ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ

KannadaprabhaNewsNetwork |  
Published : May 19, 2024, 01:48 AM IST
ಪ್ರತಿಭಟನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಅಥಣಿ ಅಂಜಲಿ ಅಂಬಿಗೇರ ಕೊಲೆ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅಥಣಿ ತಾಲೂಕು ಕೋಳಿ, ಅಂಬಿಗ ಸಮಾಜದ ಅಧ್ಯಕ್ಷ ಎಸ್.ಕೆ.ಹೊಳೆಪ್ಪನವರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಕೃತ್ಯ ಖಂಡಿಸಿ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಅಂಜಲಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಂಜಲಿ ತಂದೆ ತಾಯಿ ಇಲ್ಲದ್ದರಿಂದ ಅಜ್ಜಿಯ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಅವಳನ್ನು ಕಳೆದುಕೊಂಡ ಕುಟುಂಬ ಈಗ ಬೀದಿಗೆ ಬರಬೇಕಾಗಿದೆ. ಸರ್ಕಾರ ಕುಟುಂಬಕ್ಕೆ ರಕ್ಷಣೆ ಮತ್ತು ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಅಥಣಿ

ಅಂಜಲಿ ಅಂಬಿಗೇರ ಕೊಲೆ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅಥಣಿ ತಾಲೂಕು ಕೋಳಿ, ಅಂಬಿಗ ಸಮಾಜದ ಅಧ್ಯಕ್ಷ ಎಸ್.ಕೆ.ಹೊಳೆಪ್ಪನವರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಕೃತ್ಯ ಖಂಡಿಸಿ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಅಂಜಲಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಂಜಲಿ ತಂದೆ ತಾಯಿ ಇಲ್ಲದ್ದರಿಂದ ಅಜ್ಜಿಯ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಅವಳನ್ನು ಕಳೆದುಕೊಂಡ ಕುಟುಂಬ ಈಗ ಬೀದಿಗೆ ಬರಬೇಕಾಗಿದೆ. ಸರ್ಕಾರ ಕುಟುಂಬಕ್ಕೆ ರಕ್ಷಣೆ ಮತ್ತು ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕರವೇ ಎಚ್.ಶಿವರಾಮೇಗೌಡ ಬಣದ ಅಧ್ಯಕ್ಷ ಅಣ್ಣಾಸಾಬ ತೆಲಸಂಗ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗುತ್ತಿದೆ. ಸಿಎಂ ಹಾಗೂ ಗೃಹ ಸಚಿವರು ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿ ಕುರಿತು ಪರಿಶೀಲನೆ ಮಾಡಬೇಕು. ಅಂಜಲಿ ಕುಟುಂಬದವರು ಮೊದಲೇ ದೂರು ನೀಡಿದ್ದರೂ ಠಾಣಾಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಆದ್ದರಿಂದಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಅಧ್ಯಕ್ಷ ಮಹಾದೇವ ಮಡಿವಾಳ ಮಾತನಾಡಿ, ಪ್ರೀತಿ ಪ್ರೇಮದ ಹೆಸರಿನಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆಯನ್ನು ಸರ್ಕಾರ ಕೂಡಲೇ ಸರಿಪಡಿಸಿ ಅಂಜಲಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.

ಅಥಣಿ ಪಟ್ಟಣದ ಶಿವಯೋಗಿ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರತಿಭಟಿಸಿದರು. ನಂತರ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಎಂ.ಬಿ.ಚಿಪ್ಪಾಡಿ, ಪ್ರಕಾಶ ಕೋಳಿ, ವಿಲಾಸ ಕುಲಕರ್ಣಿ, ಧನಪಾಲ ಸನದಿ, ಚೆನ್ನಯ್ಯ ಇಟನಾಳಮಠ, ಶ್ರೀಪಾದ ಕುಲಕರ್ಣಿ, ರಾಜು ಬಡಿಗೇರ, ಜಗನ್ನಾಥ ಬಾಮನೆ, ಪ್ರಕಾಶ್ ಗಸ್ತಿ, ರಾಜು ವಾಘಮೋರೆ, ಹಣಮಂತ ಅವಟಿ, ಶಬ್ಬೀರ ಸಾತಬಚ್ಚಿ, ಅಭಯ ಕೊಪ್ಪ, ಸುಭಾಷ್ ಗಸ್ತಿ, ಮಂಜು ಹೋಳಿಕಟ್ಟಿ, ಎಂ.ಜೆ.ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ