ಬೆಂಗ್ರೆ ವಾರ್ಡ್‌ ಶಾಲೆಗೆ ನೂತನ ಕೊಠಡಿ ಹಸ್ತಾಂತರ

KannadaprabhaNewsNetwork |  
Published : Jul 09, 2024, 12:51 AM IST
ಶಾಸಕ ವೇದವ್ಯಾಸ್‌ ಕಾಮತ್‌ ಮಾತನಾಡುತ್ತಿರುವುದು | Kannada Prabha

ಸಾರಾಂಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆ ವಾರ್ಡಿನ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ, ಸ್ಯಾಂಡ್ಸ್ ಪಿಟ್ ಇಲ್ಲಿನ ವಿವೇಕ ಶಾಲಾ ಕೊಠಡಿ ನಿರ್ಮಾಣ ಯೋಜನೆಯಡಿ 28 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾದ ಎರಡು ನೂತನ ತರಗತಿಗಳ ಕೊಠಡಿಗಳನ್ನು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸೋಮವಾರ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆ ವಾರ್ಡಿನ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ, ಸ್ಯಾಂಡ್ಸ್ ಪಿಟ್ ಇಲ್ಲಿನ ವಿವೇಕ ಶಾಲಾ ಕೊಠಡಿ ನಿರ್ಮಾಣ ಯೋಜನೆಯಡಿ 28 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾದ ಎರಡು ನೂತನ ತರಗತಿಗಳ ಕೊಠಡಿಗಳನ್ನು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸೋಮವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ನಾನು ಕೂಡ ಸರ್ಕಾರಿ ಶಾಲೆಯಲ್ಲೇ ಕಲಿತವನಾಗಿದ್ದು ಈ ಶಾಲೆಗಳ ಬಗ್ಗೆ ವಿಶೇಷ ಕಾಳಜಿ ಹಾಗೂ ಮುತುವರ್ಜಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗಿದೆ. ಸ್ಯಾಂಡ್ಸ್ ಪಿಟ್ ಬೆಂಗ್ರೆಯಲ್ಲಿರುವ ಶಾಲೆಗೆ ತುರ್ತಾಗಿ ಬೇಕಿದ್ದ ಕೊಠಡಿಗಳನ್ನು ಒದಗಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ನಾಗೇಶ್ ಅವರು ಪೂರಕವಾಗಿ ಸ್ಪಂದಿಸಿದ ಕಾರಣ ಈ ಶಾಲೆಯೂ ಸೇರಿದಂತೆ ಒಟ್ಟಾರೆಯಾಗಿ 35 ಕೊಠಡಿಗಳು ಅನುಷ್ಠಾನಕ್ಕೆ ಬಂದಿವೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಒಂದಷ್ಟು ಯೋಜನೆಗಳು ಅನುಷ್ಠಾನಕ್ಕೆ ಬರದೇ ಬಾಕಿ ಉಳಿದಿದ್ದು ಅವುಗಳ ಅನುಷ್ಠಾನಕ್ಕೂ ವಿಶೇಷ ಪ್ರಯತ್ನವನ್ನೂ ಮಾಡಲಾಗುವುದು. ಸರ್ಕಾರಿ ಶಾಲೆಗಳ ಅಭಿವೃದ್ಧಿಯ ವಿಷಯದಲ್ಲಿ ನನ್ನ ನಿಲುವು ಅಚಲ ಎಂದರು.ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತ, ಪಾಲಿಕೆ ಸದಸ್ಯರುಗಳಾದ ಮನೋಹರ್ ಕದ್ರಿ, ಕಿಶೋರ್ ಕೊಟ್ಟಾರಿ, ಮುನೀಬ್ ಪ್ರಮುಖರಾದ ಗಂಗಾಧರ್ ಸಾಲ್ಯಾನ್, ಮೀರಾ ಕರ್ಕೇರ, ಪುಂಡಲೀಕ ಮೈಂದರ್, ಸಂಧ್ಯಾ ಸುವರ್ಣ, ಮಾಧವ ಸುವರ್ಣ, ರಾಕೇಶ್ ಸಾಲ್ಯಾನ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ