ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಪುಷ್ಪಗುಚ್ಚವಿರಿಸಿ ಅಂತಿಮ ಮನನ ಸಲ್ಲಿಸಿದರು.
ಹನುಮಂತಪ್ಪ ಅವರ ಪಾರ್ಥಿವ ಶರೀರವ ಮಧ್ಯಾಹ್ನ ಅವರ ನಿವಾಸದಿಂದ ತಂದು ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಮೊದಲು ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ವ್ಯವಸ್ಥೆ ಮಾಡಲಾಗಿತ್ತಾದರೂ ಸಿಎಂ ಆಗಮನದ ಹಿನ್ನಲೆ ಸೂಕ್ತ ಬಂದೋ ಬಸ್ತ್ ಕಾರಣಕ್ಕೆ ಪೊಲೀಸ್ ಇಲಾಖೆ ಮುರುಘರಾಜೇಂದ್ರ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಿತು. ಜನರು ಸರತಿಯಲ್ಲಿ ನಿಂತ ಅಂತಿಮ ದರ್ಶನ ಪಡೆದರು.ಪುಷ್ಪಗುಚ್ಚವಿರಿಸಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಚಿತ್ರದುರ್ಗ ಸದಾ ಬರಪೀಡಿತ ಒಣಭೂವಿಗೆ ನೀರುಣಿಸಬೇಕೆಂಬ ಹಂಬಲದೊಂದಿಗೆ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಹೋರಾಡಿದ ನೀರಾವರಿ ಹೋರಾಟಗಾರ, ರಾಜ್ಯಸಭಾ ಮಾಜಿ ಸದಸ್ಯ ಎಚ್.ಹನುಮಂತಪ್ಪ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಮರಿಸಿದರು.
ಎಚ್.ಹನುಮಂತಪ್ಪ ಅವರು ರೈಲ್ವೆ ಕಮಿಷನ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಆ ನಂತರ ರಾಜ್ಯಸಭಾ ಸದಸ್ಯರಾಗಿ ಅತ್ಯಂತ ಯಶಸ್ವಿಯಾಗಿ ಕರ್ತವ್ಯ ನಿಭಾಯಿಸಿದರು. ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾಗಾಂಧಿ ಅವರಿಗೂ ಅತ್ಯಂತ ಆಪ್ತರಾಗಿದ್ದುಕೊಂಡು, ರಾಷ್ಟ್ರಮಟ್ಟದಲ್ಲಿ ಮಾರ್ಗದರ್ಶಕರಾಗಿ ಗುರುತಿಸಿಕೊಂಡಿದ್ದರು. ಮೂರು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿ ಅಪಾರ ಜನಸೇವೆ ಮಾಡಿದ್ದಾರೆ ಎಂದರು.
ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾವು ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯನ್ನು ಶೀಘ್ರದಲ್ಲೇ ಹಮ್ಮಿಕೊಳ್ಳಲಿದ್ದೇವೆ. ಈ ಬಗ್ಗೆ ಉಪ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಂಸದ ಗೋವಿಂದ ಕಾರಜೋಳ, ಚಳ್ಳಕೆರೆ ಶಾಸಕ ಟಿ.ರಘಮೂರ್ತಿ, ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಮುರುಘಾಮಠದ ಬಸವಕುಮಾರ ಸ್ವಾಮೀಜಿ, ಛಲವಾದಿ ಗುರುಪೀಠದ ಬಸವನಾಗಿದೇವೆ ಸ್ವಾಮೀಜಿ, ಸಿದ್ದಯ್ಯನಕೋಟೆ ಮಠದ ಬಸವಲಿಂಗ ಸ್ವಾಮೀಜಿ, ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಮಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ರಾಜ್ಯ ದ್ರಾಕ್ಷಾ ಮಂಡಳಿ ಅಧ್ಯಕ್ಷ ಡಾ.ಯೋಗಿಶ್ ಬಾಬು, ಮಾಜಿ ಸಚಿವ ಹಾಗೂ ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಖ್ಯಾತ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ, ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಅಬ್ಬಯ್ಯ ಪ್ರಸಾದ್, ಮಾಯಕೊಂಡ ಶಾಸಕ ಬಸಂತಪ್ಪ, ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ, ದಾವಣಗೆರೆ ಮಾಜಿ ಸಂಸದ ಜಿ.ಎಂ.ಸಿದ್ದೇಶ್, ಕಂಠೀರವ ಸ್ಟೋಡಿಯೋ ಅಧ್ಯಕ್ಷ ಮೆಹಬೂಬ್ ಪಾಷ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ದಾವಣಗೆರೆ ಪೂರ್ವ ವಲಯ ಐಜಿಪಿ ರವಿಕಾಂತೇ ಗೌಡ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಡಾ.ಆಕಾಶ್, ಎಸ್ಪಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜನಪತ್ರಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಎಚ್.ಹನುಮಂತಪ್ಪ ಅವರ ಅಂತಿಮ ದರ್ಶನ ಪಡೆದರು.