ಹರ್ ಘರ್ ತಿರಂಗಾ ದೇಶ ಭಕ್ತಿ ದ್ಯೋತಕ: ಸಂಸದ ಕಾರಜೋಳ

KannadaprabhaNewsNetwork | Published : Aug 15, 2024 1:54 AM

ಸಾರಾಂಶ

ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನ ಮಾಡಿರುವ ಹುತಾತ್ಮರನ್ನು ನೆನೆಯಬೇಕು ಎಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಪ್ರತಿ ಮನೆ ಮೇಲೂ ಧ್ವಜ ಹಾರಿಸಿ ದೇಶಪ್ರೇಮ ಮೆರೆಯಲು ಸೂಚಿಸದ ಹಿನ್ನೆಲೆ ರಾಷ್ಟ್ರವ್ಯಾಪಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ದೇಶದಲ್ಲಿರುವ ವಿವಿಧ ಜಾತಿಗಳು, ಕಲೆ, ಸಂಸ್ಕೃತಿ, ಭಾಷೆ ಇತ್ಯಾದಿ ವಿಷಯಗಳನ್ನು ಒಂದೇ ವೇದಿಕೆಯಲ್ಲಿ ರಾಷ್ಟ್ರಧ್ವಜದ ಮೂಲಕ ಕಾಣಲು ಸಾಧ್ಯವಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.

ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನಿವಾಸದ ಮೇಲೆ ಹರ್ ಘರ್ ತಿರಂಗಾ ಅಭಿಯಾನಯಡಿ ಧ್ವಜ ಹಾರಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಬೆಳೆಯಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನ ಮಾಡಿರುವ ಹುತಾತ್ಮರನ್ನು ನೆನೆಯಬೇಕು ಎಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಪ್ರತಿ ಮನೆ ಮೇಲೂ ಧ್ವಜ ಹಾರಿಸಿ ದೇಶಪ್ರೇಮ ಮೆರೆಯಲು ಸೂಚಿಸದ ಹಿನ್ನೆಲೆ ರಾಷ್ಟ್ರವ್ಯಾಪಿ ಕಾರ್ಯಕ್ರಮ ನಡೆಯುತ್ತಿದೆ ಎಂದರು.

ದೇಶವನ್ನು ಸ್ವಾತಂತ್ರ್ಯಗೊಳಿಸಲು ತಮ್ಮ ಪ್ರಾಣ ಪಣಕ್ಕಿಟ್ಟು ಹುತಾತ್ಮರಾದ ಸೈನಿಕರಿಗೆ ಗೌರವ ಸಮರ್ಪಣೆ ಮಾಡುವ ಸಲುವಾಗಿ ಎಲ್ಲಾ ಮನೆಗಳ ಮೇಲೆ ಆಗಸ್ಟ್ 15ರಂದು ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಾಚರಣೆ ಮಾಡಬೇಕು. ತಳಿರು ತೋರಣಗಳಿಂದ ಸುಸಜ್ಜಿತಗೊಳಿಸುವ ಮೂಲಕ ಹಬ್ಬದ ವಾತಾವರಣ ಸೃಷ್ಟಿಸಬೇಕು ಹಾಗೂ ಬಟ್ಟೆಯಿಂದ ಅಥವಾ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಲಾದ ಬಾವುಟಗಳನ್ನು ಮಾತ್ರ ಹಾರಿಸಲು ಮನವಿ ಮಾಡಿದರು.

ಮಾಜಿ ಶಾಸಕ ಜಿ.ಎಚ್‍.ತಿಪ್ಪಾರೆಡ್ಡಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ ಬಂದು 78 ವರ್ಷಗಳಾಗಿದೆ. ನಮ್ಮ ಜನತೆ ಬ್ರಿಟಿಷರನ್ನು ತೊಲಗಿಸಿ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಅನೇಕರು ತಮ್ಮ ಪ್ರಾಣ ತೆತ್ತಿದ್ದಾರೆ. ಸ್ವಾತಂತ್ರ ಭಾರತ ನೀಡಿದ್ದಾರೆ. ಪ್ರಧಾನ ಮಂತ್ರಿಯವರು ಕರೆಯನ್ನು ನೀಡಿದ್ದಾರೆ. ಕನ್ಯಾಕುಮಾರಿಯಿಂದ ಹಿಡಿದು ಹಿಮಾಲಯದವರೆಗೂ ಪ್ರತಿಯೊಬ್ಬರ ಮನೆಯ ಮೇಲೆ ಸರ್ಕಾರಿ ಕಚೇರಿಯ ಮೇಲೆ ದೇಶದ 140 ಕೋಟಿ ಜನರ ಮನೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವುದರ ಮೂಲಕ ದೇಶ ಭಕ್ತಿಯನ್ನು ತೋರಿಸುವ ಕಾರ್ಯ ಮಾಡಬೇಕಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಸುರೇಶ್ ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜನ್, ಮುಖಂಡರಾದ ಡಾ.ಸಿದ್ಧಾರ್ಥ, ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್, ಶಿವಣ್ಣಚಾರ್, ಶೇಷಣ್ಣರೆಡ್ಡಿ, ನಾಗರಾಜ್, ನಗರಸಭಾ ಸದಸ್ಯರಾದ ಹರೀಶ್ ಬಿ.ಸುರೇಶ್, ಮಾಜಿ ಸದಸ್ಯರಾದ ರವಿಶಂಕರ್, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾರೆಡ್ಡಿ, ಕಾಂಚನ, ರೇಖಾ, ಭಾರತಿ, ವೀಣಾ, ಶಾಂತಮ್ಮ, ಪವಿತ್ರಾ, ರಾಗಿಣಿ ಇದ್ದರು.

Share this article