ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿ ಸಂತಸ ತಂದಿದೆ : ಶಾಸಕ

KannadaprabhaNewsNetwork |  
Published : Jul 07, 2025, 01:33 AM ISTUpdated : Jul 07, 2025, 02:15 PM IST
ಫೋಟೋ 6 ಎ, ಎನ್, ಪಿ 1 ಆನಂದಪುರದಲ್ಲಿ ಕಳೆದ ರಾತ್ರಿ ನಡೆದ ಮೊಹರಂ ಆಚರಣೆಯ ಸಂದರ್ಭದಲ್ಲಿ ಭೇಟಿ ನೀಡಿದ  ಶಾಸಕ ಗೋಪಾಲಕೃಷ್ಣ ಬೇಳೂರು. | Kannada Prabha

ಸಾರಾಂಶ

ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿಯಾಗಿದ್ದು ಸಂತಸ ತಂದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಆನಂದಪುರ: ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿಯಾಗಿದ್ದು ಸಂತಸ ತಂದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಶನಿವಾರ ರಾತ್ರಿ ಆನಂದಪುರದಲ್ಲಿ ಮೊಹರಂ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

ಸಿಗಂದೂರು ಸೇತುವೆಯ ನಿರ್ಮಾಣಕ್ಕೆ ಯಡಿಯೂರಪ್ಪನವರು ನೀಡಿದ ಕೊಡುಗೆ ಅಪಾರವಾದದ್ದು. ಈ ಭಾಗದ ಜನರ ಹೋರಾಟ, ಪಾದಯಾತ್ರೆಯಾ ಫಲವಾಗಿ, ಚೌಡೇಶ್ವರಿಯ ಆಶೀರ್ವಾದದಿಂದ ಸೇತುವೆ ನಿರ್ಮಾಣವಾಗಿದೆ. ಈ ಸೇತುವೆ ನಿರ್ಮಾಣಕ್ಕೆ ಯಡಿಯೂರಪ್ಪನವರು ನೀಡಿದ ಕೊಡುಗೆಯನ್ನು ನೆನಪಿಸಿಕೊಳ್ಳಬೇಕಾಗುತ್ತದೆ ಎಂದರು.

ಯಡಿಯೂರಪ್ಪ ಅವರು ಸಿಗಂದೂರು ದೇವಿಯ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಈ ಭಾಗದ ಜನರಿಗೆ ಹಾಗೂ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಸೇತುವೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದರು. ಹಾಗೆ ನುಡಿದಂತೆ ನಡೆದುಕೊಂಡಿದ್ದಾರೆ ಎಂದರು.

ಈ ಸೇತುವೆಗೆ ಸಿಗಂದೂರು ಶ್ರೀ ಚೌಡೇಶ್ವರಿ ಸೇತುವೆ ಎಂದು ಹೆಸರನ್ನು ಪ್ರಕಟಿಸಿದ್ದು ಸೂಕ್ತವಾಗಿದೆ. ಸೇತುವೆ ಲೋಕಾರ್ಪಣೆಯ ನಂತರ ಭಕ್ತಾದಿಗಳನ್ನು, ಪ್ರವಾಸಿಗರನ್ನು ಸಿಗಂದೂರಿಗೆ ಕರೆದೊಯ್ಯುತ್ತಿದ್ದ ಲಾಂಚ್ ಸ್ಥಗಿತಗೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ರೀತಿಯಲ್ಲಿ ಲಾಂಚ್ ವ್ಯವಸ್ಥೆಯನ್ನು ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸೋಮಶೇಖರ್ ಲೌಗೆರೆ, ಎನ್.ಉಮೇಶ್, ಗಜೇಂದ್ರ ಯಾದವ್, ಎಂಪಿಎಸ್ ಮುನ್ನ, ಲೋಕೇಶ್, ರೆಹಮತ್ತುಲ್ಲಾ, ಬಸವರಾಜ್, ಕಲೀಮುಲ್ಲಾ ಖಾನ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ