ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಶಾಲಾ ಕಾಲೇಜು ಮಕ್ಕಳಿಗೆ ರಸ್ತೆ ಸಂಚಾರ ಸುರಕ್ಷತೆ ಬಗ್ಗೆ ಅರಿವು ಮೂಡಿಸಬೇಕು ಜೊತೆಗೆ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ.ವಿದ್ಯಾರ್ಥಿಗಳಿಂದ ವಾರಕ್ಕೋಮ್ಮೆ ರಸ್ತೆ ಸಂಚಾರಕ್ಕೆ ಸಂಬಂಧಿಸಿದಂತೆ ಪ್ರಾಯೋಗಿಕವಾಗಿ ಸಂಚಾರಿ ನಿಯಮಗಳನ್ನು ಪಾಲಿಸಲು ಅರಿವು ಮೂಡಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಬರುವ ಬೂವನಹಳ್ಳಿ ಹಾಗೂ ಚನ್ನಪಟ್ಟಣ ವೃತ್ತದಲ್ಲಿ ಕಾಮಗಾರಿ ನಡೆಸಲು ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ನಿಗಾ ವಹಿಸಿ ಪರ್ಯಾಯ ಮಾರ್ಗವನ್ನು ಮೊದಲು ಸಿದ್ಧತೆ ಮಾಡಿಕೊಂಡು ನಂತರ ಕಾಮಗಾರಿ ಪ್ರಾರಂಭಿಸಿ ಎಂದು ರಾಷ್ಟ್ರೀಯ ಹೆದ್ದಾರಿ ಅಭಿಯಂತರರಿಗೆ ತಿಳಿಸಿದರು. ನಗರದಲ್ಲಿ ಅಂಗಡಿ ಮಾಲೀಕರು ತಮ್ಮ ವಾಹನಗಳನ್ನು ಫುಟ್‌ಪಾತ್‌ನಲ್ಲಿಯೇ ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಆಗುತ್ತದೆ. ಈ ನಿಟ್ಟಿನಲ್ಲಿ ಅಂಗಡಿ ಮಾಲೀಕರಿಗೆ ನಗರ ಸಭೆವತಿಯಿಂದ ನೋಟಿಸ್ ನೀಡಿ ವಾಹನಗಳ ತೆರವಿಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು. ಇದೇ ರೀತಿ ತಾಲೂಕು ಮಟ್ಟದಲ್ಲಿಯೂ ಸಹ ಕ್ರಮ ಜರುಗಿಸಬೇಕಿದೆ ಎಂದು ತಿಳಿಸಿದರು.ಜಿಲ್ಲೆಯ ಪ್ರವಾಸಿ ತಾಣಗಳಾದ ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಹಾಗೂ ಸಕಲೇಶಪುರದ ಟ್ರೆಕ್ಕಿಂಗ್ ಸ್ಥಳಗಳಿಗೆ ವಾರಾಂತ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ ಸುರಕ್ಷತಾ ದೃಷ್ಟಿಯಿಂದ ಪೊಲೀಸ್ ಇಲಾಖೆ ಸಿಬ್ಬಂದಿ ಜೊತೆಗೆ ಸ್ಥಳೀಯವಾಗಿ ಹೋಂ ಗಾರ್ಡ್ ಅನ್ನು ನೇಮಿಸುವಂತೆ ತಿಳಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜ್ ಕುಮಾರ್, ಕೆ.ಎಸ್.ಆರ್.ಟಿ.ಸಿ ವಿಭಾಗಾಧಿಕಾರಿ, ನಗರಸಭೆ ಆಯುಕ್ತರಾದ ಯೋಗಾನಂದ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
* ಬಾಕ್ಸ್‌ನ್ಯೂಸ್..ನೆರವಿಗೆ ಬಂದವರನ್ನು ಸನ್ಮಾನಿಸಬೇಕು ರಸ್ತೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿ ನೆರವಿಗೆ ಧಾವಿಸಿ ಪ್ರಾಣ ಉಳಿಸಲು ಸಹಕರಿಸಿದ ಸಾರ್ವಜನಿಕರನ್ನು ಗುರುತಿಸಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವುದರ ಮೂಲಕ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ರೀತಿ ಕೆಲಸಗಳನ್ನು ಮಾಡುವಂತೆ ಉತ್ತೇಜಿಸಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.