ಕ್ರೀಡೆ ಮೂಲಕ ರಾಜಕೀಯಕ್ಕೆ ಬರಲು ಸಾಧ್ಯವಾಯಿತು: ಎಚ್.ಎಂ.ರೇವಣ್ಣ

KannadaprabhaNewsNetwork |  
Published : Aug 30, 2024, 01:00 AM IST
28ಮಾಗಡಿ1 : ಮಾಗಡಿ ಪಟ್ಟಣದ ಮಾರುತಿ ಪದವಿಪೂರ್ವ ಕಾಲೇಜು ಇವರ ಸಹಯೋಗದೊಂದಿಗೆ ಬುಧವಾರ 2024-25ನೇ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಮಾಜಿ ಸಚಿವ ಹೆಚ್. ಎಂ.ರೇವಣ್ಣ ಮಾತನಾಡಿದರು. | Kannada Prabha

ಸಾರಾಂಶ

ಕ್ರೀಡೆ ಮೂಲಕ ರಾಜಕೀದಯಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ನಾನು ಯಶಸ್ಸಿಯಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಹೆಚ್.ಎಂ.ರೇವಣ್ಣ ತಿಳಿಸಿದರು. ಮಾಗಡಿಯಲ್ಲಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ ಮಾಗಡಿ

ಕ್ರೀಡೆ ಮೂಲಕ ರಾಜಕೀದಯಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ನಾನು ಯಶಸ್ಸಿಯಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಹೆಚ್.ಎಂ.ರೇವಣ್ಣ ತಿಳಿಸಿದರು.

ಪಟ್ಟಣದ ಮಾರುತಿ ಪದವಿಪೂರ್ವ ಕಾಲೇಜು ಇವರ ಸಹಯೋಗದೊಂದಿಗೆ ಬುಧವಾರ 2024-25ನೇ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನನ್ನ ಸ್ನೇಹಿತರಾದ ಜವರಪ್ಪ, ಸೋಮಶೇಖರ್, ನಾರಾಯಣ್ ಸೇರಿದಂತೆ ಇತರರು ಸೇರಿ ಮಾಗಡಿ ಕೆಂಪೇಗೌಡ ಕಬ್ಬಡಿ ಸಂಸ್ಥೆಯನ್ನು ಕಟ್ಟಿ ತಾಲ್ಲೂಕಿನ ಜನತೆಯ ಆಶೀರ್ವಾದದಿಂದ ಇಂದು ರಾಜ್ಯ, ರಾಷ್ಟ್ರ‌ಮಟ್ಟದ ರಾಜಕೀಯ ನಾಯಕನನ್ನಾಗಿ ಅವಕಾಶವನ್ನು ಕಲ್ಪಸಿದ್ದು ಕ್ರೀಡೆ ಎಂದು ಹೇಳಲು ನನಗೆ ಸಂತೋಷವಾಗುತ್ತದೆ ಎಂದರು.

ನಮ್ಮ ಕಾಲದಲ್ಲಿ ಕ್ರೀಡೆಗೆ ಅಂಥಹ ಪ್ರೋತ್ಸಾಹ ಸಿಗುತ್ತಿರಲಿಲ್ಲ. ಇಂದು ಕ್ರೀಡೆಗೆ ನಮ್ಮ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಬಹಳ ಉತ್ತಮವಾದ ಪ್ರೋತ್ಸಾಹ ನೀಡುತ್ತಿದೆ. ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷರಾಗಿದ್ದ ಗೋವಿಂದರಾಜ್ ಎಂಬುವರು ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ಸೇರಿದ ಮೇಲೆ ರಾಜ್ಯದಲ್ಲಿ ಕ್ರೀಡೆಗೆ ಬಹಳಷ್ಟು ಒತ್ತನ್ನು ಕೊಡುತ್ತಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಐದು ಲಕ್ಷ ರೂ. ಕೊಡುವಂತ ಕಾರ್ಯಕ್ರಮವನ್ನು ರೂಪಿಸಿದ್ದಾರೆ ಎಂದು ತಿಳಿಸಿದರು.

ನಾವು ಕಬ್ಬಡಿ ಆಡುವಾಗ ನಮಗೆ ಚಡ್ಡಿ ಕೊಡಿಸುವವರು ಇರಲಿಲ್ಲ. ಇಂದು ಕ್ರೀಡಾಪಟುಗಳಿಗೆ ಎಲ್ಲಾ ರೀತಿ ಸೌಲಭ್ಯ ಸಿಗುತ್ತಿದ್ದು, ಇಂದಿನ ಯುವಕ, ಯುವತಿಯರು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿದಾಗ ಮಾತ್ರ ಸಾಧನೆಯ ಹಾದಿ ಸುಗಮವಾಗುತ್ತದೆ ಎಂದು ಸಲಹೆ ನೀಡಿದರು.ಜಿಲ್ಲಾ ಉಪನಿರ್ದೇಶಕಿ ನಾಗಮ್ಮ ಮಾತನಾಡಿ, ಆಟಗಳಲ್ಲಿ ಸೋಲು, ಗೆಲುವು ಸಹಜ. ಕ್ರೀಡೆಯಿಂದ ದೈಹಿಕ, ಮಾನಸಿಕವಾಗಿ ಸದೃಢರಾಗು­ವುದರೊಂದಿಗೆ ಚಂಚಲತೆ ಕಡಿಮೆ­ಯಾಗುತ್ತದೆ. ಕ್ರೀಡಾಸಕ್ತರಿಗೆ ಇಂದು ಸಾಕಷ್ಟು ಅವಕಾಶಗಳಿವೆ. ಹಳೆಯ ವಿದ್ಯಾರ್ಥಿ ಕ್ರೀಡಾಪಟುಗಳ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಮಾರ್ಗದರ್ಶನ ಪಡೆದುಕೊಂಡು ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಪ್ರತಿನಿಧಿಸಿ ಕಾಲೇಜಿಗೆ ಕೀರ್ತಿ ತರಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಂಶುಪಾಲ ಮತ್ತು ಉಪನ್ಯಾಸಕರ ಸಂಘದ ಜಿ.ಶಿವಣ್ಣ, ಎನ್.ವೇಣುಗೋಪಾಲ್, ಎಂ.ಎನ್.ಪ್ರದೀಪ್, ಕೆ.ಎನ್.ವೀರಭದ್ರಯ್ಯ, ಮಾರತಿ ಸಮೂಹ ವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ಹೆಚ್.ಗಂಗರಾಜು, ವರಲಕ್ಷ್ಮಮ್ಮ, ಕ್ಷೇತ್ರದ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಎಂ.ಮುನಿಯಪ್ಪ, ಪ್ರಾಂಶುಪಾಲರಾದ ಬಸವರಾಜ್, ಕಾಂತರಾಜು, ಉಮೇಶ್, ಎಂ.ಸಿ.ಗೋವಿಂದರಾಜು, ಜಿ.ನರಸಿಂಹಯ್ಯ, ಪ್ರಸಾದ್ ಮತ್ತಿತರರಿದ್ದರು.

PREV

Recommended Stories

ಛಾಯಾಗ್ರಾಹಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ
ಹಿಂದೂ ಸಮಾಜ ಸಂಘಟನೆಗೆ ಆರ್‌ಎಸ್ಎಸ್‌ ಪಾತ್ರ ಅಗಾಧ