ವರದಾ-ಬೇಡ್ತಿ ನದಿ ಜೋಡಣೆ ಕೇಂದ್ರದ ಒಪ್ಪಿಗೆ: ಬೊಮ್ಮಾಯಿ

Published : Aug 23, 2025, 09:51 AM IST
Bharatiya Janata Party MP Basavaraj Bommai (Filephoto/ANI)

ಸಾರಾಂಶ

ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು

ಹಾವೇರಿ: ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ತುಂಗಭದ್ರಾ ನದಿಯಲ್ಲಿ ಬೇಸಿಗೆಯ 3-4 ತಿಂಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತದೆ. 

ಅದಕ್ಕೆ ವರದಾ-ಬೇಡ್ತಿ ನದಿಯ ಜೋಡಣೆ ಅಗತ್ಯವಿದೆ. ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ಕೊಟ್ಟಿದ್ದು, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಮುಂದಕ್ಕೆ ತೆಗೆದುಕೊಂಡು ಹೋಗಬೇಕು. ನನ್ನ ಈ ಆಗ್ರಹವನ್ನು ರಾಜ್ಯ ಸರ್ಕಾರ ಸಹ ಒಪ್ಪಿದೆ. ಯೋಜನೆ ಜಾರಿಯಾದರೆ ಸುಮಾರು 18 ಟಿಎಂಸಿ ನೀರು ಬರುತ್ತದೆ. ಅದರಿಂದ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಯೋಜನೆ ಜಾರಿಗೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.

PREV
Read more Articles on

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಕಾಡುಹಂದಿ ದಾಳಿಗೆ ಮೆಕ್ಕೆಜೋಳ ಬೆಳೆಹಾನಿ, ಪರಿಹಾರಕ್ಕೆ ಆಗ್ರಹ