ಕನ್ನಡಪ್ರಭ ವಾರ್ತೆ ಮಸ್ಕಿ
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ಸಿಂಧನೂರು, ನ್ಯಾಯವಾದಿಗಳ ಸಂಘ ಮಸ್ಕಿಯ ನೇತೃತ್ವದಲ್ಲಿ ನಡೆದ ಮಕ್ಕಳ ದಿನಾ ಚರಣೆ ಹಾಗೂ ಕಾನೂನು ಸೇವಾ ದಿನ ನಿಮಿತ್ತ ‘ಕಾನೂನು ಅರಿವು-ನೆರವು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಕಲೆತ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಸ್ಥಾನದಲ್ಲಿದ್ದಾರೆ. ಅವರ ಕಠಿಣ ಪರಿಶ್ರಮದಿಂದ ಮಾತ್ರ ಇದು ಸಾಧ್ಯವಾಗಿದೆ ಎಂದರಲ್ಲದೆ, ಸಾಮಾಜಿಕ ಜಾಲಾತಾಣದಲ್ಲಿ ಸಮಯ ಕಳೆಯದೆ ಓದಿನ ಕಡೆ ಹೆಚ್ಚು ಗಮನಕೊಟ್ಟು ಸಾಧನೆಯ ಮೆಟ್ಟಲು ಹತ್ತಬೇಕು ಎಂದು ತಿಳಿಸಿದರು.
ಜೆಎಂಎಫ್‌ಸಿ ಕೋರ್ಟ್ ನ್ಯಾಯಾಧೀಶ ಅಚ್ಚಪ್ಪ ದೊಡ್ಡ ಬಸವರಾಜ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ನೆರವು ಸಿಗಬೇಕು ಅನ್ನುವ ಉದ್ದೇಶದಿಂದ ಕಾನೂನು ಪ್ರಾಧಿಕಾರದಿಂದ ಉಚಿತ ಕಾನೂನು ಸಮಿತಿ ರಚನೆಯಾಗಿದೆ ಎಂದರು.ಅಲ್ಲದೆ, ಪೊಲೀಸ್ ಇಲಾಖೆ ಹೆಲ್ಮೆಟ್ ಹಾಕಿ ಎಂದು ಪ್ರತಿ ನಿತ್ಯ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಆದರೂ ಸಹ ಬಹಳಷ್ಟು ಅಪಘಾತಗಳು ನಡೆದು ಪ್ರಾಣಾ ಹಾನಿಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.