ವಿಡಿಯೋ ಪ್ರಸಾರ ಮಾಡಿದವರ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ, ಸ್ಟಿಂಗ್ ಆಪರೇಷನ್ ಮಾಡಿಸಿದವರು ಯಾರು ಮತ್ತು ಇದರ ಹಿಂದಿರುವ ಉದ್ದೇಶವೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ತನಿಖೆಯ ಮುಂದಿನ ಹಂತದಲ್ಲಿ ಸ್ಟಿಂಗ್ ಆಪರೇಷನ್ ಮಾಡಿಸಿದವರ ಬಂಧನವೂ ನಡೆಯುವ ಸಾಧ್ಯತೆಯಿದೆ ಎಂದು ಸಚಿವರು ಹೇಳಿದರು. ಈ ಪ್ರಕರಣದ ಬಗ್ಗೆ ಈಗಲೇ ರಾಜಕೀಯ ಆರೋಪ- ಪ್ರತ್ಯಾರೋಪಗಳಿಗೆ ಇಳಿಯುವ ಬದಲು ತನಿಖೆಯ ಅಂತಿಮ ಫಲಿತಾಂಶಕ್ಕಾಗಿ ಕಾಯಬೇಕು. ತನಿಖಾ ಸಂಸ್ಥೆಗಳು ತಮ್ಮ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಸಂಗತಿಗಳು ಹೊರಬರುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಹಾಸನ: ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಮುಂದಿಟ್ಟುಕೊಂಡು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯದ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ನಡುವೆ ಗೊಂದಲ ಹಾಗೂ ಸಂಘರ್ಷ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ರಾಜಕೀಯ ಪ್ರಚೋದನೆಯ ಕೆಲಸವನ್ನು ಮೊದಲು ನಿಲ್ಲಿಸಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದರು.
ನಗರದಲ್ಲಿ ಶುಕ್ರವಾರ ಹಾಸನಾಂಬೆ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ತನಿಖೆ ನಡೆಯುತ್ತಿದ್ದು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ವಿಡಿಯೋವನ್ನು ಯಾರು ಸಾಮಾಜಿಕವಾಗಿ ಹರಿಬಿಟ್ಟಿದ್ದಾರೆ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಕರಣದ ಹಿಂದೆ ಇರುವವರ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ತಿಳಿಸಿದರು. ವಿಡಿಯೋ ಪ್ರಸಾರ ಮಾಡಿದವರ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ, ಸ್ಟಿಂಗ್ ಆಪರೇಷನ್ ಮಾಡಿಸಿದವರು ಯಾರು ಮತ್ತು ಇದರ ಹಿಂದಿರುವ ಉದ್ದೇಶವೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ತನಿಖೆಯ ಮುಂದಿನ ಹಂತದಲ್ಲಿ ಸ್ಟಿಂಗ್ ಆಪರೇಷನ್ ಮಾಡಿಸಿದವರ ಬಂಧನವೂ ನಡೆಯುವ ಸಾಧ್ಯತೆಯಿದೆ ಎಂದು ಸಚಿವರು ಹೇಳಿದರು. ಈ ಪ್ರಕರಣದ ಬಗ್ಗೆ ಈಗಲೇ ರಾಜಕೀಯ ಆರೋಪ- ಪ್ರತ್ಯಾರೋಪಗಳಿಗೆ ಇಳಿಯುವ ಬದಲು ತನಿಖೆಯ ಅಂತಿಮ ಫಲಿತಾಂಶಕ್ಕಾಗಿ ಕಾಯಬೇಕು. ತನಿಖಾ ಸಂಸ್ಥೆಗಳು ತಮ್ಮ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಸಂಗತಿಗಳು ಹೊರಬರುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಒಟ್ಟಾರೆ, ಸ್ಟಿಂಗ್ ಆಪರೇಷನ್ ಪ್ರಕರಣವನ್ನು ರಾಜಕೀಯ ಸಂಘರ್ಷದ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಪ್ರಯತ್ನ ಸರಿಯಲ್ಲ ಎಂಬ ಸಂದೇಶ ನೀಡಿದ ಸಚಿವ ತಂಗಡಗಿ, ಕುಮಾರಸ್ವಾಮಿ ಅವರ ಹೇಳಿಕೆಗಳಿಗೆ ನೇರವಾಗಿಯೇ ತಿರುಗೇಟು ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.