ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ

KannadaprabhaNewsNetwork |  
Published : Feb 26, 2025, 01:04 AM IST
ಭದ್ರಾವತಿ ನಗರದ ಇಕ್ವಿಟಾಸ್ ಫೈನಾನ್ಸ್ ಕಛೇರಿಯ ಕ್ರೂರ ವರ್ತನೆ ಖಂಡಿಸಿ ಮಂಗಳವಾರ ರೈತರು ಲೋಕಾಯುಕ್ತ ಜಿಲ್ಲಾ ನಿರೀಕ್ಷಕ ವೀರಬಸಪ್ಪ ಕುಶಾಲಪುರ ಅವರಿಗೆ ದೂರು ಸಲ್ಲಿಸಿದರು.  | Kannada Prabha

ಸಾರಾಂಶ

ಭದ್ರಾವತಿ: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ, ದೌರ್ಜನ್ಯ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಗರದ ಮೈಕ್ರೋ ಫೈನಾನ್ಸ್ ಕಂಪನಿಯೊಂದು ರೈತ ಕುಟುಂಬವನ್ನು ಸುಮಾರು ೧ ತಿಂಗಳ ಕಾಲ ಬೀದಿಗೆ ತಳ್ಳಿರುವ ಘಟನೆ ಬೆಳಕಿಗೆ ಬಂದಿದೆ. ಮತ್ತೊಂದೆಡೆ ಇದರ ವಿರುದ್ಧ ರೈತ ಸಂಘ ಧ್ವನಿ ಎತ್ತುವ ಮೂಲಕ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಲ್ಲಿ ಮುಂದಾಗಿದೆ.

ಭದ್ರಾವತಿ: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ, ದೌರ್ಜನ್ಯ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಗರದ ಮೈಕ್ರೋ ಫೈನಾನ್ಸ್ ಕಂಪನಿಯೊಂದು ರೈತ ಕುಟುಂಬವನ್ನು ಸುಮಾರು ೧ ತಿಂಗಳ ಕಾಲ ಬೀದಿಗೆ ತಳ್ಳಿರುವ ಘಟನೆ ಬೆಳಕಿಗೆ ಬಂದಿದೆ. ಮತ್ತೊಂದೆಡೆ ಇದರ ವಿರುದ್ಧ ರೈತ ಸಂಘ ಧ್ವನಿ ಎತ್ತುವ ಮೂಲಕ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಲ್ಲಿ ಮುಂದಾಗಿದೆ.

ತಾಲೂಕಿನ ಆಗರದಹಳ್ಳಿ ಗ್ರಾಮದ ನಿವಾಸಿ, ಭೋವಿ ಜನಾಂಗದ ಕೃಷಿ ಕೂಲಿ ಕಾರ್ಮಿಕ ಚೌಡಪ್ಪ ನಗರದ ಇಕ್ವಿಟಾಸ್ ಫೈನಾನ್ಸ್‌ನಿಂದ ಸುಮಾರು ೨ ಲಕ್ಷ ರು. ಸಾಲ ೨೦೨೧ರಲ್ಲಿ ಪಡೆದಿದ್ದು, ಈಗಾಗಲೇ ಸಾಲದ ೯ ಕಂತುಗಳನ್ನು ಫೈನಾನ್ಸ್‌ಗೆ ಪಾವತಿಸಿದ್ದಾರೆ. ಈ ನಡುವೆ ಬಾಕಿ ಉಳಿದ ಹಣ ವಸೂಲಿಗಾಗಿ ಫೈನಾನ್ಸ್‌ ನವರು ಒಂದು ತಿಂಗಳ ಹಿಂದೆ ಚೌಡಪ್ಪ ಹಾಗೂ ಸಹೋದರರಿಗೆ ಸೇರಿದ ೩೦*೫೦ ಅಡಿ ವಿಸ್ತೀರ್ಣದ ಎರಡು ಮನೆಗಳಿಗೆ ಬೀಗ ಜಡಿದು ಕುಟುಂಬದ ಸುಮಾರು ೧೫ ಮಂದಿ ಬೀದಿಯಲ್ಲಿ ಕಾಲ ಕಳೆಯುವಂತೆ ಮಾಡಿದ್ದು, ಶಾಲಾ ಕಟ್ಟಡ, ದೇವಸ್ಥಾನಗಳಲ್ಲಿ ಕುಟುಂಬಸ್ಥರು ಉಳಿದುಕೊಂಡು ಜೀವನ ಸಾಗಿಸಿರುವುದು ತಿಳಿದು ಬಂದಿದೆ. ಫೈನಾನ್ಸ್ ಕಂಪನಿಯ ಈ ಕ್ರೂರ ವರ್ತನೆಯನ್ನು ಖಂಡಿಸಿ ರೈತ ಸಂಘದಿಂದ ಇದರ ವಿರುದ್ಧ ಹೋರಾಟ ಆರಂಭಿಸಿದ್ದು, ಮೊದಲ ಹಂತದಲ್ಲಿ ಕಳೆದ ೨ ದಿನಗಳ ಹಿಂದೆ ಫೈನಾನ್ಸ್ ಕಂಪನಿಯವರು ಎರಡು ಮನೆಗಳಿಗೆ ಜಡಿದಿರುವ ಬೀಗ ತೆರವುಗೊಳಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಫೈನಾನ್ಸ್ ಕಚೇರಿಯಲ್ಲಿ ಪ್ರತಿಭಟನೆ : ಮಂಗಳವಾರ ನಗರದ ಇಕ್ವಿಟಾಸ್ ಫೈನಾನ್ಸ್ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ ರೈತರು, ಫೈನಾನ್ಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಸರ್ಕಾರ ಕಾಯ್ದೆ ಜಾರಿಗೆ ತಂದರೂ ಬಡ ರೈತರ ಮೇಲೆ ಕಿರುಕುಳ ಮುಂದುವರೆಯುತ್ತಿರುವುದು ಖಂಡನೀಯ. ತಕ್ಷಣ ಜಿಲ್ಲಾಧಿಕಾರಿಗಳು ಗಮನ ಹರಿಸುವ ಮೂಲಕ ಇಂತಹ ಫೈನಾನ್ಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಅಲ್ಲದೆ ` ಮೈಕ್ರೋ ಫೈನಾನ್ಸ್ ಕಂಪನಿಗಳೇ ಊರೊಳಗೆ ಕಾಲಿಟ್ಟರೆ ನಿಮಗೆ ಉಳಿಗಾಲವಿಲ್ಲ'''''''' ಎಂಬ ಘೋಷ ವಾಕ್ಯದೊಂದಿಗೆ ಎಚ್ಚರಿಕೆ ದಿನವಾಗಿ ಆಚರಿಸಿ ಕಚೇರಿಗೆ ನೋಟಿಸ್ ಅಂಟಿಸಲಾಯಿತು. ಲೋಕಾಯುಕ್ತರಿಗೆ ದೂರು : ಪ್ರತಿಭಟನೆಗೂ ಮೊದಲು ರೈತರು ತಾಪಂ ಸಭಾಂಗಣದಲ್ಲಿ ಲೋಕಾಯುಕ್ತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಹವಾಲು ಸ್ವೀಕಾರ ಸಭೆಯಲ್ಲಿ ಲೋಕಾಯುಕ್ತ ಜಿಲ್ಲಾ ನಿರೀಕ್ಷಕ ವೀರಬಸಪ್ಪ ಕುಶಾಲಪುರ ಅವರಿಗೆ ದೂರು ಸಲ್ಲಿಸಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದ್ದು, ಸರ್ಕಾರ ಕಾಯ್ದೆ ಜಾರಿಗೆ ತಂದರೂ ಕಿರುಕುಳ ನಿಲ್ಲುತ್ತಿಲ್ಲ. ಇಕ್ವಿಟಾಸ್ ಫೈನಾನ್ಸ್ ಕ್ರೂರ ವರ್ತನೆ ಕುರಿತು ಫೆ.೪ರಂದು ತಹಸೀಲ್ದಾರ್ ಗಮನಕ್ಕೆ ತರಲಾಗಿದೆ. ಆದರೆ ತಾಲೂಕು ಆಡಳಿತ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಇದಕ್ಕೆ ಸ್ಪಂದಿಸಿದ ವೀರಬಸಪ್ಪ ಕುಶಾಲಪುರ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿದರು. ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ರೈತ ಪ್ರಮುಖರಾದ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ, ಹಿರಿಯಣ್ಣಯ್ಯ, ಮಂಜುನಾಥ್, ಡಿ.ವಿ.ವೀರೇಶ್, ಚಂದ್ರಪ್ಪ, ರಂಗಪ್ಪ, ವೀರೇಶ ಸೇರಿದಂತೆ ಗ್ರಾಮದ ಮುಖಂಡರು, ರೈತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ