ರೈತರ ಸಾಲ ಮನ್ನಾ ಮಾಡಿದ್ದ ಎಚ್ಡಿಕೆ

KannadaprabhaNewsNetwork |  
Published : Dec 17, 2025, 01:30 AM IST
16 | Kannada Prabha

ಸಾರಾಂಶ

ದೇವನಹಳ್ಳಿ: ರಾಜ್ಯಾದ್ಯಂತ ರೋಗಿಗಳಿಗೆ ಹಣ್ಣು ವಿತರಣೆ ಹಾಗೂ ಪ್ರಗತಿಪರ ರೈತರನ್ನು ಸನ್ಮಾನಿಸುವ ಮೂಲಕ ರೈತರ ಆಶಾಕಿರಣ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ದೇವನಹಳ್ಳಿ: ರಾಜ್ಯಾದ್ಯಂತ ರೋಗಿಗಳಿಗೆ ಹಣ್ಣು ವಿತರಣೆ ಹಾಗೂ ಪ್ರಗತಿಪರ ರೈತರನ್ನು ಸನ್ಮಾನಿಸುವ ಮೂಲಕ ರೈತರ ಆಶಾಕಿರಣ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ಪ್ರಗತಿಪರ ರೈತರನ್ನು ಸನ್ಮಾನಿಸಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು ವಿತರಿಸಿ ಮಾತನಾಡಿದ ಅವರು, ರೈತರ ವಿಚಾರದಲ್ಲಿ ಧ್ವನಿ ಎತ್ತಿದ ಮುಖ್ಯಮಂತ್ರಿಗಳಲ್ಲಿ ಕುಮಾರಸ್ವಾಮಿ ಪ್ರಮುಖರು. ರೈತರ ಸಾಲ ಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿಗೆ ಸಲ್ಲಬೇಕು. ಕೇವಲ ೨೦ ತಿಂಗಳ ಆಡಳಿತ ನಡೆಸಿ ಪ್ರಾದೇಶಿಕ ಪಕ್ಷದಿಂದ ರಾಜ್ಯದ ಏಳಿಗೆ ಸಾಧ್ಯ ಎಂದು ತೋರಿಸಿದ ಧೀಮಂತ ನಾಯಕ. ರೈತರ ಸಾಲಾ ಮನ್ನ, ಲಾಟರಿ ನಿಷೇಧ, ಸಾರಾಯಿ ನಿಷೇಧದಂತಹ ಅನೇಕ ಉನ್ನತ ಯೋಜನೆಗಳನ್ನು ಜಾರಿಗೆ ತಂದರು. ೨೦೨೯ಕ್ಕೆ ಮತ್ತೆ ಅವರನ್ನು ಮುಖ್ಯಮಂತ್ರಿಯಾಗಿ ಕಾಣಬೇಕು. ತಾಲೂಕಿನ ಜನತೆಯ ಪರವಾಗಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುತ್ತೇನೆ. ಮುಂದಿನ ದಿನಗಳಲ್ಲಿ ಅವರು ಮತ್ತೆ ಮುಖ್ಯಮಂತ್ರಿಗಳಾಗಿ ಹಿಂದೆ ಮಾಡಿದ ಅಭಿವೃದ್ಧಿ ಕೆಲಗಳು ಮುಂದೆಯು ಮಾಡಬೇಕು. ಸಾಕಷ್ಟು ಕೆಲಸಗಳು ಬಾಕಿ ಉಳಿದಿವೆ, ಎಲ್ಲಾ ಸಮುದಾಯದವರ ಏಳಿಗೆಗೆ ದುಡಿಯಲು ಉತ್ತಮ ಆರೋಗ್ಯ ಆಯಸ್ಸು ಅವರಿಗೆ ಕೊಡಲಿ ಎಂದು ಹೇಳಿದರು.

ಇದೆ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಆರ್.ಮುನೇಗೌಡ, ಉಪಾಧ್ಯಕ್ಷ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ ದೇವನಹಳ್ಳಿ ಟೌನ್ ಅಧ್ಯಕ್ಷ ಮುನಿನಂಜಪ್ಪ, ಜೆಡಿಎಸ್ ಯುವಘಟಕ ತಾಲೂಕು ಅಧ್ಯಕ್ಷ ಹೊಸಹಳ್ಳಿರವಿ, ಬಿಡಿಸಿಸಿಸಿ ಬ್ಯಾಂಕ್ ನಿರ್ದೇಶಕ ಕಾಮೇಳ ರಮೇಶ್, ಕಾರ್ಯಾಧ್ಯಕ್ಷ ಲಕ್ಷ್ಮಣ್, ಕುಂದಾಣ ಹೋಬಳಿ ಅಧ್ಯಕ್ಷ ಜಗದೀಶ್, ಪಿಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮುನಿರಾಜು, ಎಸ್.ಟಿ ಘಟಕದ ಅಧ್ಯಕ್ಷ ವೆಂಕಟೇಶ್‌ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಮಾಜಿ ಸ್ಥಾಯಿಸಮಿತಿ ಅಧ್ಯಕ್ಷ ವಿ.ಗೋಪಾಲ್, ನಾರಾಯಣಸ್ವಾಮಿ ಬಸವರಾಜು, ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ, ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

೧೬ ದೇವನಹಳ್ಳಿ ಚಿತ್ರಸುದ್ದಿ: ೧

ದೇವನಹಳ್ಳಿ ಜೆಡಿಎಸ್ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ಪ್ರಗತಿಪರ ರೈತರನ್ನು ಸನ್ಮಾನಿಸಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!
ಎಚ್‌ಎಎಲ್‌ ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ:ಸಚಿವ