ಹರೀಶ್‌ ಪೂಂಜ ಶಾಸಕ ಅಂತ ಬಿಡೋಕೆ ಆಗುತ್ತಾ: ಸಿದ್ದರಾಮಯ್ಯ

KannadaprabhaNewsNetwork |  
Published : May 26, 2024, 01:33 AM ISTUpdated : May 26, 2024, 09:08 AM IST
ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಿಎಂ ಸಿದ್ದರಾಮಯ್ಯ. | Kannada Prabha

ಸಾರಾಂಶ

ಪೂಂಜ ಬಂಧನಕ್ಕೆ ಕಾಂಗ್ರೆಸ್‌ ಒತ್ತಡ ಹೇರುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಒತ್ತಡ ಅಂದರೆ ಏನು? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಪ್ರಶ್ನಿಸಿದರು.

 ಮಂಗಳೂರು :  ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಎಂಎಲ್ಎ ಅಂತಾ ಬಿಟ್ಟು ಬಿಡೋಕೆ ಆಗುತ್ತಾ? ಎಂಎಲ್‌ಎ ಆದ ಮಾತ್ರಕ್ಕೆ ಪೊಲೀಸರ ಮೇಲೆ ಗಲಾಟೆ ಮಾಡಬಹುದಾ? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವರ ದರ್ಶನಕ್ಕೆ ಶನಿವಾರ ಆಗಮಿಸಿದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಪ್ರಕರಣದಲ್ಲಿ ಪೂಂಜ ಬಂಧನಕ್ಕೆ ಕಾಂಗ್ರೆಸ್‌ ಒತ್ತಡ ಹೇರುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನ ಒತ್ತಡ ಅಂದರೆ ಏನು? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಪ್ರಶ್ನಿಸಿದರು.

ಜಾಮೀನು ರಹಿತ ಅಪರಾಧ:  ಹರೀಶ್‌ ಪೂಂಜ ವಿರುದ್ಧ ಐಪಿಸಿ ಸೆಕ್ಷನ್‌ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ಜಾಮೀನು ರಹಿತ ಅಪರಾಧ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಹರೀಶ್‌ ಪೂಂಜ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲಗಳೆಯಬಹುದಾ? ಎಂಎಲ್ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಹರೀಶ್‌ ಪೂಂಜ ಮೇಲೆ ಎರಡು ಎಫ್ಐಆರ್ ದಾಖಲಾಗಿವೆ. ಅವರು ಗಲಾಟೆ ಮಾಡಿದ್ದು ಯಾರ ಪರವಾಗಿ ಗೊತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಕಾಂಗ್ರೆಸ್‌ ಮುಖಂಡರಾದ ರಮಾನಾಥ ರೈ, ಅಭಯಚಂದ್ರ ಜೈನ್‌, ಐವನ್ ಡಿಸೋಜ, ಶಶಿಧರ ಹೆಗ್ಡೆ, ಶಾಹುಲ್‌ ಹಮೀದ್‌ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ
ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ