ಯಡೂರು ಗ್ರಾಮದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

KannadaprabhaNewsNetwork |  
Published : Apr 27, 2026, 02:45 AM IST
ಯಡೂರು ಗ್ರಾಮದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ  | Kannada Prabha

ಸಾರಾಂಶ

ಯಡೂರು ಗ್ರಾಮದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಜರುಗಿತು. ಐತಿಹಾಸಿಕ ಹಿನ್ನೆಲೆಯುಳ್ಳ ಸುಗ್ಗಿಕಟ್ಟೆಯಲ್ಲಿ ಮಲೆನಾಡಿನ ಜನರ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಸಾಂಪ್ರದಾಯಿಕ ಪೂಜಾ ಕಾರ್ಯಗಳು ನಡೆದವು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಯಡೂರು ಗ್ರಾಮದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಜರುಗಿತು. ಐತಿಹಾಸಿಕ ಹಿನ್ನೆಲೆಯುಳ್ಳ ಸುಗ್ಗಿಕಟ್ಟೆಯಲ್ಲಿ ಮಲೆನಾಡಿನ ಜನರ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಸಾಂಪ್ರದಾಯಿಕ ಪೂಜಾ ಕಾರ್ಯಗಳು ನಡೆದವು.

ಗ್ರಾಮದ ಸುಗ್ಗಿಕಟ್ಟೆಯಲ್ಲಿ ದೇವಿಗೆ ಮಡೆ ಇಟ್ಟ ಗ್ರಾಮಸ್ಥರು ಊರಿನ ಸಮೃದ್ಧಿ ಹಾಗೂ ಮಳೆ ಬೆಳೆಗಾಗಿ ಸಾಮೂಹಿಕ ಪೂಜೆ ಸಲ್ಲಿಸಿ, ಸಹ ಭೋಜನ ನೆರವೇರಿತು. ಗ್ರಾಮದ ದೇವರಬಾವಿಯಲ್ಲಿ ಬಸವಣ್ಣ ದೇವರ ಗಂಗಾಸ್ನಾನ ನಡೆಯಿತು. ಬಸವಣ್ಣ ದೇವರನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಪ್ರತಿ ಮನೆಯವರು ಈಡುಗಾಯಿಯೊಂದಿಗೆ ಪೂಜೆ ಸಲ್ಲಿಸಿದರು. ಅಡ್ಡೆಹೊತ್ತವರ ಕುಣಿತವನ್ನು ಜನರು ವೀಕ್ಷಿಸಿದರು. ಸುಗ್ಗಿಕಟ್ಟೆಯಲ್ಲಿ ಗ್ರಾಮಸ್ಥರ ಸಾಮೂಹಿಕ ಕುಣಿತದೊಂದಿಗೆ, ದೇವತಕ್ಕರ ಮೆರವಣಿ ನಡೆಯಿತು. ಭಾನುವಾರ ಮಲ್ಲಸುಗ್ಗಿ, ಸೋಮವಾರ ಹಗಲು ಸುಗ್ಗಿ, ಮಂಗಳವಾರ ಮಾರಿ ಕಳುಹಿಸುವ ಕಾರ್ಯದೊಂದಿಗೆ ೧೩ ದಿನಗಳ ಸುಗ್ಗಿ ಉತ್ಸವ ಮುಕ್ತಾಯಗೊಳ್ಳಲಿದೆ.

ಯಡೂರು ಗ್ರಾಮಾಭಿವೃದ್ಧಿ ಮಂಡಳಿ ನಿಯೋಜಿತ ಅಧ್ಯಕ್ಷ ಡಿ.ಡಿ. ಮುತ್ತಣ್ಣ, ಕಾರ್ಯದರ್ಶಿ ಸುದೀರ್, ಉಪಾಧ್ಯಕ್ಷ ಲೋಕೇಶ್, ದೇವರ ಒಡೆಕಾರರು ಸುಗ್ಗಿ ಉತ್ಸವದ ಜವಾಬ್ದಾರಿ ವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರಿಕೆಟ್ ಪಂದ್ಯಾವಳಿ: ಗೆದ್ದು ಬೀಗಿದ ಆಯುರ್ವೇದ ಕಾಲೇಜು ತಂಡ
ಪರಿಶ್ರಮದಿಂದ ಪ್ರತಿಫಲ ಸಾಧ್ಯ: ಇಒ ಬಡಿಗೇರ