ಮಾನವ ಕುಲವೊಂದೇ ಎಂಬ ವಿಶಾಲ ಭಾವ ಬೆಳೆಸಿಕೊಳ್ಳಿ

KannadaprabhaNewsNetwork |  
Published : Nov 30, 2026, 02:15 AM IST
62 | Kannada Prabha

ಸಾರಾಂಶ

ಬುದ್ಧ, ಬಸವ, ವಾಲ್ಮೀಕಿ, ಕನಕದಾಸ, ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್

ಕನ್ನಡಪ್ರಭ ವಾರ್ತೆ ಹುಣಸೂರುಸಮಾಜದಲ್ಲಿ ಜಾತಿ, ಮತ, ಪಂಥ, ವರ್ಣ ಹಾಗೂ ವರ್ಗಗಳ ಬೇಧಭಾವವಿಲ್ಲದೆ ಮಾನವರೆಲ್ಲರೂ ಒಂದೇ, ಮನುಷ್ಯ ಕುಲವೊಂದೇ ಎಂಬ ವಿಶಾಲ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಕರೆ ನೀಡಿದರು.ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದಲ್ಲಿ ಭಾನುವಾರ ಶ್ರೀ ಚಿಕ್ಕದೇವಮ್ಮ ಹಾಗೂ ಭೈರವೇಶ್ವರ ಸ್ವಾಮಿ ದೇವಸ್ಥಾನದ ಉದ್ಘಾಟನೆ ಮತ್ತು ದೇವಾಲಯದ ಗೋಪುರಕ್ಕೆ ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಬುದ್ಧ, ಬಸವ, ವಾಲ್ಮೀಕಿ, ಕನಕದಾಸ, ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಮಹನೀಯರು ಕಂಡ ಸಮಾನತೆ, ಸತ್ಯ, ಪ್ರಾಮಾಣಿಕತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕು ಎಂದರು.ಸಮಾಜದಲ್ಲಿರುವ ಅಸಮಾನತೆ ಮತ್ತು ಮೇಲು-ಕೀಳೆಂಬ ಮನೋಭಾವವನ್ನು ಹೋಗಲಾಡಿಸಿ ಪ್ರತಿಯೊಬ್ಬರಿಗೂ ಗೌರವ, ಸಮಾನ ಅವಕಾಶ ದೊರೆಯುವಂತಹ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.ಮೇಲು- ಕೀಳೆಂಬ ಭಾವನೆಗಳನ್ನು ತೊಡೆದುಹಾಕಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡುವ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ದೇವಾಲಯಗಳು ಕೇವಲ ಪೂಜಾ ಸ್ಥಳಗಳಲ್ಲ. ಅವು ಮನುಷ್ಯನ ಮಾನಸಿಕ ನೆಮ್ಮದಿ, ಆಧ್ಯಾತ್ಮಿಕ ಚಿಂತನೆ ಹಾಗೂ ಧಾರ್ಮಿಕ ಭಾವನೆಗಳನ್ನು ಬೆಳೆಸುವ ಕೇಂದ್ರಗಳಾಗಿವೆ. ಜನರಲ್ಲಿ ಭಕ್ತಿ ಮತ್ತು ಶ್ರದ್ಧೆಯ ಜೊತೆಗೆ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಕೋಮು ಸೌಹಾರ್ದತೆ ಬೆಳೆಸುವಲ್ಲಿ ದೇವಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.ಧಾರ್ಮಿಕ ಚಿಂತನೆಗಳ ಜೊತೆಗೆ ಸಮಾಜದಲ್ಲಿ ಅಧಃಪತನದತ್ತ ಸಾಗುತ್ತಿರುವ ನೈತಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾಡಿನ ಮಠಾಧೀಶರು ಹಾಗೂ ಸ್ವಾಮೀಜಿಗಳ ಪಾತ್ರ ಅತ್ಯಂತ ಮಹತ್ವದ್ದು. ಮಾನವೀಯ ಮೌಲ್ಯಗಳ ಸಂರಕ್ಷಣೆ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸುವಂತೆ ಮಾಡುವಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನದ ಗುರುಪೀಠದ ಡಾ. ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗಾವಡಗೆರೆ ಗುರುಲಿಂಗ ಜಂಗಮ ದೇವರ ಮಠದ ಶ್ರೀ ನಟರಾಜ ಸ್ವಾಮೀಜಿ ಹಾಗೂ ಪಡುವಲ ಮಠದ ಮಹದೇವ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ವೇಳೆ ಮಾಜಿ ಶಾಸಕ ಎಚ್.ಪಿ. ಮಂಜುನಾಥ್, ಶ್ರೀಗಳ ಮೂಲಕ ದೇವಾಲಯಕ್ಕೆ ಬೆಳ್ಳಿ ಕಡಗ ಅರ್ಪಿಸಿದರು. ಬಿಇಒ ಕಾಳನಾಯಕ, ಬಿಳಿಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರೇಮಕುಮಾರ್, ಜಿಪಂ ಮಾಜಿ ಸದಸ್ಯ ಬಿಳಿಗೆರೆ ಮಂಜು, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಲ್ಕುಣಿಕೆ ರಾಘು, ತಾಲೂಕು ಕಸಾಪ ಅಧ್ಯಕ್ಷ ಎಚ್.ಕೆ. ಮಹದೇವ್, ಮುಖಂಡರಾದ ಅಣ್ಣಯ್ಯನಾಯಕ ಹೊನ್ನಪ್ಪ, ಶಿವಣ್ಣ, ಹರವೆ ಶ್ರೀಧರ್, ಮರಿನಾಯ್ಕ, ರಾಜಣ್ಣ, ಶಿವಣ್ಣ, ರಾಮೇಗೌಡ, ಈಶ್ವರ್, ಮಲ್ಲಿಕಾರ್ಜುನ, ಉಪನ್ಯಾಸಕ ಲೋಕೇಶ್, ಶಾಂತೇಗೌಡ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಂಪಿಯ ಕಲ್ಲಿನ ರಥದ ಮೂಲ ಗೋಪುರ ಮರಸೃಷ್ಟಿ
ಆಂಧ್ರದ 4 ಟಿಎಂಸಿ ನೀರು ರಾಜ್ಯದ ಬೆಳೆಗಳಿಗೆ ಒದಗಿಸಲು ಎಚ್ಡಿಕೆಗೆ ಮನವಿ