ಕನ್ನಡಪ್ರಭ ವಾರ್ತೆ ಮಂಗಳೂರು
ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ದ್ವೇಷವನ್ನುಂಟು ಮಾಡುವ ದ್ವೇಷ ಭಾಷಣದ ಪ್ರಸಾರ ಅಥವಾ ಪ್ರಚಾರ ಹಾಗೂ ಅಪರಾಧಗಳನ್ನು ತಡೆಗಟ್ಟಲು, ಅಂಥ ಅಪರಾಧಗಳಿಗೆ ದಂಡನೆಯನ್ನು ಉಪಬಂಧಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕ ಪರಿಹಾರ ಒದಗಿಸಲು ಈ ವಿಧೇಯಕ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಧಾರ್ಮಿಕ ವಿಷಯ, ರಾಜಕೀಯ ಕಾರಣಗಳಿಂದಾಗಿ ದ್ವೇಷ ಭಾಷಣದಿಂದ ಅನೇಕ ಬಡ ಕುಟುಂಬದ ಯುವಕರು ಬಲಿಯಾಗುತ್ತಿದ್ದರು. ಇಂತಹ ಸಂದರ್ಭ ಈ ರೀತಿಯ ಮಸೂದೆಯ ಅನಿವಾರ್ಯವಾಯಿತೆ ಬಗ್ಗೆ ಹಿಂದಿನಿಂದಲೂ ಆಗ್ರಹಿಸುತ್ತಾ ಬಂದಿದ್ದೆ. ಕಳೆದ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಹಾಸ್ ಶೆಟ್ಟಿ ಹಾಗು ಅಬ್ದುಲ್ ರಹಿಮಾನ್ ಹತ್ಯೆಯಾದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ನೇಮಕವಾದ ಸತ್ಯಶೋಧನಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಸಂದರ್ಭ ದ್ವೇಷ ಭಾಷಣ ವಿರುದ್ಧ ಕಠಿಣ ಕಾನೂನು ತರುವ ಬಗ್ಗೆ ಚಿಂತಿಸಲಾಗುವುದು ಎಂಬ ಆಶ್ವಾಸನೆ ನೀಡಲಾಗಿತ್ತು. ಆ ಪ್ರಕಾರ ಇದೀಗ ಮಸೂದೆಗೆ ರಾಜ್ಯ ಸರ್ಕಾರದಿಂದ ಅಂಗೀಕಾರ ದೊರೆತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲು ಮತ್ತಷ್ಟು ಅನುಕೂಲವಾಗಲಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ.