ಸೋಮವಾರಪೇಟೆ: ನಾಳೆ ರೈತರೊಂದಿಗೆ ಎಚ್‌ಡಿಕೆ ಸಂವಾದ

KannadaprabhaNewsNetwork |  
Published : Nov 21, 2026, 02:45 AM IST
ಕೇಂದ್ರ ಸಚಿವ  ಎಚ್.ಡಿ.ಕುಮಾರಸ್ವಾಮಿ ಅವರು ನ.೨೨ರಂದು  ಪಿ.ಎಂ.ಶ್ರೀ ಶಾಲಾ ಮೈದಾನದಲ್ಲಿ ರೈತರೊಂದಿಗೆ ಸಂವಾದ | Kannada Prabha

ಸಾರಾಂಶ

ಅವರು, ಜಿಲ್ಲೆಯ ಪ್ರಮುಖ ಸಮಸ್ಯೆಗಳಲ್ಲೊಂದಾದ ಕಸ್ತೂರಿ ರಂಗನ್ ವರದಿ ಅನುಷ್ಠಾನದ ಸಾಧಕ-ಬಾಧಕಗಳ ಕುರಿತು ಚರ್ಚೆ, ಸಿ ಮತ್ತು ಡಿ ಲ್ಯಾಂಡ್ ಸಮಸ್ಯೆ ಕುರಿತು ರೈತರೊಂದಿಗೆ ಕೇಂದ್ರ ಸಚಿವ ಕುಮಾರಸ್ವಾಮಿಯವರು ಮಾತುಕತೆ ನಡೆಸಲಿದ್ದು, ಸಮಸ್ಯೆಗಳ ಪರಿಹಾರದ ಕುರಿತು ಚರ್ಚಿಸಲು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕು

ಸೋಮವಾರಪೇಟೆ: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಶಾಲಾ ಮೈದಾನದಲ್ಲಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಜಿಲ್ಲೆಯ ರೈತ ಹೋರಾಟ ಸಮಿತಿ ಅಧ್ಯಕ್ಷ ಕೆ.ಬಿ.ಸುರೇಶ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪ್ರಮುಖ ಸಮಸ್ಯೆಗಳಲ್ಲೊಂದಾದ ಕಸ್ತೂರಿ ರಂಗನ್ ವರದಿ ಅನುಷ್ಠಾನದ ಸಾಧಕ-ಬಾಧಕಗಳ ಕುರಿತು ಚರ್ಚೆ, ಸಿ ಮತ್ತು ಡಿ ಲ್ಯಾಂಡ್ ಸಮಸ್ಯೆ ಕುರಿತು ರೈತರೊಂದಿಗೆ ಕೇಂದ್ರ ಸಚಿವ ಕುಮಾರಸ್ವಾಮಿಯವರು ಮಾತುಕತೆ ನಡೆಸಲಿದ್ದು, ಸಮಸ್ಯೆಗಳ ಪರಿಹಾರದ ಕುರಿತು ಚರ್ಚಿಸಲು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕು ಎಂದು ಈ ಸಂದರ್ಭ ಮನವಿ ಮಾಡಿದರು.

ಗೋಷ್ಠಿಯಲ್ಲಿ ರೈತ ಹೋರಾಟ ಸಮಿತಿ ಪ್ರಮುಖರಾದ ಮಿಥುನ್, ಮೋಹನ್, ದಿವಾಕರ್, ದೇಶ್‌ರಾಜ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಗೆ ನೀರು ಆಪೋಶನ: ಜಲಕ್ಷಾಮ ಭೀತಿ !
371ಜೆ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಬೆಂಬಲ