ಇ.ಡಿ. ಸಮನ್ಸ್‌ ಮೂಲಕ ಕಿರುಕುಳ: ಡಿಕೆಶಿ

KannadaprabhaNewsNetwork |  
Published : Dec 07, 2025, 03:00 AM IST
ಡಿಕೆಶಿ | Kannada Prabha

ಸಾರಾಂಶ

ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ ಕಾರಣಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ.) ನಮಗೆ ಸಮನ್ಸ್‌ ನೀಡಿದ್ದು, ಆ ಮೂಲಕ ಕಿರುಕುಳ ನೀಡಲಾಗುತ್ತಿದೆ. ಇದನ್ನು ಖಂಡಿಸುತ್ತೇನೆ. ಈ ಕುರಿತು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ ಕಾರಣಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ.) ನಮಗೆ ಸಮನ್ಸ್‌ ನೀಡಿದ್ದು, ಆ ಮೂಲಕ ಕಿರುಕುಳ ನೀಡಲಾಗುತ್ತಿದೆ. ಇದನ್ನು ಖಂಡಿಸುತ್ತೇನೆ. ಈ ಕುರಿತು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಿದ್ದೇವೆ. ಯಾವುದೇ ಮುಚ್ಚುಮರೆ ಮಾಡಿಲ್ಲ. ಆದರೂ ಇ.ಡಿ. ಚಾರ್ಜ್‌ಶೀಟ್‌ ಹಾಕಿರುವುದು ಏತಕ್ಕಾಗಿ ಎಂಬುದು ತಿಳಿದಿಲ್ಲ. ಇನ್ನು, ಇದಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾನೂ ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದರು.

ನನಗೆ ಮತ್ತು ನನ್ನ ಸಹೋದರ ಡಿ.ಕೆ.ಸುರೇಶ್‌ಗೆ ಕಳೆದ ಶುಕ್ರವಾರ ಇ.ಡಿ. ಸಮನ್ಸ್‌ ನೀಡಿದೆ. ಈಗಾಗಲೇ ನಾವು ಈ ಹಿಂದೆಯೇ ಉತ್ತರ ನೀಡಿದ್ದೇವೆ. ಆದರೂ, ನಮಗೆ ಸಮನ್ಸ್‌ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿ.19ರ ಒಳಗೆ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ ಎಂದು ತಿಳಿಸಿದರು.

ನಾವು ತೆರಿಗೆ ಪಾವತಿಸುತ್ತಿದ್ದು, ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ. ಕಿರುಕುಳ ನೀಡುವ ಉದ್ದೇಶದಿಂದಲೇ ಪಿಎಂಎಲ್‌ಎ ಪ್ರಕರಣ ದಾಖಲಿಸಿದ್ದರು. ನಂತರ ಅದು ಏನಾಯಿತು ಎಂಬುದು ತಿಳಿದಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಗೊಂದಲ ಮೂಡಿಸುವ ಉದ್ದೇಶ ಇದರ ಹಿಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಷನಲ್‌ ಹೆರಾಲ್ಡ್‌ ಮತ್ತು ಯಂಗ್‌ ಇಂಡಿಯಾ ನಮ್ಮ ಕಾಂಗ್ರೆಸ್‌ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್‌ಗಳಿಂದ ದೇಣಿಗೆ ನೀಡಿದ್ದೆವು. ನಮ್ಮಂತೆ ಅನೇಕ ಜನ ಸಹಾಯ ಮಾಡಿದ್ದಾರೆ. ಡಿ.ಕೆ.ಸುರೇಶ್‌ ಸಂಸದರಾದ ಸಮಯದಲ್ಲಿ ಒಂದಷ್ಟು ಹಣ ದೇಣಿಗೆ ನೀಡಿದ್ದರು. ಇ.ಡಿ. ನೋಟಿಸ್‌ ಅನ್ನು ವಿವರವಾಗಿ ತಿಳಿದುಕೊಂಡು ಕಾನೂನಾತ್ಮಕವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡ್ರಗ್ಸ್‌ಗಾಗಿ ಜೈಲರ್, ಸಿಬ್ಬಂದಿ ಮೇಲೆ ಕೈದಿಗಳ ಹಲ್ಲೆ!
ಬಾಬಾ ಸಾಹೇಬ್‌ ಅಂಬೇಡ್ಕರ್‌ ಅಪರೂಪದ ನಾಯಕ: ಸಿಎಂ