ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣವನ್ನು ಖಂಡಿಸಿ ಗುರುವಾರ ಹನೂರು ಬಂದ್‌ಗೆ ಕರೆ ನೀಡಲಾಗಿತ್ತು. ಆದರೆ, ಬಂದ್‌ಗೆ ವರ್ತಕರು ಬೆಂಬಲ ನೀಡಲಿಲ್ಲ. ಹನೂರು ಪಟ್ಟಣದಲ್ಲಿ ಎಂದಿನಂತೆ ಎಲ್ಲಾ ಅಂಗಡಿ-ಮುಂಗಟ್ಟುಗಳು ತೆರೆದಿದ್ದು, ವ್ಯಾಪಾರ ವಹಿವಾಟು ನಡೆಯಿತು. ವಾಹನ ಎಂದಿನಂತೆ ಸಂಚಾರ ಸಹಜ ಸ್ಥಿತಿಯಲ್ಲಿತ್ತು. ಬಂದ್ ಕೇವಲ ಪ್ರತಿಭಟನೆಗೆ ಮಾತ್ರ ಸೀಮಿತವಾಯಿತು.
ಕನ್ನಡಪ್ರಭ ವಾರ್ತೆ ಹನೂರು

ನಂತರ ಹನೂರು ಪಟ್ಟಣದ ಮುಖ್ಯರಸ್ತೆಯಲ್ಲಿ ರೈತ ಸಂಘದ ಕಾರ್ಯಕರ್ತರು, ಮೃತರ ಕುಟುಂಬಸ್ಥರು ಹಾಗೂ ವಿವಿಧ ದಲಿತಪರ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯ:
ಕಾವೇರಿ ವನ್ಯಧಾಮದಲ್ಲಿ ಎನ್‌ಕೌಂಟರ್ ನಡೆಸಿದ ಅರಣ್ಯ ಸಿಬ್ಬಂದಿಯನ್ನು ಕೂಡಲೇ ಪೊಲೀಸರು ಬಂಧಿಸಬೇಕು. ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆನಡೆಸಬೇಕು ಮತ್ತು ಮೃತ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು, ಅರಣ್ಯ ಇಲಾಖೆ ಗುಂಡೇಟಿಗೆ ಬಲಿಯಾದ ಮೃತರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು ಎಂದು ಅಗ್ರಹಿಸಿದರು.
ಬಿಗಿ ಪೊಲೀಸ್ ಪಹರೆ: ಬಂದ್‌ಗೆ ವ್ಯಾಪಕವಾಗಿ ಪೊಲೀಸರಿಂದ ಪಟ್ಟಣದಲ್ಲಿ ಸೂಕ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.