ಡೆಂಘೀ ಆಯ್ತು, ಈಗ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

Published : Jul 08, 2024, 07:32 AM IST
health checkup.jpg

ಸಾರಾಂಶ

ಜಿಲ್ಲೆಯಲ್ಲಿ ಮಾರಕ ಡೆಂಘೀ ಜ್ವರದ ಮಧ್ಯೆ ಇಲಿ ಜ್ವರ ಪತ್ತೆಯಾಗಿದೆ. ಜಿಲ್ಲಾಸ್ಪತ್ರೆಗೆ ದಾಖಲಾಗಿರುವ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ.

ಹಾವೇರಿ: ಜಿಲ್ಲೆಯಲ್ಲಿ ಮಾರಕ ಡೆಂಘೀ ಜ್ವರದ ಮಧ್ಯೆ ಇಲಿ ಜ್ವರ ಪತ್ತೆಯಾಗಿದೆ. ಜಿಲ್ಲಾಸ್ಪತ್ರೆಗೆ ದಾಖಲಾಗಿರುವ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. 

ತಾಲೂಕಿನ ದೇವಿಹೊಸೂರ ಗ್ರಾಮದ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಸದ್ಯ ಬಾಲಕನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 15 ದಿನದಿಂದ ಬಾಲಕನಿಗೆ ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿತ್ತು. 

ಹೀಗಾಗಿ, ಜಾಂಡೀಸ್ ಇರಬಹುದು ಎಂದು ರಕ್ತ ತಪಾಸಣೆ ಮಾಡಲಾಗಿದ್ದು, ವರದಿಯಲ್ಲಿ ಇಲಿ ಜ್ವರ ದೃಢಪಟ್ಟಿದೆ. ಇಲಿ ಜ್ವರ ದೃಢಪಡುತ್ತಿದ್ದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಆರೋಗ್ಯ ಸ್ಥಿರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇಲಿಜ್ವರ ಪತ್ತೆ ಬೆನ್ನಲ್ಲೇ ಆರೋಗ್ಯಾಧಿಕಾರಿಗಳು ಮಹತ್ವದ ಸಭೆ ನಡೆಸಿದ್ದು, ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

PREV

Recommended Stories

ಪ್ರತಿಯೊಬ್ಬರು ದೇಶಾಭಿಮಾನ ಬೆಳೆಸಿಕೊಳ್ಳಲಿ: ನಿಂಗಪ್ಪ ಬಟ್ಟಲಕಟ್ಟಿ
ಗ್ಯಾರಂಟಿ ಯೋಜನೆಯಿಂದ ಬಡವರ ಬದುಕು ಸುಧಾರಣೆ: ಸಚಿವ ಶಿವಾನಂದ ಪಾಟೀಲ