ಕನ್ನಡ ಪ್ರಭ ವಾರ್ತೆ ಹೊನ್ನಾಳಿ
ಪಟ್ಟಣದಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಬಿಜೆಪಿ ಮಂಡಲ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಭಾರತದಲ್ಲಿ ಹಿಂದುತ್ವ ಉಳಿಯಬೇಕಾದರೆ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ಆಗುವುದು ಅವಶ್ಯಕ. ನನ್ನನ್ನು ಗೆಲ್ಲಿಸಿದರೆ ನರೇಂದ್ರ ಮೋದಿ ಅವರಿಗೆ ಕಮಲ ಅರ್ಪಿಸಿ, ಲಕ್ಷ್ಮೀ ಎಂಬ ಅನುದಾನವನ್ನು ಜಿಲ್ಲೆಗೆ ತಂದು ದಾವಣಗೆರೆ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ, ಏ.19ರಂದು ಗಾಯತ್ರಿಸಿದ್ದೇಶ್ವರ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ನಾಯಕರಾದ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಗಮಿಸಲಿದ್ದಾರೆ. ಹೊನ್ನಾಳಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಆಗಮಿಸಬೇಕು ಎಂದು ಹೇಳಿದರು.
ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ರಾಜ್ಯ ಹಿಂದುಳಿದ ವರ್ಗಗಳ ಬಿಜೆಪಿ ಉಪಾಧ್ಯಕ್ಷ ಕೆ.ಪಿ.ಕುಬೇಂದ್ರಪ್ಪ, ಜಿಲ್ಲಾ ಬಿಜೆಪಿ ಅಭ್ಯರ್ಥಿ ರಾಜಶೇಖರ ಮಾತನಾಡಿದರು. ವಿಪ ಮಾಜಿ ಸಚೇತಕ ಡಾ.ಶಿವಯೋಗಿಸ್ವಾಮಿ, ಮುಖಂಡರಾದ ಧನಂಜಯ, ಅನಿಲ್‌ಕುಮಾರ್, ರಾಜನಹಳ್ಳಿ ಶಿವಕುಮಾರ್, ಜಯಮ್ಮ, ಸತೀಶ್, ನಾಗರಾಜ್ ಇತರರು ಉಪಸ್ಥಿತರಿದ್ದರು.
- - - -11ಎಚ್.ಎಲ್.ಐ1: