ಲಕ್ಷ್ಮೇಶ್ವರದಲ್ಲಿ ಸಂಭ್ರಮದ ಹಾವಳಿ ಹನುಮಪ್ಪನ ರಥೋತ್ಸವ

KannadaprabhaNewsNetwork |  
Published : Oct 24, 2025, 01:00 AM IST
ಪೊಟೋ-ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದ ರಥೋತ್ಸವವು ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನೆರವೇರಿತು.   | Kannada Prabha

ಸಾರಾಂಶ

ರಥೋತ್ಸವಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಹೂವಿನಶಿಗ್ಲಿ ಶ್ರೀಗಳು, ಅಜ್ಞಾನ, ಅಂಧಕಾರ ಕಳೆದು ಜ್ಞಾನದ ಜ್ಯೋತಿ ಬೆಳಗಿಸುವುದು ದೀಪಾವಳಿ ಹಬ್ಬದ ವೈಶಿಷ್ಟ್ಯವಾಗಿದೆ. ದೀಪವು ಧರ್ಮ, ಸಂಸ್ಕೃತಿ, ಜ್ಞಾನ ಮತ್ತು ಅಧ್ಯಾತ್ಮದ ಸಂಕೇತವಾಗಿ, ದೀಪ ಬೆಳಗಿದಂತೆ ಎಲ್ಲರ ಜೀವನದಲ್ಲಿ ಬೆಳಕು ಪ್ರಜ್ವಲಿಸಬೇಕು ಎಂದರು.

ಲಕ್ಷ್ಮೇಶ್ವರ: ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನದ ರಥೋತ್ಸವವು ಬುಧವಾರ ಸಂಜೆ ಅದ್ಧೂರಿಯಾಗಿ ಜರುಗಿತು. ಸಂಜೆ ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಸ್ವಾಮಿಗಳು ರಥೋತ್ಸವವಕ್ಕೆ ಚಾಲನೆ ನೀಡಿದರು.

ರಥೋತ್ಸವ ಹಿನ್ನೆಲೆ ದೇವಸ್ಥಾನಕ್ಕೆ ವಿದ್ಯುತ್ ಅಲಂಕಾರ ಮತ್ತು ಹನುಮಂತ ದೇವರ ಮೂರ್ತಿಯನ್ನು ಬೆಣ್ಣೆ ಮತ್ತು ವೀಳ್ಯದೆಲೆಯಿಂದ ಅಲಂಕರಿಸಲಾಗಿತ್ತು. ವಿವಿಧ ವಾದ್ಯಮೇಳ, ಭಜನೆಯೊಂದಿಗೆ ಜರುಗಿದ ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರು ಆಂಜನೇಯ ಮಹಾರಾಜಕೀ ಜೈ, ಜೈ ಶ್ರೀರಾಮ ಘೋಷಣೆ ಮೊಳಗಿಸಿದರು. ಇತ್ತೀಚಿನ ವರ್ಷಗಳಲ್ಲಿ ಈ ಜಾತ್ರೆಗೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ವರ್ಷದಿಂದ ವರ್ಷಕ್ಕೆ ಜಾತ್ರೆಯ ರಂಗು ಹೆಚ್ಚುತ್ತಿದೆ.

ರಥೋತ್ಸವಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಹೂವಿನಶಿಗ್ಲಿ ಶ್ರೀಗಳು, ಅಜ್ಞಾನ, ಅಂಧಕಾರ ಕಳೆದು ಜ್ಞಾನದ ಜ್ಯೋತಿ ಬೆಳಗಿಸುವುದು ದೀಪಾವಳಿ ಹಬ್ಬದ ವೈಶಿಷ್ಟ್ಯವಾಗಿದೆ. ದೀಪವು ಧರ್ಮ, ಸಂಸ್ಕೃತಿ, ಜ್ಞಾನ ಮತ್ತು ಅಧ್ಯಾತ್ಮದ ಸಂಕೇತವಾಗಿ, ದೀಪ ಬೆಳಗಿದಂತೆ ಎಲ್ಲರ ಜೀವನದಲ್ಲಿ ಬೆಳಕು ಪ್ರಜ್ವಲಿಸಬೇಕು ಎಂದರು.

ಈ ವೇಳೆ ಶಾಸಕ ಡಾ. ಚಂದ್ರು ಲಮಾಣಿ, ಈಶ್ವರಪ್ಪ ಕುಂಬಾರ, ನೀಲಪ್ಪ ಕರ್ಜೇಕಣ್ಣವರ, ನಾಗರಾಜ ಚಿಂಚಲಿ, ನಿಂಗಪ್ಪ ಬನ್ನಿ, ಮಹೇಶ ಹೊಗೆಸೊಪ್ಪಿನ, ಸುನೀಲ ಮಹಾಂತಶೆಟ್ಟರ, ವಿಜಯಕುಮಾರ ಹತ್ತಿಕಾಳ, ಫಕ್ಕೀರೇಶ ಅಣ್ಣಿಗೇರಿ, ಸುನೀಲ ಮುಳಗುಂದ, ಮಲ್ಲಿಕಾರ್ಜುನ ಮುಳಗುಂದ, ಶೇಖಪ್ಪ ಕರ್ಜೆಕಣ್ಣವರ, ಮಾಂತೇಶ ಗೋಡಿ, ನವೀನ ಕುಂಬಾರ, ಮಲ್ಲಪ್ಪ ಚಕ್ರಸಾಲಿ, ಬಸವರಾಜ ಚಕ್ರಸಾಲಿ, ಮಂಜುನಾಥ ಕೊಡಳ್ಳಿ, ಜಗದೀಶ ಕುಂಬಾರ, ಈರಣ್ಣ ಪೂಜಾರ, ಅರ್ಚಕ ಮುರುಘೇಂದ್ರಸ್ವಾಮಿ ಹಿರೇಮಠ, ಭರಮಪ್ಪ ಅಣ್ಣಿಗೇರಿ ಹಾಗೂ ಹಿಂದೂ ಮಹಾಸಭಾ ಗಣಪತಿ ಸೇವಾ ಮಂಡಳಿ, ಹಾವಳಿ ಆಂಜನೇಯ ಭಜನಾ ಮಂಡಳಿ, ಯುವಕ ಮಂಡಳಿ ಸದಸ್ಯರು ಸೇರಿ ಹಿರಿಯರು, ಮುಖಂಡರು, ಯುವಕರು, ಸಾವಿರಾರು ಜನರು ಪಾಲ್ಗೊಂಡಿದ್ದರು.

PREV

Recommended Stories

ಸ್ವಸ್ಥ ಶರದ್ ಋತು ಪ್ರಕೃತಿಯ ಲಯದಲ್ಲಿ ಸ್ವಸ್ಥತೆ ! ಶರದ್ ಋತುವಿನ ಆಹಾರ ಮತ್ತು ದಿನಚರ್ಯೆ
ನಟ ದರ್ಶನ್‌ಗೆ ಜೈಲಿನಲ್ಲಿ ಹರಿದ ಚಾದರ : ವಕೀಲರ ವಾದ