ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?

Published : Jun 29, 2025, 10:41 AM IST
Banu Mushtaq

ಸಾರಾಂಶ

ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ. '

  ಬಳ್ಳಾರಿ :  ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ. '

ಜೂ.29ರಂದು ಬಳ್ಳಾರಿಯಲ್ಲಿ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ಜರುಗಲಿದ್ದು, ಸಭೆಯಲ್ಲಿ ಬಾನು ಮುಸ್ತಾಕ್ ಅವರ ಹೆಸರು ಘೋಷಣೆಯಾಗಲಿದೆ ಎಂದು ಮೂಲಗಳು ಖಚಿತಪಡಿಸಿವೆ.

ಕನ್ನಡಕ್ಕೆ ಬೂಕರ್ ತಂದುಕೊಟ್ಟ ಬಾನು ಮುಷ್ತಾಕ್

ಹಾಸನ : ಹೆಸರಾಂತ ಲೇಖಕಿ ಬಾನು ಮುಷ್ತಾಕ್ ಅವರ 2025 ನೇ ಸಾಲಿನ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಬೂಕರ್ ಪ್ರಶಸ್ತಿ ಪಡೆದುಕೊಂಡಿದ್ದು, ನಗರದ ಪೆನ್ಷನ್ ಮೊಹಲ್ಲಾದಲ್ಲಿರುವ ತಮ್ಮ ನಿವಾಸದಲ್ಲಿ ಸಂತೋಷ ಹಂಚಿಕೊಂಡರು.

ಹಾಸನ ನಗರದ ನಿವಾಸಿ ಹಾಗೂ ಹಿರಿಯ ವಕೀಲೆ, ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಗೆ ೨೦೨೫ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಲಂಡನ್‌ನ ಟೇಟ್ ಮಾಡರ್ನ್‌ನಲ್ಲಿ ನಡೆದ ಸಮಾರಂಭದಲ್ಲಿ ಹಾರ್ಟ್ ಲ್ಯಾಂಪ್ ಅಂತಿಮ ಸುತ್ತಿನಲ್ಲಿ ವಿಜೇತ ಕೃತಿಯಾಗಿ ಘೋಷಣೆ

ಮಾಡಲಾಯಿತು. ಕನ್ನಡದಿಂದ ಇಂಗ್ಲಿಷ್‌ಗೆ ದೀಪಾ ಭಾಸ್ಠಿ ಅವರು ಭಾಷಾಂತರಿಸಿದ ಈ ಕೃತಿಯು ಜಾಗತಿಕ ಸಾಹಿತ್ಯ ಕ್ಷೇತ್ರದಲ್ಲಿ ಕನ್ನಡದ ಶಕ್ತಿಯನ್ನು ಮತ್ತೊಮ್ಮೆ ದೃಢಪಡಿಸಿದೆ. ಸುಮಾರು ೫೨ ಲಕ್ಷ ರು. ಮೊತ್ತದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಲೇಖಕಿ ಬಾನು ಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಾಸ್ಠಿ ಸಮಾನವಾಗಿ ಹಂಚಿಕೊಂಡಿದ್ದಾರೆ.

ಏಪ್ರಿಲ್ 8 , 2025 ರಂದು ಘೋಷಿತವಾದ ಆರು ಕೃತಿಗಳ ಶಾರ್ಟ್‌ಲಿಸ್ಟ್‌ನಲ್ಲಿ ಸೊಲ್ವೆಜ್ ಬಾಲೆ, ವಿನ್ಸೆಂಟ್ ಡೆಲೆಕ್ರೊಯಿಕ್ಸ್, ಹಿರೋಮಿ ಕವಕಾಮಿ, ವಿನ್ಸೆಂಜೊ ಲಾಟ್ರೊನಿಕೊ ಮತ್ತು ಅನ್ನೆ ಸೆರ್ರೆ ಅವರ ಕಾದಂಬರಿಗಳು ಸ್ಥಾನ ಪಡೆದಿದ್ದವು. ‘ಹಾರ್ಟ್ ಲ್ಯಾಂಪ್’ ಈ ಎಲ್ಲಾ ಕೃತಿಗಳನ್ನು ಮೀರಿ ಈ ಸಾಲಿನ ಅತ್ಯುನ್ನತ ಸಾಹಿತ್ಯ ಗೌರವಕ್ಕೆ ಭಾಜನವಾಯಿತು.

PREV
Read more Articles on

Recommended Stories

ಗ್ಯಾರಂಟಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ
ನೊಳಂಬ ಲಿಂಗಾಯತ ಸಮಾಜದಿಂದ ಪ್ರತಿಭಾ ಪುರಸ್ಕಾರ