ರಾಜಮನೆತನಕ್ಕೆ ಕೈ ಸರ್ಕಾರದಿಂದ ಕಿರುಕುಳ: ಎಚ್ಡಿಕೆ

KannadaprabhaNewsNetwork |  
Published : Oct 29, 2024, 12:50 AM IST
28ಕೆಆರ್ ಎಂಎನ್ 2.ಜೆಪಿಜಿಚನ್ನಪಟ್ಟಣ ಕ್ಷೇತ್ರದ ದೇವರ ಹೊಸಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದರು. | Kannada Prabha

ಸಾರಾಂಶ

ಚನ್ನಪಟ್ಟಣ: ಮೈಸೂರು ರಾಜ ಮನೆತನದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ಸಾಧಿಸುತ್ತಿದೆ. ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಚನ್ನಪಟ್ಟಣ: ಮೈಸೂರು ರಾಜ ಮನೆತನದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ಸಾಧಿಸುತ್ತಿದೆ. ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೂಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಚಾಮುಂಡೇಶ್ವರಿ ತಾಯಿ ಅರಸು ಮನೆತನದ ದೇವತೆ. ಅವರ ಕುಟುಂಬದ ಆರಾಧ್ಯದೈವ. ಅವರ ಮನೆತನದಿಂದ ದೇವರನ್ನು ದೂರ ಮಾಡುವ ಕೇಡಿನ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಟೀಕಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನು ರಾಜಮನೆತನ ಬಹಳ ಉತ್ತಮವಾಗಿ ನಿರ್ವಹಣೆ ಮಾಡುತ್ತಿತ್ತು. ತಾಯಿಯ ಸನ್ನಿಧಾನದಲ್ಲಿ ನಡೆಯುತ್ತಿದ್ದ ಕೈಂಕರ್ಯಗಳನ್ನು ಶ್ರದ್ಧಾ ಭಕ್ತಿಗಳಿಂದ ನೋಡಿಕೊಳ್ಳುತ್ತಿತ್ತು. ಅಂತಹ ಕುಟುಂಬಕ್ಕೆ ಧಕ್ಕಿದ್ದ ದೇವರ ಸೇವೆ ಅವಕಾಶವನ್ನು ಸಿದ್ದರಾಮಯ್ಯ ಸರ್ಕಾರ ಕಿತ್ತುಕೊಂಡಿದೆ ಎಂದು ಆರೋಪಿಸಿದರು.

ಚಾಮುಂಡೇಶ್ವರಿ ಪುಣ್ಯಕ್ಷೇತ್ರ ಅರಸರ ಉಸ್ತುವಾರಿಯಲ್ಲಿಯೇ ಇತ್ತು. ಆ ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಕುಟುಂಬ ಸಾಕಷ್ಟು ಕೆಲಸ ಮಾಡಿದೆ. ನೀರಾವರಿ, ಶಿಕ್ಷಣ, ಕೈಗಾರಿಕೆಗಳ ಸ್ಥಾಪನೆ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮಹಾರಾಜರು ಅನನ್ಯ ಕೊಡುಗೆ ನೀಡಿದ್ದಾರೆ. ಅಂತಹ ಕುಟುಂಬಕ್ಕೆ ಸಿದ್ದರಾಮಯ್ಯ ಸರ್ಕಾರ ಇನ್ನಿಲ್ಲದ ಕಿರುಕುಳ ಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಸದ ಯದುವೀರ್ ಒಡೆಯರ್ ಉಪಸ್ಥಿತರಿದ್ದರು.

28ಕೆಆರ್ ಎಂಎನ್ 2.ಜೆಪಿಜಿ

ಚನ್ನಪಟ್ಟಣ ಕ್ಷೇತ್ರದ ದೇವರ ಹೊಸಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ನಿಖಿಲ್ ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!