ಆನೆದಾಳಿಯಿಂದ ಮೃತಪಟ್ಟವರ ಮನೆಗೆ ಹರಿಹರಪುರ ಶ್ರೀಗಳು ಭೇಟಿ

KannadaprabhaNewsNetwork |  
Published : Nov 04, 2025, 01:02 AM IST
ೇ್ | Kannada Prabha

ಸಾರಾಂಶ

ಶೃಂಗೇರಿ, ತಾಲೂಕಿನ ಕೆರೆ ಪಂಚಾಯಿತಿ ಕೆರೆಕಟ್ಟೆ ಕೆರೆಗೆದ್ದೆ ಗ್ರಾಮದಲ್ಲಿ ಶುಕ್ರವಾರ ಆನೆ ದಾಳಿಯಿಂದ ಮೃತಪಟ್ಟ ಹರೀಶ್ ಶೆಟ್ಟಿ ಹಾಗೂ ಉಮೇಶ್ ಗೌಡ ಅವರ ಮನೆಗೆ ಸೋಮವಾರ ಭೇಟಿ ನೀಡಿದ ಹರಿಹರಪುರದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

-ಶಿಕ್ಷಣ ವೆಚ್ಚ ಸಂಪೂರ್ಣ ಮಠದಿಂದ ಎಂದು ಭರವಸೆ

ಕನ್ನಡಪ್ರಭ ವಾರ್ತೆ, ಶೃಂಗೇರಿ

ತಾಲೂಕಿನ ಕೆರೆ ಪಂಚಾಯಿತಿ ಕೆರೆಕಟ್ಟೆ ಕೆರೆಗೆದ್ದೆ ಗ್ರಾಮದಲ್ಲಿ ಶುಕ್ರವಾರ ಆನೆ ದಾಳಿಯಿಂದ ಮೃತಪಟ್ಟ ಹರೀಶ್ ಶೆಟ್ಟಿ ಹಾಗೂ ಉಮೇಶ್ ಗೌಡ ಅವರ ಮನೆಗೆ ಸೋಮವಾರ ಭೇಟಿ ನೀಡಿದ ಹರಿಹರಪುರದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಕುಟುಂಬದವರನ್ನು ಸಂತೈಸಿ ಇಂತಹ ಘಟನೆ ನಡೆಯಬಾರದಿತ್ತು. ಇದು ದುರದೃಷ್ಠಕರ. ಈ ಘಟನೆಯಿಂದ ನನ್ನ ಮನಸ್ಸಿಗೂ ನೋವಾಗಿದೆ. ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚ ಮಠ ಭರಿಸುತ್ತದೆ ಎಂದು ಈ ಸಂದರ್ಭದಲ್ಲಿ ಘೋಷಿಸಿದರು.

ಸರ್ಕಾರ ಈ ಭಾಗದ ಜನರಿಗೆ ಮೂಲ ಸೌಲಭ್ಯ ಕಸ್ಪಿಸಿಕೊಡಬೇಕಿದೆ. ಇಲ್ಲಿನ ಜನರು ಸಂಕಷ್ಟದಲ್ಲಿದ್ದಾರೆ. ಅರಣ್ಯಗಳ ನಡುವೆ ಬದುಕುತ್ತಿರುವ ಇವರು ಪ್ರಾಣಿಗಳ ಭಯದಿಂದ ಬದುಕಬೇಕಿದೆ. ಇವರಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಕಲ್ಪಿಸಿಕೊಡಬೇಕಿದೆ. ಸರ್ಕಾರ ಸೂಕ್ತ ಪರಿಹಾರ ನೀಡಲು ಮುಂದಾಗಬೇಕಿದೆ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಜೇಶ್ ದ್ಯಾವಂಟು,ಸಚೀಂದ್ರ,ಚಂದ್ರಶೇಖರ ಶೆಟ್ಟಿ,ಚಂದ್ರಶೇಖರ ಕಾರ್ ಬೈಲ್ ಸುತ್ತಮುತ್ತಮುತ್ತಲ ಗ್ರಾಮಸ್ಥರು ಹಾಜರಿದ್ದರು

3 ಶ್ರೀ ಚಿತ್ರ 1-

ಶೃಂಗೇರಿ ತಾಲೂಕಿನ ಕೆರೆಕಟ್ಟೆಯಲ್ಲಿ ಆನೆ ದಾಳಿಯಿಂದ ಮೃತಪಟ್ಟ ಹರೀಶ್ ಶೆಟ್ಟಿ ಹಾಗೂ ಉಮೇಶ್ ಗೌಡ ಕುಟುಂಬದ ಮನೆಗಳಿಗೆ ಹರಿಹರಪುರ ಶ್ರೀಗಳು ಭೇಟಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾರಣ ತಾಣಗಳು ಇಂದು ದುಬಾರಿ ಆಗುತ್ತಿವೆ: ಡಾ.ಶ್ರೀಧರ್‌
5 ವರ್ಷದಲ್ಲಿ ರೈಲ್ವೆ ಕೋಚಿಂಗ್‌ ಟರ್ಮಿನಲ್‌ ದ್ವಿಗುಣಕ್ಕೆ ನಿರ್ಧಾರ