ಹರಪನಹಳ್ಳಿ: ಪಟ್ಟಣದ ಪುರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಪುರಸಭೆಯ ನೂತನ ಸ್ಥಾಯಿ ಸಮಿತಿಯನ್ನು ರಚನೆ ಮಾಡಲಾಯಿತು.
ಸ್ಥಾಯಿ ಸಮಿತಿ ಸದಸ್ಯರಾಗಿ ಅಬ್ದುಲ್ ರೆಹಮಾನ್, ಗೊಂಗಡಿ ನಾಗರಾಜ, ಉದ್ದಾರ ಗಣೇಶ, ತಾರಾ ಹನುಮಂತಪ್ಪ, ಲಾಟಿ ದಾದಾಪೀರ, ಜಾಕೀರ ಹುಸೇನ್ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಪುರಸಭೆ ಹಿರಿಯ ಸದಸ್ಯ ಎಂ.ವಿ. ಅಂಜಿನಪ್ಪ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರಿಗೆ ಅಭಿನಂದಿಸಿ ಮಾತನಾಡಿ, ಈ ಹಿಂದೆ ಪುರಸಭೆ ಅಧ್ಯಕ್ಷರ ಮೀಸಲಾತಿ ವಿಚಾರದಲ್ಲಿ ಸದಸ್ಯರು ಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದ ಸಂದರ್ಭದಲ್ಲಿ ಶಾಸಕರು ಮತ್ತು ನಮ್ಮ ಬಗ್ಗೆ ಪಕ್ಷದಲ್ಲಿನ ಕೆಲವರು ಟೀಕಿಸಿ ರಾಜೀನಾಮೆಗೆ ಒತ್ತಾಯಿಸಿದ್ದರು ಎಂದರು.ರಾಜಕೀಯ ಮೀಸಲಾತಿ ಕೇಳುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಹಕ್ಕು ಇದೆ. ನಾವು ಅದನ್ನು ಪ್ರಶ್ನೆ ಮಾಡುವುದಕ್ಕೆ ಆಗಲ್ಲ ಎಂದ ಅವರು, ಕೋಟ್ ಮೊರೆ ಹೋಗಿದ್ದ ಸದಸ್ಯರು ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಕೇಸ್ ವಾಪಸ್ ಪಡೆದಿದ್ದರಿಂದ ತಡೆಯಾಜ್ಞೆ ತೆರವುಗೊಂಡಿತು. ಆಗ ಶಾಸಕರ ಮಾರ್ಗದರ್ಶನದಲ್ಲಿ ಅಲ್ಪಸಂಖ್ಯಾತರಿಗೆ ಆವಕಾಶ ಮಾಡಿ ಕೊಡಲಾಯಿತು ಎಂದರು.
ಈಗಾಗಲೇ ಪಟ್ಟಣಕ್ಕೆಎರಡನೇ ಹಂತದ ಕುಡಿಯುವ ನೀರಿನ ಯೋಜನೆ ಟೆಂಡರ್ ಹಂತಕ್ಕೆ ಬಂದಿರುವುದರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಅವರು ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದಾರ್ಜೆಗೆರಿಸಲು ಪ್ರಯತ್ನಿಸಬೇಕೆಂದು ಕೋರಿದರು.
ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಪುರಸಭೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರಿಗೆ ಶುಭ ಕೋರಿದರು.