ಹುಬ್ಬಳ್ಳಿ:
ಅವರು ಶನಿವಾರ ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯ ಸಂಸ್ಥೆಯ ಸಭಾಂಗಣದಲ್ಲಿ ಸಂಸ್ಥೆಯ ಸದಸ್ಯರೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾರ್ವಜನಿಕರು ಮೊದಲು ಸಂಚಾರಿ ನಿಯಮ, ಕಾನೂನು ಪಾಲನೆಗೆ ಆದ್ಯತೆ ನೀಡಿ. ಎಲ್ಲ ಸಮಸ್ಯೆಗೂ ಪರಿಹಾರ ಪೊಲೀಸರು ಎಂಬ ಮನೊಭಾವದಿಂದ ಪ್ರತಿಯೊಬ್ಬರೂ ಹೊರಬನ್ನಿ. ನಮ್ಮ ಸಮಸ್ಯೆಗಳಿಗೆ ನಾವೇ ಪರಿಹಾರ ಕೊಂಡುಕೊಳ್ಳಬೇಕು. ಹಾಗೆಯೇ ಸಮಸ್ಯೆಗಳು ಆಗದಂತೆ ಕೈಗೊಳ್ಳಬೇಕಾದ ಅಗತ್ಯ ಮುಂಜಾಗೃತಾ ಕ್ರಮ ಕೈಗೊಂಡಿದ್ದೇ ಆದಲ್ಲಿ ಮೋಸ ಹೋಗುವುದು, ತೊಂದರೆಗೆ ಈಡಾಗುವುದು ತಪ್ಪುತ್ತದೆ ಎಂದರು.ಇಂದಿನ ಜನರ ಮನಸ್ಥಿತಿ ಹೇಗಾಗಿದೆ ಎಂದರೆ, ನಾವು ಹೇಗೆ ಬೇಕಾದರೂ ಇರಬಹುದು, ಸಂಚಾರಿ ನಿಯಮ ಉಲ್ಲಂಘಿಸಬಹುದು. ಆದರೆ, ನನ್ನ ಸುತ್ತಮುತ್ತಲೂ, ನಾನು ಸಂಚರಿಸುವ ಮಾರ್ಗ ಚೆನ್ನಾಗಿರಬೇಕು ಎಂಬ ಮನಸ್ಥಿತಿ ಹೊಂದಿದ್ದಾರೆ. ಮೊದಲು ಇಂತಹ ಮನಸ್ಥಿತಿಯಿಂದ ಹೊರಬಂದಾಗ ಮಾತ್ರ ಸುಧಾರಣೆ ತರಲು ಸಾಧ್ಯವಾಗಲಿದೆ ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡದಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಹಾಗೂ ಟ್ರಾಫಿಕ್ ಸಮಸ್ಯೆಯಿಂದ ಪರಿಹಾರ ಕ್ರಮ ಕೈಗೊಳ್ಳಲು ಬೇಕಾದ ಅಗತ್ಯ ಸಲಹೆ-ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗುವುದು. ಹಾಗೂ ಸಾರ್ವಜನಿಕರ ಬೇಡಿಕೆಯ ಅನುಗುಣವಾಗಿ ಕೆಲವೇ ದಿನಗಳಲ್ಲಿ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆ ಜಾರಿಗೆ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಈ ವೇಳೆ ಸಾರ್ವಜನಿಕರಾದ ದಿವ್ಯಾ, ಜ್ಯೋತಿಷಿ ಗಣೇಶ ಹೆಗಡೆ, ಹೋಟೆಲ್ ಮಾಲಿಕರ ಸಂಘದ ರವಿ, ಸಾಮಾಜಿಕ ಕಾರ್ಯಕರ್ತ ಹುಸೇನಬಾಷಾ ತಲೆವಾಡ ಸೇರಿದಂತೆ ಹಲವರ ಪ್ರಶ್ನೆಗೆ ಪೊಲೀಸ್ ಆಯುಕ್ತೆ ಉತ್ತರಿಸಿದರು.ಸೈಬರ್ ಠಾಣೆಯ ಇನ್‌ಸ್ಪೆಕ್ಟರ್ ಬಿ.ಕೆ. ಪಾಟೀಲ ಸೈಬರ್ ವಂಚನೆಯಿಂದ ತಪ್ಪಿಸಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಡಿಸಿಪಿ ಕುಶಾಲ್ ಚೌಕ್ಸೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ, ಗೌರವ ಕಾರ್ಯದರ್ಶಿ ರವೀಂದ್ರ ಬಳಿಗೇರ, ಮಹೇಂದ್ರ ಸಿಂಘಿ, ಮಾಜಿ ಅಧ್ಯಕ್ಷ ಎಂ.ಸಿ. ಹಿರೇಮಠ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.