ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದರೆ 100 ಗ್ರಾಂ ಚಿನ್ನದ ಪದಕ

Published : Mar 15, 2025, 10:57 AM IST
SSLc

ಸಾರಾಂಶ

  ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಅಥವಾ ಖಾಸಗಿ ಶಾಲೆ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ ನೀಡುವುದಾಗಿ ಶಿಕ್ಷಣಪ್ರೇಮಿ, ಹಂಪಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ. ಫಕೀರಗೌಡ್ರ ಪಾಟೀಲ ಘೋಷಿಸಿದ್ದಾರೆ.

 ಶಿಗ್ಗಾಂವಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಅಥವಾ ಖಾಸಗಿ ಶಾಲೆ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ ನೀಡುವುದಾಗಿ ಶಿಕ್ಷಣಪ್ರೇಮಿ, ಹಂಪಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ. ಫಕೀರಗೌಡ್ರ ಪಾಟೀಲ ಘೋಷಿಸಿದ್ದಾರೆ.

 ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಕ್ಷೇತ್ರದ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ ಹಾಗೂ ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 70  ಗ್ರಾಂ ಬೆಳ್ಳಿ ಪದಕ ನೀಡಲಾಗುತ್ತದೆ. ವಿದ್ಯಾರ್ಥಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ 8, 9ನೇ ತರಗತಿಯನ್ನೂ ಓದಿರಬೇಕು. ಶಿಗ್ಗಾಂವಿ ಕ್ಷೇತ್ರದ ವಿದ್ಯಾರ್ಥಿಗಳು ಜಿಲ್ಲೆ ಮತ್ತು ರಾಜ್ಯ ಮಟ್ಟಕ್ಕೆ ಹೆಚ್ಚು ಅಂಕ ಗಳಿಸಲಿ ಎಂಬ ಸದುದ್ದೇಶದಿಂದ ಈ ಬಹುಮಾನ ಘೋಷಿಸಿದ್ದಾಗಿ ತಿಳಿಸಿದರು.

PREV

Recommended Stories

ಪೊಲೀಸರ ಕರ್ತವ್ಯನಿಷ್ಠೆಯಿಂದ ಸಮಾಜದಲ್ಲಿ ಶಾಂತಿ ಸಾಧ್ಯ
ಹಜರತ್ ಟಿಪ್ಪು ಸುಲ್ತಾನ್ ಸರ್ಕಲ್ ಬೋರ್ಡ್ ತೆರವಿಗೆ ಆಗ್ರಹ