ನೇಹಾ ಹಿರೇಮಠ್ ಹತ್ಯೆಯ ಅಪರಾಧಿಯನ್ನು ಗಲ್ಲಿಗೇರಿಸಿ: ಸಂಧ್ಯಾ ರಮೇಶ್

KannadaprabhaNewsNetwork |  
Published : Apr 25, 2024, 01:02 AM IST
ನೇಹಾ24 | Kannada Prabha

ಸಾರಾಂಶ

ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಮೊಂಬತ್ತಿ ಉರಿಸಿ ಶ್ರದ್ಧಾಂಜಲಿ ಮತ್ತು ಪ್ರತಿಭಟನಾ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರನ್ನು ಫಯಾಜ್ ಎನ್ನುವ ಮತಾಂಧ ಕೊಲೆ ಮಾಡಿದ್ದು ಜಗಜ್ಜಾಹೀರಾಗಿದ್ದರೂ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯವನ್ನು ಓಲೈಸಲು ಪ್ರಕರಣವನ್ನು ಹಗುರವಾಗಿ ಪರಿಗಣಿಸಿ, ಹತ್ಯೆಗೀಡಾದ ಹೆಣ್ಣು ಮಗಳ ಚಾರಿತ್ರ್ಯಹರಣ ಮಾಡಲು ಮುಂದಾಗಿರುವುದು ಅತ್ಯಂತ ಖಂಡನೀಯ. ಸರ್ಕಾರ ಅಪರಾಧಿಯ ವಿರುದ್ಧ ಶೀಘ್ರ ಕಾನೂನಾತ್ಮಕ ಕ್ರಮವನ್ನು ಜರುಗಿಸಿ ಅಪರಾಧಿಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಗ್ರಹಿಸಿದ್ದಾರೆ.

ಅವರು ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಮೊಂಬತ್ತಿ ಉರಿಸಿ ನಡೆದ ಶ್ರದ್ಧಾಂಜಲಿ ಮತ್ತು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಅತಿಯಾದ ಮುಸ್ಲಿಂ ತುಷ್ಟಿಕರಣವೇ ಇಂತಹ ಘಟನೆಗಳು ನಡೆಯಲು ಕಾರಣ. ಸ್ವತಃ ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಮಗಳಿಗೆ ನ್ಯಾಯ ಒದಗಿಸಲಾಗದ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರು. ಕೊಡುತ್ತೇನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಯೋತ್ಪಾದಕರು, ಬಾಂಬ್ ಇಡುವವರನ್ನು ಅಮಾಯಕರು, ಮೈ ಬ್ರದರ್ಸ್ ಎನ್ನುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇವಲ ಮುಸ್ಲಿಮರ ಓಟಿನಿಂದ ಗೆದ್ದು ಬಂದಿದ್ದಾರೆಯೇ ಎಂಬ ಬಗ್ಗೆ ಹಿಂದೂ ಸಮುದಾಯ ಗಂಭೀರವಾಗಿ ಆಲೋಚಿಸಿ ಚುನಾವಣೆಯಲ್ಲಿ ಮತ ಚಲಾಯಿಸುವ ಕಾಲ ಸನ್ನಿಹಿತವಾಗಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸರೋಜಾ ಶಣೈ, ಶಾಂತಿ ಮನೋಜ್‌, ಉಪಾಧ್ಯಕ್ಷರಾದ ಪೂರ್ಣಿಮಾ ಶೆಟ್ಟಿ, ಮಾಯಾ ಕಾಮತ್‌, ಯಶೋಧ ರಾಜ್‌, ಪ್ರಭಾ ರಾವ್‌, ವಿದ್ಯಾ ಶಾಮ್‌ ಸುಂದರ್‌, ಪ್ರೀತಿ, ದೀಪಾ ಪೈ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?