- ನೀವಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ನೀವೇ: ಮಲ್ಲಿಕಾರ್ಜುನ ಆರೋಪ - - -
- ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಕ್ಷೇತ್ರದಲ್ಲೇ 4500 ಮತ ಕಾಂಗ್ರೆಸ್‌ಗೆ ಲೀಡ್ ಕೊಡಿಸಿದ್ದೀರೆಂದು ಟೀಕೆ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತು ಮಾಡಾಳು ಮಲ್ಲಿಕಾರ್ಜುನ್ ಬಿಜೆಪಿ ಮುಖಂಡರಾಗಿದ್ದು, ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ್ ಅವರುಗಳ ವಿರುದ್ಧ ಮಾಧ್ಯಮಗಳಲ್ಲಿ ಲಘುವಾಗಿ ಮಾತನಾಡಿದ್ದಾರೆ. ಇದು ಅಕ್ಷಮ್ಯ ಎಂದು ಚನ್ನಗಿರಿ ತಾಲೂಕು ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ತಿಪ್ಪಗೊಂಡನಹಳ್ಳಿ ಮಲ್ಲಿಕಾರ್ಜುನ್ ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಬಿ.ಪಿ ಹರೀಶ್ ಅವರೇ, ನಿವೇನು ಸಾಚಾ ಆಗಿದ್ದೀರಾ? ನೀವಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ನೀವೇ ಆಗಿದ್ದೀರಿ. ಶಾಸಕರಾಗಿ ಪ್ರಚಾರ ಮಾಡುವ ಸಂದರ್ಭ 25 ಸಾವಿರ ಮತಗಳ ಲೀಡ್ ಕೊಡುತ್ತೇವೆ ಎಂದು ಭಾಷಣ ಮಾಡುತ್ತಾ, ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಕ್ಷೇತ್ರದಲ್ಲೇ 4500 ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಲೀಡ್ ಕೊಡಿಸಿದ್ದೀರಿ ಎಂದು ಹರಿಹಾಯ್ದರು.
ನೀವು ಈ ಹಿಂದೆ ಕಾಂಗ್ರೆಸ್ ಗೆ ಹೋಗಿ ವಾಪಸ್ ಬಂದವರು. ನಮ್ಮ ನಾಯಕ ಮಾಡಾಳು ಮಲ್ಲಿಕಾರ್ಜುನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿ, 63 ಸಾವಿರ ಮತಗಳನ್ನು ಪಡೆದವರು ನಮ್ಮ ಸ್ವಾಭಿಮಾನಿ ಬಳಗದ ಕಾರ್ಯಕರ್ತರ ಪರಿಶ್ರಮದ ಮೇಲೆ. ಲೋಕಸಭಾ ಚುನಾವಣೆಯುಲ್ಲಿ ಕಾರ್ಯಕರ್ತರು, ಮುಖಂಡರು, ಜನಪ್ರತಿನಿಧಿಗಳು ಹಾಗೂ ಬಿಜೆಪಿ ಪಕ್ಷದ ಎಲ್ಲರೂ ಪ್ರಾಮಾಣಿಕವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ. ಅದರ ಪ್ರತಿಫಲವಾಗಿ ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ 73 ಸಾವಿರ ಮತಗಳನ್ನು ಕೊಡಿಸಿದ್ದೇವೆ. ಇದು ನಮ್ಮ ಕಾರ್ಯಕರ್ತರ ಪರಿಶ್ರಮದಿಂದ ಆಗಿದೆ ಎಂದು ಸಮರ್ಥಿಸಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಮುಖಂಡರಾದ ಪುರಸಭಾ ಸದಸ್ಯ ಪಟ್ಲಿ ನಾಗರಾಜ್, ಚಿಕ್ಕೊಲಿಕೆರೆ ಸಂಗಮೇಶ್, ಸಂತೆಬೆನ್ನೂರು ಬಸವರಾಜ್, ದಿಗ್ಗೇನಹಳ್ಳಿ ನಾಗರಾಜ್, ಬಿಲ್ಲಹಳ್ಳಿ ಪರಮೇಶ್, ಗಂಗಗೊಂಡನಹಳ್ಳಿ ಜಗದೀಶ್, ಮಲಹಾಳ್ ಕುಮಾರ್, ಉಮೇಶ್ ಉಪಸ್ಥಿತರಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಚನ್ನಗಿರಿ ತಾಲೂಕು ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ತಿಪ್ಪಗೊಂಡನಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿದರು. ಪುರಸಭಾ ಸದಸ್ಯ ಪಟ್ಲಿ ನಾಗರಾಜ್, ಚಿಕ್ಕೊಲಿಕೆರೆ ಸಂಗಮೇಶ್, ಸಂತೆಬೆನ್ನೂರು ಬಸವರಾಜ್ ಇತರರು ಇದ್ದರು.