ಹನ್ಯಾಳು ಸರ್ಕಾರಿ ಶಾಲೆಯ ವಾರ್ಷಿಕೋತ್ಸವ

KannadaprabhaNewsNetwork |  
Published : Feb 10, 2025, 01:48 AM IST
9ಎಚ್ಎಸ್ಎನ್17 :ಶಾಲಾ ವಾರ್ಷಿಕೋತ್ಸದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ತಾರಾ ಎ ಮಂಜು ಅವರನ್ನು ಗೌರವಿಸಲಾಯಿತು. | Kannada Prabha

ಸಾರಾಂಶ

ಹನ್ಯಾಳು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆಯಿತು. ಗ್ರಾಮದ ಪೂರ್ವ ಪ್ರಾಥಮಿಕ ಶಾಲೆ(ಮಕ್ಕಳ ಮನೆ), ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು , ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಬಿ.ವಿ.ಮಂಜುನಾಥ್ ಸರ್ ನಿವೃತ್ತ ಶಿಕ್ಷಕರು, ರುದ್ರಪಟ್ಟಣ ಹಾಗೂ ಎಸ್‌ಎಮ್‌ಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಆಗಮಿಸಿ ಶಿಕ್ಷಣದ ಮಹತ್ವ ಹಾಗೂ ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿ ಪರ ಮಾತನಾಡಿದರು.

ಕನ್ನಡಪ್ರಭ ವಾರ್ತೆ ರಾಮನಾಥಪುರ

ಹನ್ಯಾಳು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆಯಿತು.

ಗ್ರಾಮದ ಪೂರ್ವ ಪ್ರಾಥಮಿಕ ಶಾಲೆ(ಮಕ್ಕಳ ಮನೆ), ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು , ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಬಿ.ವಿ.ಮಂಜುನಾಥ್ ಸರ್ ನಿವೃತ್ತ ಶಿಕ್ಷಕರು, ರುದ್ರಪಟ್ಟಣ ಹಾಗೂ ಎಸ್‌ಎಮ್‌ಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಆಗಮಿಸಿ ಶಿಕ್ಷಣದ ಮಹತ್ವ ಹಾಗೂ ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿ ಪರ ಮಾತನಾಡಿದರು. ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಹನ್ಯಾಳು ಶಾಲೆಯ ಒಬ್ಬ ವಿದ್ಯಾರ್ಥಿಗೆ ಪಿಯುಸಿಗೆ ತಮ್ಮ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡುವ ಭರವಸೆ ನೀಡಿದರು.

ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯರಾದ ತಾರಾ ಎ ಮಂಜು ಮಾತನಾಡಿ, ಈ ಕಾರ್ಯಕ್ರಮಕ್ಕೆ ಆಗಮಿಸಿ ಮಕ್ಕಳ ಮನೆ ಮಕ್ಕಳಿಗೆ ಬಹುಮಾನ ವಿತರಿಸಿ ಮಕ್ಕಳಿಗೆ ಶುಭ ಹಾರೈಸಿದರು. ಜೊತೆಗೆ ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿಯಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ನವೀನ್, ಅರಕಲಗೂಡಿನ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಮಹೇಶ್, ಹಾಸನದ ಹಿಮ್ಸ್‌ನ ಮುಖ್ಯ ಲೆಕ್ಕಾಧಿಕಾರಿ ಡಾ. ಅಶೋಕ್ ಹನ್ಯಾಳು ಹಾಗೂ ಶಾಲೆಯ ನಿವೃತ್ತ ಶಿಕ್ಷಕರು ಈ ಕಾರ್ಯಕ್ರಮದ ಆತಿಥ್ಯ ವಹಿಸಿದ್ದರು. ಗ್ರಾಮದ ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ದಾನಿಗಳಾದ ರತ್ನ ಲಚ್ಮೇಗೌಡ ಅವರು ಪೋಷಕರಿಗೆ ಮತ್ತು ಮಕ್ಕಳಿಗೆ ಬಹುಮಾನ ನೀಡಿದರು.

ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕ ವೃಂದ ಹಾಗೂ ಎಸ್‌ಡಿಎಮ್‌ಸಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮಸ್ಥರು, ಮಹಿಳೆಯರು ಹಾಗೂ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿನೂತನ ಗೊಂಬೆ ನಾಟಕವು ಕಾರ್ಯಕ್ರಮಕ್ಕೆ ಹೊಸ ಮೆರಗು ನೀಡಿ ಪ್ರೇಕ್ಷಕರನ್ನು ರಾತ್ರಿ 12ರವರೆಗೆ ಪ್ರೇಕ್ಷಕರನ್ನು ಮನರಂಜಿಸಲಾಯಿತು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ