ಉಚ್ಚಿಲ ಮಹಾಲಕ್ಷ್ಮೀ ದೇವಳಕ್ಕೆ ಎಚ್‌ಡಿಕೆ ಭೇಟಿ

KannadaprabhaNewsNetwork |  
Published : Nov 17, 2026, 02:30 AM IST
16ಉಚ್ಚಿಲ | Kannada Prabha

ಸಾರಾಂಶ

ಮಾಜಿ ಮುಖ್ಯಮಂತ್ರಿ, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಎಚ್. ಡಿ. ಕುಮಾರ ಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಅವರು ಸೋಮವಾರ ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.

ಉಚ್ಚಿಲ : ಮಾಜಿ ಮುಖ್ಯಮಂತ್ರಿ, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಎಚ್. ಡಿ. ಕುಮಾರ ಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಅವರು ಸೋಮವಾರ ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು. ನಾಡೋಜ ಡಾ. ಜಿ. ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಭೋಜೆ ಗೌಡ, ಉಡುಪಿ ಶಾಸಕರಾದ ಯಶ್‌ಪಾಲ್ ಆನಂದ ಸುವರ್ಣ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಕಾಪು ಮಾರಿಗುಡಿಗೆ ಭೇಟಿ:

ಇದೇ ಸಂದರ್ಭ ಕೇಂದ್ರ ಸಚಿವರು ಸಕುಟುಂಬಿಕರಾಗಿ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಅವರನ್ನು ದೇವಸ್ಥಾನದ ಪರವಾಗಿ ವಾಸುದೇವ ಶೆಟ್ಟಿ ಅವರು ಸ್ವಾಗತಿಸಿದರು. ವಿ.ಪ.ಸದಸ್ಯ ಭೋಜೆಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರ್ಮ ಉಳಿದರೆ ಸಮಾಜದ ಉಳಿವು
ಅವ್ಯವಸ್ಥೆ ಕಂಡು ಗ್ರಂಥಪಾಲಕನಿಗೆ ತರಾಟೆ