ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸುವ ಧೈರ್ಯ ಬೆಳಸಿಕೊಳ್ಳಿ: ಡಾ.ನಾಗಲಕ್ಷ್ಮೀ ಚೌಧರಿ

KannadaprabhaNewsNetwork |  
Published : Jan 18, 2025, 12:49 AM IST
16ಕೆಎಂಎನ್ ಡಿ37 | Kannada Prabha

ಸಾರಾಂಶ

ತಕ್ಷಣ ಮಂಡ್ಯ ಕೆ.ಎಸ್.ಆರ್.ಟಿ.ಸಿ ಇಲಾಖೆ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು. ಬಸ್ ನಿಲ್ದಾಣದಲ್ಲಿ ತಾಯಿ ಮಗುವಿನ ಕೊಠಡಿ ಇಲ್ಲದಿರುವುದನ್ನು ಕಂಡು ಪ್ರತಿ ಬಸ್ ನಿಲ್ದಾಣದಲ್ಲಿ ತಾಯಿ ಮಗುವಿನ ಕೊಠಡಿ ಇರಬೇಕು. ತಾಯಿ ಮಗುವಿನ ಕೊಠಡಿ ಏಕೆ ನಿರ್ಮಿಸಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮಹಿಳೆಯರು ತಮಗೆ ಆದ ಅನ್ಯಾಯದ ವಿರುದ್ಧ ಯಾವ ಭಯವನ್ನೂ ಪಡದೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸುವ ಧೈರ್ಯ ಬೆಳಸಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ತಿಳಿಸಿದರು.

ಪಟ್ಟಣದ ತಾಲೂಕು ಗುರುಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಕರ್ನಾಟಕ ಪೊಲೀಸ್ ಜನ ಸ್ನೇಹಿ ಎಂದೇ ಹೆಸರುವಾಸಿಯಾಗಿದೆ. ಮಹಿಳೆಯರು ತಮ್ಮ ಬಳಿ ಸದಾ ಸ್ಥಳೀಯ ಪೊಲೀಸ್ ಠಾಣೆ ಅಥವಾ ಅಧಿಕಾರಿಗಳ ಮೊಬೈಲ್ ಸಂಖ್ಯೆಯನ್ನು ಇಟ್ಟುಕೊಳ್ಳಬೇಕು. ಕಷ್ಟದಲ್ಲಿ ಅಥವಾ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದ ವೇಳೆ ಸರಿಯಾದ ಸ್ಪಂದನೆ ಸಿಗದಿದ್ದರೆ ನಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ಎಂದು ಕಿವಿಮಾತು ಹೇಳಿದರು.

ಬಾಲ್ಯವಿವಾಹದಂತಹ‌ ಅನಿಷ್ಠವನ್ನು ತೊಡೆದು ಹಾಕಲು‌ ಮಹಿಳೆಯರಿಂದಲೇ ಸಾಧ್ಯ. ತಾಯಿ ತನ್ನ ಮಗಳಿಗೆ ವಿದ್ಯಾಭ್ಯಾಸ ನೀಡುತ್ತೇನೆ. ಬಾಲ್ಯ ವಿವಾಹ ಮಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಹೆಣ್ಣು ಮಕ್ಕಳಿಗೆ ಜೀವನದಲ್ಲಿ ಸಾಧನೆ ಮಾಡಲು ಕನಸು ಕಂಡು ಗುರಿ ನಿಗದಿ ಮಾಡಿಕೊಳ್ಳಬೇಕು. ಗುರಿ ಸಾಧನೆಗೆ ಹಲವು ತೊಡಕುಗಳು‌ ಬರುತ್ತವೆ. ಅವುಗಳನ್ನು ಮೆಟ್ಟಿ ನಿಲ್ಲಬೇಕು. ನಿರಂತರ ಪರಿಶ್ರಮ ಹಾಗೂ ಶ್ರದ್ಧೆಯಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಸಲಹೆ ನೀಡಿದರು.

ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ:

ಪಟ್ಟಣದ ಬಸ್ ನಿಲ್ದಾಣಕ್ಕೆ ಡಾ.ನಾಗಲಕ್ಷ್ಮೀ ಚೌಧರಿ ದಿಢೀರ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಈ ವೇಳೆ ನಿಲ್ದಾಣದಲ್ಲಿ ಬಸ್ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿಗಳನ್ನು ಮಾತನಾಡಿಸಿ ಬಸ್ ವ್ಯವಸ್ಥೆ ಬಗ್ಗೆ ವಿಚಾರಿಸಿದರು.

ಹಲವು ವಿದ್ಯಾರ್ಥಿನಿಯರು ತಮ್ಮ ಊರಿಗೆ ಸರಿಯಾಗಿ ಬಸ್ ಸಂಪರ್ಕ ಇಲ್ಲದಿರುವ ಕಾರಣ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ. ಊರಿಗೆ ಸರಿಯಾಗಿ ಬಸ್ ಸಂಪರ್ಕ ಕಲ್ಪಿಸಿಕೊಡಿ ಎಂದು ಕೇಳಿಕೊಂಡರು. ಅನೇಕ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಇದ್ದರೂ ಕೆಲವು ಕಡೆ ಬಸ್ ಚಾಲಕರು ವಾಹನ ನಿಲ್ಲಿಸುತ್ತಿಲ್ಲ ಎಂದು ದೂರಿದರು.

ತಕ್ಷಣ ಮಂಡ್ಯ ಕೆ.ಎಸ್.ಆರ್.ಟಿ.ಸಿ ಇಲಾಖೆ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು. ಬಸ್ ನಿಲ್ದಾಣದಲ್ಲಿ ತಾಯಿ ಮಗುವಿನ ಕೊಠಡಿ ಇಲ್ಲದಿರುವುದನ್ನು ಕಂಡು ಪ್ರತಿ ಬಸ್ ನಿಲ್ದಾಣದಲ್ಲಿ ತಾಯಿ ಮಗುವಿನ ಕೊಠಡಿ ಇರಬೇಕು. ತಾಯಿ ಮಗುವಿನ ಕೊಠಡಿ ಏಕೆ ನಿರ್ಮಿಸಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಮಹಿಳಾ ವಿಶ್ರಾಂತಿ ಕೊಠಡಿಗೆ ಭೇಟಿ ನೀಡಿ ಕೊಠಡಿಯ ಶುಚಿತ್ವ ಗಮನಿಸಿ, ಸ್ವಚ್ಚತಾ ಸಿಬ್ಬಂದಿಗೆ ಸೂಕ್ತ ಸ್ವಚ್ಚತಾ ಕ್ರಮ ಕೈಗೊಂಡು ಕಾರ್ಯ ನಿರ್ವಾಹಿಸಿ ಮತ್ತು ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಹೇಳಿದರು.

ನಂತರ ಶೌಚಾಲಯಕ್ಕೆ ಭೇಟಿ ನೀಡಿದಾಗ, ಶೌಚಾಲಯಕ್ಕೆ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಮತ್ತು ಸರಿಯಾಗಿ ಸ್ವಚ್ಛತೆ ಕಾಪಾಡಿಲ್ಲ ಎಂದು ಸಾರ್ವಜನಿಕರು ದೂರಿದರು. ಸಂಬಂಧಪಟ್ಟ ಸ್ವಚ್ಛತಾ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಮಹಿಳೆಯರಿಂದ ಹಣ ವಸೂಲಿ ಮಾಡಬಾರದು ಹಾಗೂ ಶೌಚಾಲಯಕ್ಕೆ ಸೂಕ್ತ ಬಾಗಿಲುಗಳ ವ್ಯವಸ್ಥೆ ಮತ್ತು ಸ್ವಚ್ಛತೆಯನ್ನು ಸರಿಯಾಗಿ ನಿರ್ವಹಣೆ ಮಾಡುವಂತೆ ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿ.ಟಿ.ರವಿ ‘ಪಾಕ್‌ ನಾಲಿಗೆ’ ಹೇಳಿಕೆಗೆ ಸದನವೇ ಬಲಿ
ಗುತ್ತಿಗೆದಾರರಿಂದಲೇ ಕಮಿಷನ್‌ ಕೇಳಿದ ಗುತ್ತಿಗೆದಾರರು! : ಇಬ್ಬರು ಅಮಾನತು