ಉಡುಪಿ : ಸಮಾಜದಲ್ಲಿದ್ದ ಅಧರ್ಮ, ಅನೀತಿ ಹಾಗೂ ಅವ್ಯವಸ್ಥೆ ಉಂಟಾದಾಗ ಅವಗಳ ನಿವಾರಣೆಗೆಂ ಮಹಾನ್ ಚೇತನರು ಜನಿಸುತ್ತಾರೆ ಎನ್ನುವುದಕ್ಕೆ ಶ್ರೇಷ್ಠ ನಿದರ್ಶನ ಶ್ರೀ ಕೃಷ್ಣ. ಹಬ್ಬಗಳ ಜೊತೆ ಕಲೆ ಮತ್ತು ಸಂಸ್ಕೃತಿ ಸೇರಿದಾಗ ಸಾಮರಸ್ಯ ಸಾಧ್ಯ ಎನ್ನುವುದಕ್ಕೆ ಈ ಹಬ್ಬ ದೊಡ್ಡ ಉದಾಹರಣೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಪಂ ಉಪಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಜೀವನಕ್ಕೆ ಬೇಕಾದ ಎಲ್ಲಾ ಆದರ್ಶಗಳು, ಮಾರ್ಗದರ್ಶನಗಳು ಭಗವದ್ಗೀತೆಯಲ್ಲಿವೆ. ಶ್ರೀಕೃಷ್ಣನು ಸಾವಿರಾರು ವರ್ಷಗಳ ಹಿಂದೆ ಭಗವದ್ಗೀತೆಯ ಮೂಲಕ ನೀಡಿದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದೆ ಎಂದರು.
ನಿವೃತ್ತ ಪ್ರಾಧ್ಯಾಪಕ ಡಾ. ಶ್ರೀಕಾಂತ್ ಸಿದ್ಧಾಪುರ ಉಪನ್ಯಾಸ ನೀಡಿದರು. ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮತ್ತು ನಗರಾಭಿವೃದ್ಧಿ ಕೋಶದ ಯೋಜನಾ ನಿದೇಶಕ ಸುಬ್ರಹ್ಮಣ್ಯ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ಇಲಾಖೆಯ ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಕೆ. ಪೂರ್ಣಿಮಾ ವಂದಿಸಿದರು.