್ನಡಪ್ರಭ ವಾರ್ತೆ ಕಲಬುರಗಿ
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಾರಸುದಾರಿಗೆ ಮೊಬೈಲ್ ಹಸ್ತಾಂತರಿಸಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಇಎನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮೊಬೈಲ್ ಕಳ್ಳತನ ಪ್ರಕರಣಗಳ ಪತ್ತೆಗೆ ಕಮೀಷನರ್, ಡಿಸಿಪಿ ಕನಿಕಾ ಸಿಕ್ರಿವಾಲ್, ಎಸಿಪಿ ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಸಿಇಎನ್ ಪಿಐ ನಾಸೀರ್ ಡಿ.ಸನದಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಶಿವರಾಜ, ಹೊನ್ನೂರಸಾಬ್, ಅಮರನಾಥ, ಅಂಬರೇಶ, ರವಿಚಂದ್ರ, ಅಪರಾಧ ವಿಭಾಗದ ಸಿಬ್ಬಂದಿಗಳಾದ ಎಎಸ್‍ಐ ರವಿಕುಮಾರ, ಗುರುನಾಥ ಮತ್ತು ಗೋಪಾಲ್ ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು. ಈ ತಂಡ ತನಿಖೆ ನಡೆಸಿ ಕಳವಾದ 101 ಮೊಬೈಲ್‍ಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಕಳವಾದ ಮೊಬೈಲ್‍ಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದ ಅವರು ಸಾರ್ವಜನಿಕರು ಮೊಬೈಲ್ ಕಳವಾದಾಗ ಸಿಇಐಆರ್ ಪೋರ್ಟ್‍ನಲ್ಲಿ ದೂರು ಸಲ್ಲಿಸಿದರೆ ಕಳವಾದ ಮೊಬೈಲ್‍ಗಳನ್ನು ಪತ್ತೆ ಹಚ್ಚಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. ಡಿಸಿಪಿ ಕನಿಕಾ ಸಿಕ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.