ಹಾರೋಹಳ್ಳಿ ಬರಪೀಡಿತ ತಾಲೂಕೆಂದು ಘೋಷಿಸಲಿ

KannadaprabhaNewsNetwork |  
Published : Sep 07, 2026, 02:15 AM IST
5ಕೆಆರ್ ಎಂಎನ್ 5.ಜೆಪಿಜಿಹಾರೋಹಳ್ಳಿ ತಾಲೂಕು ದೊಡ್ಡಮುದವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದರು. ಅಶೋಕ್, ಪುಟ್ಟಸ್ವಾಮಿ, ಹರೀಶ್, ಪರಮೇಶ್ ಇದ್ದಾರೆ. | Kannada Prabha

ಸಾರಾಂಶ

ಹಾರೋಹಳ್ಳಿ: ಹೊಸ ತಾಲೂಕಾಗಿ ರಚನೆಯಾದ ಬಳಿಕವೂ ಹಾರೋಹಳ್ಳಿ ಅಭಿವೃದ್ಧಿಯಲ್ಲಿ ನಿರೀಕ್ಷಿತ ಪ್ರಗತಿ ಕಾಣದೆ ಹಿಂದುಳಿದಿದೆ. ಪ್ರಸ್ತುತ ಮಳೆ ಕೊರತೆಯಿಂದ ಬೆಳೆ ಹಾನಿಯಾಗಿದ್ದು, ಹಾರೋಹಳ್ಳಿಯನ್ನು ಬರಪೀಡಿತ ತಾಲೂಕು ಎಂದು ರಾಜ್ಯಸರ್ಕಾರ ಘೋಷಿಸಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು

ಹಾರೋಹಳ್ಳಿ: ಹೊಸ ತಾಲೂಕಾಗಿ ರಚನೆಯಾದ ಬಳಿಕವೂ ಹಾರೋಹಳ್ಳಿ ಅಭಿವೃದ್ಧಿಯಲ್ಲಿ ನಿರೀಕ್ಷಿತ ಪ್ರಗತಿ ಕಾಣದೆ ಹಿಂದುಳಿದಿದೆ. ಪ್ರಸ್ತುತ ಮಳೆ ಕೊರತೆಯಿಂದ ಬೆಳೆ ಹಾನಿಯಾಗಿದ್ದು, ಹಾರೋಹಳ್ಳಿಯನ್ನು ಬರಪೀಡಿತ ತಾಲೂಕು ಎಂದು ರಾಜ್ಯಸರ್ಕಾರ ಘೋಷಿಸಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ತಾಲೂಕಿನ ದೊಡ್ಡಮುದವಾಡಿ ಗ್ರಾಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಮಳೆ- ಬೆಳೆ ಇಲ್ಲದೆ ರೈತರು ಹಾಗೂ ಗ್ರಾಮೀಣ ಜನರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಅಗತ್ಯ ಪರಿಹಾರ ಮತ್ತು ವಿಶೇಷ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರವರಿಗೆ ಮನವಿ ಮಾಡಲಾಗಿದೆ ಎಂದರು.

ತಾಲೂಕಿನಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಕೆರೆ- ಕಟ್ಟೆಗಳು ಸಂಪೂರ್ಣ ಬತ್ತಿಹೋಗಿವೆ. ಗಾಣಾಳು ಕೆರೆ ಏತ ನೀರಾವರಿ ಯೋಜನೆಯ ಮೂಲಕ 24 ಕೆರೆಗಳನ್ನು ತುಂಬಿಸುವ ಕಾಮಗಾರಿ ನಡೆಯುತ್ತಿದ್ದು, ಎಲ್ಲಾ ಕೆರೆಗಳಿಗೂ ನೀರು ತುಂಬಿಸಿದರೆ ಹಾರೋಹಳ್ಳಿ ತಾಲೂಕು ಹಸಿರು ವಲಯವಾಗಿ ಪರಿವರ್ತನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ಕೆರೆಗೆ ನೀರು ತುಂಬಿಸುವ ಯೋಜನೆಗೆ ಖಾಸಗಿ ವ್ಯಕ್ತಿಯೊಬ್ಬರು ತಡೆಯಾಜ್ಞೆ ತಂದಿದ್ದರು. ಆದರೆ ನ್ಯಾಯಾಲಯವು ತಡೆಯಾಜ್ಞೆಯನ್ನು ತೆರವುಗೊಳಿಸಿದ್ದು, ಇದೀಗ ಯೋಜನೆಗೆ ಯಾವುದೇ ಅಡೆತಡೆ ಇಲ್ಲವಾಗಿದೆ. ಹೀಗಾಗಿ ಕಾಮಗಾರಿಯನ್ನು ಸಮರ್ಪಕವಾಗಿ ಮುಂದುವರಿಸಿ, 24 ಕೆರೆಗಳಿಗೂ ನೀರು ತುಂಬಿಸುವ ಮೂಲಕ ತಾಲೂಕಿನ ಕೃಷಿ ಹಾಗೂ ಜನಜೀವನಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸರ್ಕಾರದ ವಿವಿಧ ಅನುದಾಗಳಿಂದ ₹6.80 ಕೋಟಿ ಬಿಡುಗಡೆಯಾಗಿದೆ. ಇದರಿಂದ ಈ ಪ್ರದೇಶದ ವ್ಯಾಪ್ತಿಯ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಗುರಿ ಹೊಂದಲಾಗಿದೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜೆ.ಸಿ.ಬಿ ಅಶೋಕ್, ಬಮುಲ್ ನಿರ್ದೇಶಕ ಎಚ್.ಎಸ್.ಹರೀಶ್‌ಕುಮಾರ್, ಮುಖಂಡರಾದ ಪರಮೇಶ್, ಪುಟ್ಟಸ್ವಾಮಿ ಸೇರಿ ವಿವಿಧ ಇಲಾಖೆಯ ಸರ್ಕಾರಿ ಅಧಿಕಾರಿಗಳು, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

5ಕೆಆರ್ ಎಂಎನ್ 4.ಜೆಪಿಜಿ

ಹಾರೋಹಳ್ಳಿ ತಾಲೂಕು ದೊಡ್ಡಮುದವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದರು. ಅಶೋಕ್, ಪುಟ್ಟಸ್ವಾಮಿ, ಹರೀಶ್, ಪರಮೇಶ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಕರೆಗೆ 1 ಲಕ್ಷ ರು ಪರಿಹಾರಕ್ಕೆ ಯೋಗೇಶ್ ಆಗ್ರಹ
ಹಿಂಸೆಯಿಂದ ಏನೂ ಸಾಧಿಸಲು ಸಾಧ್ಯವಿಲ್ಲ