ಚಿಕ್ಕಮಗಳೂರು, ಹಂಗರವಳ್ಳಿ ಸರ್ಕಾರಿ ಶಾಲೆ ರಾಜ್ಯಕ್ಕೆ ಮಾದರಿಯಾಗಿದೆ. 13 ಮಕ್ಕಳಿದ್ದು ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಯಲ್ಲಿ ಈಗ 320 ಮಕ್ಕಳು ವ್ಯಾಸಂಗ ಮಾಡುವ ಹಂತಕ್ಕೆ ಬಂದಿರುವುದರಲ್ಲಿ ಟ್ರಸ್ಟಿನ ಪರಿಶ್ರಮ ಹಾಗೂ ಶಿಕ್ಷಕ ವೃಂದದವರ ಕಾರ್ಯ ಕ್ಷಮತೆ ಅನನ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಶ್ಲಾಘಿಸಿದರು.
ತಾಲೂಕಿನ ಹಂಗರವಳ್ಳಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಉಚಿತ ಪಠ್ಯ, ನೋಟ್ ಪುಸ್ತಕ, ಸಮವಸ್ತ್ರ ವಿತರಣೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಹಂಗರವಳ್ಳಿ ಸರ್ಕಾರಿ ಶಾಲೆ ರಾಜ್ಯಕ್ಕೆ ಮಾದರಿಯಾಗಿದೆ. 13 ಮಕ್ಕಳಿದ್ದು ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಯಲ್ಲಿ ಈಗ 320 ಮಕ್ಕಳು ವ್ಯಾಸಂಗ ಮಾಡುವ ಹಂತಕ್ಕೆ ಬಂದಿರುವುದರಲ್ಲಿ ಟ್ರಸ್ಟಿನ ಪರಿಶ್ರಮ ಹಾಗೂ ಶಿಕ್ಷಕ ವೃಂದದವರ ಕಾರ್ಯ ಕ್ಷಮತೆ ಅನನ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಶ್ಲಾಘಿಸಿದರು. ತಾಲೂಕಿನ ಹಂಗರವಳ್ಳಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶ್ರೀ ಉದ್ದಂಡೇಶ್ವರ ಶಿಕ್ಷಣ ಸೇವಾ ಟ್ರಸ್ಟಿನಿಂದ ನೀಡಲಾದ ಉಚಿತ ಪಠ್ಯ, ನೋಟ್ ಪುಸ್ತಕ ಹಾಗೂ ಸಮವಸ್ತ್ರ ವಿತರಣೆಯಲ್ಲಿ ಅವರು ಮಾತನಾಡಿದರು.ಇಚ್ಚಾಸಕ್ತಿ ಇದ್ದರೆ ಏನನ್ನಾದರೂ ಸಾಧಿಸಬಹುದು ಎಂಬುವುದಕ್ಕೆ ಈ ಶಾಲೆಯನ್ನ ದತ್ತು ಪಡೆದು ಯಾವುದೇ ಫಲಾಪೇಕ್ಷೆ ಇಲ್ಲದೆ ಮುನ್ನಡೆಸುತ್ತಿರುವ ಶ್ರೀ ಉದ್ದಂಡೇಶ್ವರ ಶಿಕ್ಷಣ ಸೇವಾ ಟ್ರಸ್ಟ್ ಮೇಲ್ಪಂಕ್ತಿ ಹಾಕಿಕೊಟ್ಟಿದೆ. ಟ್ರಸ್ಟ್‌ನ ಪದಾಧಿಕಾರಿಗಳ ಅರ್ಪಣಾ ಮನೋಭಾವ ಕೂಡ ಪ್ರಶಂಸನೀಯ. ಸರ್ಕಾರದಿಂದ ನಾನು ಇವರನ್ನೆಲ್ಲ ಅಭಿನಂದಿಸುವೆ ಎಂದರು.ಜಿಪಂ ನಿಂದ ಇಂತಹ ಶಾಲೆಗಳನ್ನು ಅಭಿವೃದ್ಧಿಪಡಿಸಲು ಎಲ್ಲಾ ರೀತಿಯ ನೆರವು ನೀಡಲಾಗುವುದು. ಇದೇ ಮಾದರಿಯಲ್ಲಿ ಜಿಲ್ಲೆಯ ಇತರೆ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸಮುದಾಯ ಮುಂದೆ ಬರಬೇಕು ಎಂದು ಕರೆ ನೀಡಿದರು.ವಿದ್ಯೆಯೇ ಎಲ್ಲ ಸಾಧನೆಗೂ ದಾರಿ ದೀಪ. ಜಗತ್ತಿನಲ್ಲಿ ವಿದ್ಯೆಗೆ, ಜ್ಞಾನಕ್ಕೆ ಇರುವ ಬೆಲೆ ಬೇರೆ ಯಾವುದಕ್ಕೂ ಇಲ್ಲ. ಆದ್ದರಿಂದ ಮಕ್ಕಳು ಉತ್ತಮ ಶಿಕ್ಷಣ ಪಡೆದು ದೇಶದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕು. ಮಕ್ಕಳು ತಮ್ಮ ವಿದ್ಯಾರ್ಥಿ ಜೀವನವನ್ನು ವಿದ್ಯಾಭ್ಯಾಸಕ್ಕಾಗಿ ಮುಡುಪಾಗಿಟ್ಟು ನಿರಂತರ ಓದುವಿಕೆಯಿಂದ ತಮ್ಮ ಗುರಿ ಸಾಧಿಸಬೇಕು ಎಂದೂ ಹೇಳಿದರು.ಕಾರ್ಯಕ್ರಮದಲ್ಲಿ 320 ವಿದ್ಯಾರ್ಥಿಗಳಿಗೆ ಟ್ರಸ್ಟ್ ನಿಂದ ನೋಟ್ ಬುಕ್ಸ್, ಸಮವಸ್ತ್ರ, ಪಠ್ಯಪುಸ್ತಕಗಳನ್ನು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ ವಿತರಣೆ ಮಾಡಿದರು.
ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷ, ಟ್ರಸ್ಟ್ ಅಧ್ಯಕ್ಷರು, ಉಪಾಧ್ಯಕ್ಷರು ಪದಾಧಿಕಾರಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಶಿಕ್ಷಕ ವೃಂದದವರು ಹಾಗೂ ಪೋಷಕರು ಭಾಗವಹಿಸಿದ್ದರು. 10 ಕೆಸಿಕೆಎಂ 6ಹಂಗರವಳ್ಳಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಉಚಿತ ಪಠ್ಯ ಪುಸ್ತಕಗಳನ್ನು ಜಿ.ಪಂ. ಸಿಇಒ ಎಚ್.ಎಸ್.ಕೀರ್ತನಾ ವಿತರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.