ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಇಲ್ಲಿನ ನವನಗರದ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ವಿರುದ್ಧ ಸ್ಪರ್ಧಿಸಿದ್ದ ಹನುಮಂತ ಮಾವಿನಮರದ ಪರವಾಗಿ ಸತತ ಪ್ರಚಾರ ಮಾಡಿದರೂ ಅಲ್ಪ ಮತಗಳಿಂದ ಸಿದ್ದರಾಮಯ್ಯ ಗೆದ್ದರು. ತಮ್ಮ ಜೀವನದಲ್ಲಿ ಹೊಂದಾಣಿಕೆ ರಾಜಕೀಯ ಕುಮಾರಸ್ವಾಮಿ ಮಾಡಿಲ್ಲ ಎಂದರು.
ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಬಳಿಕ ರಾಜ್ಯಕ್ಕೆ ಅವರ ಅನುಪಸ್ಥಿತಿ ಕಾಡುತ್ತಿದೆ. ಇದನ್ನು ಯಾರಿಂದಲೂ ಭರಿಸಲು ಸಾಧ್ಯವಿಲ್ಲ. ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ವರ್ಗದ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ದೇಶದ ಅಭಿವೃದ್ಧಿ ಬಗ್ಗೆ ಚಿಂತಿಸಿಯೇ ಎನ್‌ಡಿಎಗೆ ಬೆಂಬಲ ನೀಡಿದರು ಎಂದರು.ಜೆಡಿಎಸ್ ಪಕ್ಷದ ಅಭಿಯಾನ ನೋಂದಣಿಯಲ್ಲಿ ಕಾರ್ಯಕರ್ತರು ವೇಗ ಕಳೆದುಕೊಳ್ಳಬಾರದು. ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿದಾಗ ಮಾತ್ರ ಮುಂಬರುವ ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ಗೆಲ್ಲಲು ಸಾಧ್ಯ. ನಂತರ ವಿಧಾನಸಭೆ ಹಾಗೂ ಸಂಸತ್ ಚುನಾವಣೆ ಗೆಲ್ಲಲು ಇದು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಶಾಸಕ ಸುರೇಶ ಬಾಬು ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿದ್ದುಕೊಂಡು ಜನರ ಮನೆಗಳಿಗೆ ತೆರಳಿ ಅಲ್ಲಿದ್ದು, ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುವ ಕೆಲಸವನ್ನು ದೇಶದಲ್ಲೇ ಮೊದಲ ಬಾರಿಗೆ ಮಾಡಿದವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ. ಇಂತಹ ಕಾರ್ಯವನ್ನು ಅನುಕರಣೆ ಮಾಡಲು ಮುಂದಾಗಿದ್ದ ರಾಹುಲ್ ಗಾಂಧಿಗೆ ಇದು ಸಾಧ್ಯವಾಗಲಿಲ್ಲ ಎಂದರು.
---
ಸಚಿವ ಜಮೀರ್ ವಿರುದ್ಧ ಆಕ್ರೋಶ
---
ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಪರವಾಗಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಕೆಲಸ ಮಾಡಿರುವ ಬಗ್ಗೆ ಬಿಜೆಪಿ ಮುಖಂಡರೇ ಮಾತನಾಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಿಜೆಪಿಯ ಎಲ್ಲ ಮುಖಂಡರ ಮನವೋಲಿಸುತ್ತೇನೆ. ಇದಕ್ಕೆ ಕಾರ್ಯಕರ್ತರ ಬೆಂಬಲ ಹೆಚ್ಚಿನ ರೀತಿಯಲ್ಲಿ ಬೇಕಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಮನವಿ ಮಾಡಿದರು.