ಚನ್ನಪಟ್ಟಣ ಜನ ನಿಖಿಲ್‌ನನ್ನು ಅಭಿಮನ್ಯು ಮಾಡಲ್ಲ: ಎಚ್‌ಡಿಕೆಕನ್ನಡಪ್ರಭ ವಾರ್ತೆ ಹಾಸನಚನ್ನಪಟ್ಟಣದ ಜನರು ನನ್ನ ಮಗನನ್ನು ಅಭಿಮನ್ಯು ಮಾಡುವುದಿಲ್ಲ. ಅರ್ಜುನನ ಪಾತ್ರ ಕೊಡ್ತಾರೆ. ಯಾರೇ, ಏನೇ ಕುತಂತ್ರ ಮಾಡಿದರೂ ಜನರು ನಿಖಿಲ್‌ನನ್ನು ಗೆಲ್ಲಿಸುತ್ತಾರೆ. ಚನ್ನಪಟ್ಟಣದಿಂದ ಕಾಂಗ್ರೆಸ್ ಅವನತಿ ಶುರುವಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
------
ಆಗ ಸೋತು ಅಭಿಮನ್ಯು ಆಗಿದ್ದವರು ಈಗ ಏಕಾಏಕಿ ಅರ್ಜುನ ಆಗ್ತಾರಾ: ಸಿದ್ದುಕನ್ನಡಪ್ರಭ ವಾರ್ತೆ ಬೆಂಗಳೂರು
ಹಿಂದೆ ಮಂಡ್ಯ ಲೋಕಸಭೆ ಮತ್ತು ರಾಮನಗರ ವಿಧಾನಸಭಾ ಚುನಾವಣೆಯಲ್ಲಿ ಸೋತಾಗ ನಿಖಿಲ್ ಕುಮಾರಸ್ವಾಮಿ ಅಭಿಮನ್ಯು ಆಗಿರಲಿಲ್ಲವೇ? ಈಗ ಉಪಚುನಾವಣೆಯಲ್ಲಿ ಇದ್ದಕ್ಕಿದ್ದಂತೆ ಅರ್ಜುನ ಆಗ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗಲೇ ಮಂಡ್ಯದಲ್ಲಿ, ನಂತರ ರಾಮನಗರದಲ್ಲಿ ನಿಖಿಲ್ ಸೋತಿದ್ದರು. ಆಗ ಅಭಿಮನ್ಯು ಆಗಿರಲಿಲ್ಲವೇ? ಈಗ ಇದ್ದಕ್ಕಿದ್ದಂತೆ ಅರ್ಜುನ ಆಗ್ತಾರಾ ಎಂದರು.ಸಚಿವ, ಶಾಸಕರೊಂದಿಗಿನ ಸಭೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಉಪಚುನಾವಣೆ ಸಿದ್ಧತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಬೆಳಗ್ಗೆ ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು. ಎಲ್ಲ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸುವಂತೆ ತಿಳಿಸಲಾಯಿತು ಎಂದು ತಿಳಿಸಿದರು.