ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತಿಬ್ಬರು ಯುವಕರು ಬಲಿ ! ಕಳೆದೊಂದು ತಿಂಗಳಲ್ಲಿ 18 ಜನ ನಿಧನ

Sujatha NRPublished : Jun 29, 2025 10:16 AM

ಜಿಲ್ಲೆಯಲ್ಲಿ ಹೃದಯಾಘಾತದಿಂದ ಉಂಟಾಗುತ್ತಿರುವ ಸಾವಿನ ಸರಣಿ ಮುಂದುವರಿದಿದ್ದು, ಶನಿವಾರ ಒಂದೇ ದಿನ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

 ಹಾಸನ :  ಜಿಲ್ಲೆಯಲ್ಲಿ ಹೃದಯಾಘಾತದಿಂದ ಉಂಟಾಗುತ್ತಿರುವ ಸಾವಿನ ಸರಣಿ ಮುಂದುವರಿದಿದ್ದು, ಶನಿವಾರ ಒಂದೇ ದಿನ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಹಾಸನದ ಸಿದ್ದೇಶ್ವರ ನಗರದ ಗೋವಿಂದ (37) ಹಾಗೂ ಹಾಸನ ತಾಲೂಕು ಹ್ಯಾರಾನೆ ಗ್ರಾಮದ ಗಿರೀಶ್ (41) ಮೃತರು. ಆಟೋ ಚಾಲಕರಾಗಿದ್ದ ಗೋವಿಂದಗೆ ಶನಿವಾರ ಬೆಳಗ್ಗೆ ಏಳು ಗಂಟೆ ಸಮಯದಲ್ಲಿ ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿತು.

 ಕೂಡಲೇ ಅದೇ ಆಟೋದಲ್ಲಿಯೇ ಅವರು ಜಿಲ್ಲಾಸ್ಪತ್ರೆಗೆ ತೆರಳಿದರು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಅವರು ಸಾವನ್ನಪ್ಪಿದ್ದಾರೆ. ಈ ಮಧ್ಯೆ, ಗಿರೀಶ್ ಅವರು ಜೋಳದ ಹೊಲಕ್ಕೆ ಗೊಬ್ಬರ ಹಾಕಿ ಮಧ್ಯಾಹ್ನ ಮನೆಗೆ ಬರುತ್ತಿದ್ದಂತೆ ಮನೆಯಲ್ಲಿಯೇ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಸಾವನ್ನಪ್ಪಿದ್ದಾರೆ.

ಇದರಿಂದಾಗಿ, ಕಳೆದ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ18ಕ್ಕೆ ಏರಿದೆ.

Read more Articles on