ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಹಾಸನದ ವಿದ್ಯಾರ್ಥಿಗಳು ಪತ್ತೆ

KannadaprabhaNewsNetwork |  
Published : Jun 11, 2026, 12:30 AM IST
10ಎಚ್ಎಸ್ಎನ್15 :  | Kannada Prabha

ಸಾರಾಂಶ

ಹಾಸನದಿಂದ ಮೈಸೂರಿಗೆ ತೆರಳಿದ್ದ ಮೋಹನ್, ಪ್ರಸನ್ನ ಹಾಗೂ ಅಮೃತ್ ರೈಲಿನಲ್ಲಿ ಬೆಂಗಳೂರಿಗೆ ಹೋಗಿದ್ದರು. ನಗರದಲ್ಲಿ ಕೆಲಕಾಲ ಸುತ್ತಾಡಿದ ಅವರು, ಕೈಯಲ್ಲಿದ್ದ ಹಣ ಖಾಲಿಯಾದ ನಂತರ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲೇ ಕಾಲ ಕಳೆಯುತ್ತಿದ್ದರು. ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬಾಲಕರನ್ನು ಗಮನಿಸಿದ ರೈಲ್ವೆ ಪೊಲೀಸರು ವಿಚಾರಣೆ ನಡೆಸಿದಾಗ, ಅವರು ಹಾಸನ ಜಿಲ್ಲೆಯವರಾಗಿದ್ದು ಮನೆಯಿಂದ ಹೊರಟಿರುವುದು ತಿಳಿದುಬಂದಿದೆ. ತಕ್ಷಣವೇ ಸಂಬಂಧಿತ ಪೊಲೀಸರಿಗೆ ಮಾಹಿತಿ ನೀಡಿ ಬಾಲಕರನ್ನು ಅವರ ವಶಕ್ಕೆ ಒಪ್ಪಿಸಲಾಗಿದೆ. ಬಳಿಕ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಿದ ಪೊಲೀಸರು ಮೂವರನ್ನೂ ಹಾಸನಕ್ಕೆ ಕರೆತಂದು ಪೋಷಕರಿಗೆ ಒಪ್ಪಿಸಿದ್ದಾರೆ. ಮಕ್ಕಳನ್ನು ಸುರಕ್ಷಿತವಾಗಿ ಮರಳಿ ಪಡೆದ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಕೆಲ ದಿನಗಳಿಂದ ಕಾಡುತ್ತಿದ್ದ ಆತಂಕ ದೂರವಾಗಿದೆ.

ಹಾಸನ: ಜಿಲ್ಲೆಯಿಂದ ನಾಪತ್ತೆಯಾಗಿದ್ದ ಮೂವರು ಅಪ್ರಾಪ್ತ ವಿದ್ಯಾರ್ಥಿಗಳು ಕೊನೆಗೂ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ್ದಾರೆ.

ಸೋಮವಾರ ಹಾಸನದಿಂದ ಮೈಸೂರಿಗೆ ತೆರಳಿದ್ದ ಮೋಹನ್, ಪ್ರಸನ್ನ ಹಾಗೂ ಅಮೃತ್ ರೈಲಿನಲ್ಲಿ ಬೆಂಗಳೂರಿಗೆ ಹೋಗಿದ್ದರು. ನಗರದಲ್ಲಿ ಕೆಲಕಾಲ ಸುತ್ತಾಡಿದ ಅವರು, ಕೈಯಲ್ಲಿದ್ದ ಹಣ ಖಾಲಿಯಾದ ನಂತರ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲೇ ಕಾಲ ಕಳೆಯುತ್ತಿದ್ದರು. ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬಾಲಕರನ್ನು ಗಮನಿಸಿದ ರೈಲ್ವೆ ಪೊಲೀಸರು ವಿಚಾರಣೆ ನಡೆಸಿದಾಗ, ಅವರು ಹಾಸನ ಜಿಲ್ಲೆಯವರಾಗಿದ್ದು ಮನೆಯಿಂದ ಹೊರಟಿರುವುದು ತಿಳಿದುಬಂದಿದೆ. ತಕ್ಷಣವೇ ಸಂಬಂಧಿತ ಪೊಲೀಸರಿಗೆ ಮಾಹಿತಿ ನೀಡಿ ಬಾಲಕರನ್ನು ಅವರ ವಶಕ್ಕೆ ಒಪ್ಪಿಸಲಾಗಿದೆ. ಬಳಿಕ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಿದ ಪೊಲೀಸರು ಮೂವರನ್ನೂ ಹಾಸನಕ್ಕೆ ಕರೆತಂದು ಪೋಷಕರಿಗೆ ಒಪ್ಪಿಸಿದ್ದಾರೆ. ಮಕ್ಕಳನ್ನು ಸುರಕ್ಷಿತವಾಗಿ ಮರಳಿ ಪಡೆದ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಕೆಲ ದಿನಗಳಿಂದ ಕಾಡುತ್ತಿದ್ದ ಆತಂಕ ದೂರವಾಗಿದೆ.ಹಾಸನ ತಾಲೂಕಿನ ಸೌದ್ರಳ್ಳಿ ಗ್ರಾಮದ ಪ್ರಸನ್ನ, ದೊಡ್ಡಬಸವನಹಳ್ಳಿ ಗ್ರಾಮದ ಅಮೃತ್ ಹಾಗೂ ಕಿತ್ತಾನೆ ಗಡಿಯ ಮೋಹನ್ ಈ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರವಣಬೆಳಗೊಳದಲ್ಲಿ ಕನ್ನಡದ ಮತ್ತೊಂದು ಶಾಸನ ಪತ್ತೆ
ವೈದ್ಯ ಜ್ಞಾನದ ಶಕ್ತಿ ಕೇಂದ್ರ ‘ಮಿಮ್ಸ್ ಕೇಂದ್ರ ಗ್ರಂಥಾಲಯ’..!