ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ (ಜು.4) ನಡೆಯಲಿರುವ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಜನಸ್ಪಂದನ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಶುಕ್ರವಾರದ ಜನತಾದರ್ಶನ ಕಾರ್ಯಕ್ರಮ ಬೆಳಗ್ಗೆಯಿಂದ ಸಂಜೆಯವರೆಗೆ ನಡೆಯಲಿದೆ. ಕುಮಾರಸ್ವಾಮಿ ಅವರು ಸಂಜೆಯವರೆಗೂ ಜನಸಾಮಾನ್ಯರ ಜೊತೆಯಲ್ಲೇ ಇದ್ದು ಸಮಸ್ಯೆಗಳನ್ನು ಆಲಿಸಲಿದ್ದಾರೆ. ಅವರಿಗೆ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ. ಸಚಿವರಾಗಿ ದೇಶದ ಕೆಲಸದ ಜೊತೆಗೆ ಮಂಡ್ಯದ ಜನರ ಋಣ ತೀರಿಸುವ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಸರ್ಕಾರ ತಕ್ಷಣವೇ ನಾಲೆಗಳಿಗೆ ನೀರು ಹರಿಸಬೇಕು. ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಕುಮಾರಸ್ವಾಮಿ ಅವರು ಮಾತನಾಡಿದ್ದು, ಯಾವುದೇ ಮುಲಾಜಿಲ್ಲದೆ ನೀರು ಬಿಡುವ ಕೆಲಸವಾಗುತ್ತದೆ. ರೈತರು ಆತಂಕಪಡುವುದು ಬೇಡ ಎಂದು ಖಡಕ್ಕಾಗಿ ಹೇಳಿದರು.
ಕಾನೂನು ಬದ್ಧವಾಗಿ ನಾವು ಬಿಜೆಪಿ ಜೊತೆ ಸೇರಿ ವಿರೋಧ ಪಕ್ಷದವರಾಗಿ ಒತ್ತಾಯ ಮಾಡುವುದಾಗಿ ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಇದ್ದರು.