ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಅವರು ಬೀಳೂರನಗರದಲ್ಲಿ ಮಂಗಳವಾರ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಅವರ ಮನೆ ಮೇಲೆ ತಿರಂಗಾ ಧ್ವಜ ಹಾರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನ ನೆನಪಿಸಿ ಕೊಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ತಿಳಿಸಿದ್ದರಿಂದ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಈ ಅಭಿಮಾನವನ್ನು ಹಮ್ಮಿಕೊಂಡಿದ್ದೇವೆ ಎಂದರು.ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಹರ್ ಘರ್ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಆ.13 ರಿಂದ 15 ರವರೆಗೆ ಪ್ರತಿ ಮನೆಮೇಲೆ ರಾಷ್ಟ್ರ ಧ್ವಜ ಹಾರಿಸಿ, ದೇಶಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಕರೆ ನೀಡಿದರು.
---