ಡಬ್ಬಿ ಮೆಣಸಿನಕಾಯಿ ಕ್ವಿಂಟಾಲ್‌ಗೆ 90 ಸಾವಿರ ರು. ದಾಖಲೆಯ ದರ!

Published : Feb 17, 2026, 11:37 AM IST
byadagi Chilli

ಸಾರಾಂಶ

ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸೋಮವಾರ ಡಬ್ಬಿ ಮೆಣಸಿನಕಾಯಿ ಪ್ರತಿ ಕ್ವಿಂಟಲ್‌ಗೆ ₹89,999 ಹಾಗೂ ಕಡ್ಡಿ ಮೆಣಸಿನಕಾಯಿ ₹69,999 ಐತಿಹಾಸಿಕ ಬೆಲೆಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ.

 ಬ್ಯಾಡಗಿ :  ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸೋಮವಾರ ಡಬ್ಬಿ ಮೆಣಸಿನಕಾಯಿ ಪ್ರತಿ ಕ್ವಿಂಟಲ್‌ಗೆ ₹89,999 ಹಾಗೂ ಕಡ್ಡಿ ಮೆಣಸಿನಕಾಯಿ ₹69,999 ಐತಿಹಾಸಿಕ ಬೆಲೆಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ.

ಹೊಸ ದಾಖಲೆ ಸೃಷ್ಟಿ

ಗದಗ ಜಿಲ್ಲೆ ರೋಣ ತಾಲೂಕಿನ ಸವಡಿ ಗ್ರಾಮದ ರೈತ ವಿಜಯಕುಮಾರ ಪ್ರಕಾಶ ಸಜ್ಜನರ ಬೆಳೆದ ಡಬ್ಬಿ ಹಾಗೂ ಕಡ್ಡಿ ಮೆಣಸಿನಕಾಯಿ ಸೋಮವಾರ ಮಾರುಕಟ್ಟೆಯಲ್ಲಿ ಬರೋಬ್ಬರಿ ₹89,999 ಹಾಗೂ ₹69,999ಗೆ ಮಾರಾಟವಾಗಿ ಹೊಸ ದಾಖಲೆ ಸೃಷ್ಟಿಸಿದೆ.

ಒಣ ಬೇಸಾಯವೇ ಪ್ರಮುಖ

ರೋಣ ತಾಲೂಕಿನಲ್ಲಿ ಒಣ ಬೇಸಾಯವೇ ಪ್ರಮುಖ. ಇಂತಹ ಪ್ರದೇಶದಲ್ಲಿಯೂ ಸಹ ಯಾವುದೇ ರಾಸಾಯನಿಕ ಬಳಸದೇ ಕೃಷಿಯಲ್ಲಿ ಸಾಧನೆ ಮಾಡಬೇಕು ಎನ್ನುವ ಹಂಬಲದಿಂದ ಕೃಷಿಗೆ ಕೈ ಹಾಕಿದ 23 ವರ್ಷದ ಪದವೀಧರ ಯುವ ರೈತ ವಿಜಯಕುಮಾರ ಸಜ್ಜನರ ಮೊದಲ ಪ್ರಯತ್ನದಲ್ಲಿಯೇ ಭರ್ಜರಿ ಇಳುವರಿ ತೆಗೆದು ಸೈ ಎನಿಸಿಕೊಂಡಿದ್ದಾರೆ.

ಮಾರುಕಟ್ಟೆ ಆರಂಭವಾದ ನಂತರ ಸುಮಾರು 60ಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲಿ ಇಷ್ಟೊಂದು ದೊಡ್ಡ ಮೊತ್ತಕ್ಕೆ ಯಾವುದೇ ತಳಿಯ ಮೆಣಸಿನಕಾಯಿ ಮಾರಾಟವಾಗಿರಲಿಲ್ಲ. ಕಳೆದ ಹಲವು ವರ್ಷಗಳಿಂದ ಮಾರುಕಟ್ಟೆಯಲ್ಲಿ ಡಬ್ಬಿ ತಳಿ ಬೆಲೆ ₹50ರಿಂದ ₹60 ಸಾವಿರ ಪ್ರತಿ ಕ್ವಿಂಟಲ್‌ಗೆ ಮಾರಾಟವಾಗುತ್ತಿತ್ತು. ಈ ವರ್ಷ ಆವಕದ ಕೊರತೆ ಹಾಗೂ ರೈತ ವಿಜಯಕುಮಾರ ಬೆಳೆದ ಮೆಣಸಿನ ಗುಣಮಟ್ಟದಿಂದಾಗಿ ಬಂಗಾರದ ಬೆಲೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಅವರು ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದರು.

PREV
Stay updated with recent news from Haveri district (ಹಾವೇರಿ ಸುದ್ದಿ) — covering local governance, agriculture and farming developments, heritage & tourism (temples, wildlife sanctuaries), economic and industry news, environment and civic issues, and community events across Haveri on Kannada Prabha News.
Read more Articles on

Recommended Stories

ಸೇವಾಲಾಲರ ಆದರ್ಶ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು-ಮಾಜಿ ಸಚಿವ ಬಿ.ಸಿ. ಪಾಟೀಲ
ಕೃಷಿ ಉತ್ಪನ್ನ ಮಾರುಕಟ್ಟೆಗೆ ನಿನ್ನೆ 1.5 ಲಕ್ಷ ಮೆಣಸಿಕಾಯಿ ಚೀಲ ಆವಕ