ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
೧೨ನೇ ಶತಮಾನದಲ್ಲಿ ಸಮಾನತೆಗಾಗಿ ಶ್ರಮಿಸಿದ ಬಸವಣ್ಣನವರನ್ನು ರಾಜ್ಯದ ಸಾಂಸ್ಕ್ರತಿಕ ನಾಯಕ ಎಂದು ಘೋಷಣೆಯಾಗಿರುವುದು ಸಮಸ್ತ ರಾಜ್ಯದ ಜನರಿಗೆ ಹರ್ಷ ತಂದಿದೆ ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕಾಡಳಿತದ ಸಹಯೋಗದಲ್ಲಿ ವಿಶ್ವಗುರು ಬಸವೇಶ್ವರರು ಜನಿಸಿದ ಬಸವನಬಾಗೇವಾಡಿಯಲ್ಲಿ ಶನಿವಾರ ಸಾಂಸ್ಕ್ರತಿಕ ನಾಯಕ ಬಸವೇಶ್ವರರ ಭಾವಚಿತ್ರದ ಅನಾವರಣದಲ್ಲಿ ಮಾತನಾಡಿದ ಅವರು, ಇಂದು ರಾಜ್ಯ ಸರ್ಕಾರ ರಾಜ್ಯಾದ್ಯಂತ ಎಲ್ಲ ಇಲಾಖೆಯ ಕಚೇರಿಗಳಲ್ಲಿ ಸಾಂಸ್ಕ್ರತಿಕ ನಾಯಕ ಬಸವೇಶ್ವರರ ಭಾವಚಿತ್ರ ಅನಾವರಣ ಮಾಡಿ ಪೂಜೆ ಸಲ್ಲಿಸಿ ಕಡ್ಡಾಯವಾಗಿ ತಮ್ಮ ತಮ್ಮ ಕಚೇರಿಗಳಲ್ಲಿ ಭಾವಚಿತ್ರ ಅಳವಡಿಸುವಂತೆ ಆದೇಶ ಮಾಡಿದೆ. ಅದರಂತೆ ನಾವು ನಮ್ಮ ತಾಲೂಕಿನಲ್ಲಿ ಎಲ್ಲ ಇಲಾಖೆಗಳಲ್ಲಿ ಬಸವೇಶ್ವರರ ಭಾವಚಿತ್ರದ ಅನಾವರಣ ಕಾರ್ಯ ಮಾಡುವ ಮೂಲಕ ಸಾಂಸ್ಕ್ರತಿಕ ನಾಯಕನಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದರು.
ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ವಿಶ್ವಗುರು ಬಸವೇಶ್ವರರನ್ನು ರಾಜ್ಯದ ಸಾಂಸ್ಕ್ರತಿಕ ನಾಯಕ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿರುವುದು ಸ್ವಾಗತಾರ್ಹ ಕಾರ್ಯ. ಬಸವೇಶ್ವರರ ವಿಚಾರಗಳು ಇಡೀ ಜಗತ್ತಿಗೆ ಪಸರಿಸಬೇಕಾದರೇ ಅವರನ್ನು ಕೇವಲ ರಾಜ್ಯಕ್ಕೆ ಸಿಮೀತಗೊಳಿಸದೇ ಅವರನ್ನು ದೇಶದ ಸಾಂಸ್ಕ್ರತಿಕ ನಾಯಕ ಎಂದು ಘೋಷಣೆಯಾಗಬೇಕಿದೆ. ಈ ನಿಟ್ಟಿನಲ್ಲಿ ದೇಶದ ಪ್ರಧಾನಿ ಅವರು ನಿರ್ಧಾರ ಮಾಡುವ ಮೂಲಕ ಅವರನ್ನು ದೇಶದ ಸಾಂಸ್ಕ್ರತಿಕ ನಾಯಕ ಎಂದು ಘೋಷಿಸುವಂತಾಗಬೇಕು ಎಂದರು.ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಬಸವೇಶ್ವರರನ್ನು ಸಾಂಸ್ಕ್ರತಿಕ ನಾಯಕ ಎಂದು ಸರ್ಕಾರ ಘೋಷಣೆ ಮಾಡಿದ ನಂತರ ಕೆಲವೇ ದಿನಗಳಲ್ಲಿ ಅವರು ಜನಿಸಿದ ಸ್ಥಳದ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ಘೋಷಣೆ ಮಾಡಿದ್ದು, ಸಮಸ್ತ ಬಸವ ಭಕ್ತರ ಕನಸು ನನಸಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಉಭಯ ಶ್ರೀಗಳ ಸಾನ್ನಿಧ್ಯದಲ್ಲಿ ಬಸವ ಜನಿಸಿದ ಈ ಪುಣ್ಯನೆಲದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಸಚಿವ ಸಂಪುಟ ದರ್ಜೆಯ ಹಲವು ಸಚಿವರಿಗೆ ವಿಶೇಷ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳುವ ಆಶಯ ಬಸವ ಭಕ್ತರಿಗಿದೆ. ಈ ಕುರಿತು ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಚರ್ಚಿಸಿ ಮುಂಬರುವ ದಿನಗಳಲ್ಲಿ ಈ ಕಾರ್ಯಕ್ರಮದ ತಯಾರಿ ಕುರಿತು ರೂಪ-ರೇಷೆಗಳನ್ನು ಹಾಕಿಕೊಳ್ಳಲಾಗುವುದು ಎಂದರು.ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ೧೨ನೇ ಶತಮಾನದಲ್ಲಿ ಬಸವೇಶ್ವರರು ಸಮಾನತೆ, ಸ್ತ್ರೀ ಸ್ವಾತಂತ್ರ್ಯ ಮೇಲು-ಕೀಳು ಅನ್ನದೆ ಎಲ್ಲರನ್ನು ಸಮಾನವಾಗಿ ಕಂಡ ಮಹಾದಾರ್ಶನಿಕ. ಇಂತಹ ಮಹಾತ್ಮರನ್ನು ರಾಜ್ಯದ ಸಾಂಸ್ಕ್ರತಿಕ ನಾಯಕ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿರುವುದು ಸಂತಸದ ಸಂಗತಿ. ಬಸವೇಶ್ವರರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರವಾದ ಜೀವನ ತಮ್ಮದಾಗಿಸಿಕೊಳ್ಳಬಹುದು ಎಂದರು.ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಲ.ರು.ಗೊಳಸಂಗಿ, ತಾಲೂಕು ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಡಿಎಸ್‌ಎಸ್ ಮುಖಂಡ ಅರವಿಂದ ಸಾಲವಾಡಗಿ ಇತರರು ಮಾತನಾಡಿದರು. ವಿವಿಧ ಮುಖಂಡರ ಸಮ್ಮುಖದಲ್ಲಿ ಬಹುವಿಜೃಂಭಣೆಯಿಂದ ಜರುಗಿತು. ಪಟಾಕ್ಷಿ ಸಿಡಿಸಿದ ನಂತರ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಾಯಿತು
ಈ ಸಂದರ್ಭದಲ್ಲಿ ತಾಪಂ ಇಒ ಡಾ.ಯುವರಾಜ ಹನಗಂಡಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಸಿಡಿಪಿಒ ನಿರ್ಮಲ ಸುರಪುರ, ಲೋಕೋಪಯೋಗಿ ಇಲಾಖೆಯ ಎಇಇ ಜೆ.ವಿ.ಕಿರಸೂರ, ಜಿಪಂ ಎಇಇ ವಿಲಾಸ ರಾಠೋಡ, ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಓತಗೇರಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಭವಾನಿ ಪಾಟೀಲ, ಕ್ಷೇತ್ರಸಮನ್ವಯಾಧಿಕಾರಿ ಪಿ.ಯು.ರಾಠೋಡ, ರೇಷ್ಮೆ ಇಲಾಖೆಯ ಎಸ್.ಐ.ಗೋಲಗೊಂಡ, ಮುಖಂಡರಾದ ಲೋಕನಾಥ ಅಗರವಾಲ, ಸುರೇಶಗೌಡ ಪಾಟೀಲ, ಸುರೇಶ ಹಾರಿವಾಳ, ಬಸಣ್ಣ ದೇಸಾಯಿ, ಬಸವರಾಜ ಗೊಳಸಂಗಿ, ಬಸವರಾಜ ಹಾರಿವಾಳ, ಶೇಖರ ಗೊಳಸಂಗಿ, ಸುನೀಲ ಚಿಕ್ಕೊಂಡ, ಮಹಾಂತೇಶ ಸಾಸಾಬಾಳ, ಶ್ರೀಕಾಂತ ಕೊಟ್ರಶೆಟ್ಟಿ, ಸಂಗಮೇಶ ಓಲೇಕಾರ, ಸಂಜೀವ ಬಿರಾದಾರ, ಸಂಕನಗೌಡ ಪಾಟೀಲ, ಶೇಖರಗೌಡ ಪಾಟೀಲ, ಸುಭಾಸ ಚಿಕ್ಕೊಂಡ ಸೇರಿದಂತೆ ಇತರರು ಇದ್ದರು.೧೨ನೇ ಶತಮಾನದಲ್ಲಿ ಸಮಾನತೆಗಾಗಿ ಶ್ರಮಿಸಿದ ಬಸವಣ್ಣನವರನ್ನು ರಾಜ್ಯದ ಸಾಂಸ್ಕ್ರತಿಕ ನಾಯಕ ಎಂದು ಘೋಷಣೆಯಾಗಿರುವುದು ಸಮಸ್ತ ರಾಜ್ಯದ ಜನರಿಗೆ ಹರ್ಷ ತಂದಿದೆ ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.