ಕನ್ನಡಪ್ರಭ ವಾರ್ತೆ ಮಂಡ್ಯಕೆರಗೋಡು ಧ್ವಜಸ್ತಂಭ ಸ್ಥಾಪನೆ, ಹನುಮ ಧ್ವಜ ಹಾರಾಟ ವಿವಾದದ ಸ್ವರೂಪ ಪಡೆಯುವುದಕ್ಕೆ ಗ್ರಾಮ ಪಂಚಾಯ್ತಿಯಲ್ಲಿ ಆಗಿರುವ ನಿರ್ಣಯಗಳು, ಒತ್ತಡಕ್ಕೆ ಸಿಲುಕಿ ಅಧಿಕಾರಿಗಳು ಮಾಡಿದ ಎಡವಟ್ಟಿನ ನಿರ್ಧಾರಗಳು ಮೂಲ ಕಾರಣ ಎನ್ನುವುದು ಗಮನಾರ್ಹ ಸಂಗತಿಯಾಗಿದೆ.
ಅಷ್ಟೇ ಅಲ್ಲದೇ, ಜ.20ರಂದು ಧ್ವಜಸ್ತಂಭದಲ್ಲಿ ಹನುಮಧ್ವಜ ಹಾರಾಡಿದ್ದು, ಪರಿಸ್ಥಿತಿ ಗಂಭೀರಗೊಳ್ಳುತ್ತಿರುವುದನ್ನು ಮನಗಂಡೂ ಧ್ವಜವನ್ನು ಜ.25ರ ವರೆಗೆ ಧ್ವಜ ಹಾರಾಟಕ್ಕೆ ಅವಕಾಶ ನೀಡಿದ್ದು ಹಾಗೂ ಗಣರಾಜ್ಯೋತ್ಸವ ದಿನದಂದು ಹನಮಧ್ವಜ ಕೆಳಗಿಳಿಸಿ ರಾಷ್ಟ್ರಧ್ವಜ ಆರಿಸಿದ ಬಳಿಕ ಸಂಜೆ ಮತ್ತೆ ಅದನ್ನು ಕೆಳಗಿಳಿಸಿ ಹನುಮ ಧ್ವಜವನ್ನು ಆರೋಹಣ ಮಾಡಲು ಅವಕಾಶ ಮಾಡಿಕೊಟ್ಟಿರುವುದೇ ಕೆರಗೋಡು ವಿವಾದದ ಕೇಂದ್ರಬಿಂದುವಾಗಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವುದಕ್ಕೆ ಪ್ರಮುಖ ಕಾರಣವಾಯಿತು ಎನ್ನುವುದು ಕೆರಗೋಡು ಗ್ರಾಪಂ ಅಧ್ಯಕ್ಷ ನವೀನ್ ಅವರು ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ನೀಡಿದ ಹೇಳಿಕೆಗಳಿಂದ ತಿಳಿದು ಬಂದಿರುವ ಸತ್ಯವಾಗಿದೆ.
ಅಧ್ಯಕ್ಷ ಹೇಳಿದ್ದಿಷ್ಟು?28.11.2023ರಂದು ಶ್ರೀರಾಮ ಭಜನಾ ಮಂಡಳಿ ಹಾಗೂ ಶ್ರೀಅಯ್ಯಪ್ಪಸ್ವಾಮಿ ಭಜನಾ ಮಂಡಳಿ ಶ್ರೀಆಂಜನೇಯಸ್ವಾಮಿ ದೇವಾಲಯದ ಎದುರು ಧ್ವಜಸ್ತಂಭ ಸ್ಥಾಪನೆಗೆ ಪಂಚಾಯ್ತಿ ಅನುಮತಿ ಕೋರಿದ್ದರು. 21.12.2023ರಂದು ಯೋಗೇಶ್ ಎಂಬುವರು ಹನುಮ ಧ್ವಜ ಹಾರಿಸುವುದಕ್ಕೆ ಅನುಮತಿ ಕೋರಿದ್ದರು. 29.12.2023 ರಂದು ಶ್ರೀಗೌರಿಶಂಕರ ಸೇವಾ ಟ್ರಸ್ಟ್‌ನವರು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು.
ಕಾಂಗ್ರೆಸ್ ಬೆಂಬಲಿತ ಸದಸ್ಯನೋರ್ವ ವಿರೋಧಿಸಿದರೆ, ಮತ್ತೋರ್ವ ಸದಸ್ಯ ತಟಸ್ಥರಾಗಿ ಉಳಿದಿದ್ದರು. ಹೀಗೆ ಧ್ವಜಸ್ತಂಭ ಸ್ಥಾಪಿಸಲು ಅನುಮತಿ ನೀಡಿ 2024 ಜನವರಿ 5 ರಂದು ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಒ ಸ್ಥಳ ಪರಿಶೀಲನೆ ನಡೆಸಿದರು. ಧ್ವಜಸ್ತಂಭ ಸ್ಥಾಪನೆಗೆ ಹಸಿರು ನಿಶಾನೆ ತೋರಿಸಲಾಯಿತು. ಧ್ವಜಸ್ತಂಭದಲ್ಲಿ ತ್ರಿವರ್ಣಧ್ವಜ ಹಾಗೂ ಕನ್ನಡ ಧ್ವಜ ಆರೋಹಣ ಮಾಡುವುದಕ್ಕಷ್ಟೇ ಟ್ರಸ್ಟ್‌ನವರು ಒಪ್ಪಿಗೆ ಸೂಚಿಸಿದ್ದರು.
ಪ್ರಶ್ನಿಸಿದರು. ಧ್ವಜ ತೆರವುಗೊಳಿಸುವಂತೆ 30ರಿಂದ 40 ಜನರು ಪಂಚಾಯ್ತಿ ಕಚೇರಿ ಹಾಗೂ ಪೊಲೀಸ್ ಠಾಣೆಗೆ ದೂರು ನೀಡಿದರು.
ಗಣರಾಜ್ಯೋತ್ಸವ ದಿನ ಆ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಆರಿಸಲಾಯಿತು. ಅದೇ ದಿನ ಸಂಜೆ ರಾಷ್ಟ್ರಧ್ವಜವನ್ನು ಕೆಳಗಿಳಿಸಲಾಗಿತ್ತು. ತದನಂತರದಲ್ಲಿ ಶ್ರೀಗೌರಿಶಂಕರ ಸೇವಾ ಟ್ರಸ್ಟ್‌ನವರು ಹನುಮ ಧ್ವಜವನ್ನು ಮತ್ತೆ ಆರೋಹಣ ಮಾಡಿದ್ದರು. ವಿಷಯ ತಿಳಿದು ಜ.27ರಂದು ಮತ್ತೆ ತಾಪಂ ಇಒ ವೀಣಾ ಅವರು ಸ್ಥಳಕ್ಕೆ ಆಗಮಿಸಿ ಪಂಚಾಯ್ತಿ ಸದಸ್ಯರೊಂದಿಗೆ ಚರ್ಚಿಸಿ ಧ್ವಜ ತೆರವುಗೊಳಿಸುವಂತೆ ತಿಳಿಸಿದ್ದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಎಸ್ಸಿ ವಿಭಾಗದ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಕಾ.ಪೂ. ರಮೇಶ್ ಇತರರು ಇದ್ದರು.