ಬಳ್ಳಾರಿ: ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ನಗರದ ಐತಿಹಾಸಿಕ ಬೆಟ್ಟ ಹತ್ತಿ (ಕೋಟೆ) ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.
ನಗರದ ವಿವಿಧೆಡೆಯಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬೆಳ್ಳಂಬೆಳಗ್ಗೆಯೇ ಕೋಟೆಯತ್ತ ಉತ್ಸಾಹದ ಹೆಜ್ಜೆ ಹಾಕಿದರು. ಇದೇ ವೇಳೆ ರಾಷ್ಟ್ರಪರ ಘೋಷಣೆಗಳು ಹಾಗೂ ದೇಶಪ್ರೇಮ ವಾಕ್ಯಗಳು ಮೊಳಗಿದವು. ವಿದ್ಯಾರ್ಥಿಗಳ ಜೊತೆ ಸಾರ್ವಜನಿಕರು ಸಹ ಕೋಟೆ ಹತ್ತಿ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡು, ಸಂಭ್ರಮಿಸಿದರು.ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್. ಝುಬೇರ್ ಅವರು ಅಭಿಯಾನ ಕುರಿತು ಮಾತನಾಡಿ, ಯುವ ಪೀಳಿಗೆ ಸಾಧನೆಯ ಶಿಖರವನ್ನೇರಲು ಮಹನೀಯರ ಮೌಲ್ಯ, ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ದೇಶದ ಸ್ವಾತಂತ್ರ್ಯಕ್ಕಾಗಿ ಎಷ್ಟೋ ಮಹನಿಯರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟಿದ್ದಾರೆ. ಮಹಾನುಭಾವರ, ತ್ಯಾಗ ಬಲಿದಾನಗಳ ಪ್ರತೀಕವೇ ಸ್ವಾತಂತ್ರ್ಯ ಸಿಕ್ಕಿದೆ. ವಿದ್ಯಾರ್ಥಿಗಳು ಸ್ವತಂತ್ರ್ಯ ಹೋರಾಟಗಾರರ ಮೌಲ್ಯ ಬೆಳೆಸಿಕೊಂಡು, ದೇಶ ಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದರು.ಬೆಟ್ಟದ ಮೇಲೆ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರಗೀತೆ ಹಾಡಲಾಯಿತು. ಬೆಟ್ಟ ಹತ್ತುವ ಕಾರ್ಯಕ್ರಮದಲ್ಲಿ ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಕೆ. ಜಲಾಲಪ್ಪ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ವಸತಿ ನಿಲಯ ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಹರ್ ಘರ್ ತಿರಂಗಾ ಜಾಥಾಕ್ಕೆ ಚಾಲನೆಹರಪನಹಳ್ಳಿ: ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಹರ್ ಘರ್ ತಿರಂಗಾ ಜಾಥಾಕ್ಕೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಮಂಗಳವಾರ ಚಾಲನೆ ನೀಡಿದರು.ಜಾಥಾದಲ್ಲಿ ಶಾಲಾ ವಿದ್ಯಾರ್ಥಿಗಳು ತ್ರಿವರ್ಣ ಧ್ವಜದೊಂದಿಗೆ ದೇಶಭಕ್ತಿ ಗೀತೆ, ಸ್ವಾತಂತ್ರ್ಯ ದಿನಾಚರಣೆ ಕುರಿತು ಜಾಗೃತಿ ಮೂಡಿಸಿದರು. ಭುವನೇಶ್ವರಿ ಭಾವಚಿತ್ರದೊಂದಿಗೆ ಹರ್ ಘರ್ ತಿರಂಗಾ ಜಾಥಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ್ ಬಿ.ವಿ. ಗಿರೀಶಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಪುರಸಭಾ ಸದಸ್ಯರಾದ ಟಿ. ವೆಂಕಟೇಶ, ಉದ್ದಾರ ಗಣೇಶ, ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ, ಬಿಸಿಎಂ ಅಧಿಕಾರಿ ವಿಜಯಲಕ್ಷ್ಮೀ ಹತ್ತಿಕಾಳು, ಸಾರಿಗೆ ಘಟಕದ ವ್ಯವಸ್ಥಾಪಕಿ ಮಂಜುಳಾ, ಶಿಕ್ಷಣ ಮಹಾ ವಿದ್ಯಾಲಯದ ಆಡಳಿತಾಧಿಕಾರಿ ಚಿರಸ್ಥಹಳ್ಳಿ ರಾಜಶೇಖರ, ಎಇಇ ಕುಬೇಂದ್ರ ನಾಯ್ಕ, ಸಿಡಿಪಿಒ ಅಶೋಕ, ಸಮಾಜ ಕಲ್ಯಾಣಾಧಿಕಾರಿ ಗಂಗಪ್ಪ, ಪಿಎಸ್ ಐ ಶುಂಭುಲಿಂಗ, ಹಿರೇಮಠ, ಒ. ಮಹಾಂತೇಶ ಇತರರು ಪಾಲ್ಗೊಂಡಿದ್ದರು.