ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಶಕ್ತರ ಪಾಲಿನ ಆಶಾಕಿರಣ ದೀಪಕ್‌ ಆಯ್ಕೆ

KannadaprabhaNewsNetwork |  
Published : May 16, 2026, 01:45 AM IST
ದೀಪಕ್‌  | Kannada Prabha

ಸಾರಾಂಶ

ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ..ಹೀಗೆ ಹತ್ತು ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಳ್ತಂಗಡಿಯ ಸಮಾಜ ಸೇವಕ ದೀಪಕ್ ಜಿ.ಅವರು ಮಂಗಳೂರು ಪ್ರೆಸ್ ಕ್ಲಬ್‌ನ ೨೦೨೫-೨೬ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಂಗಳೂರು: ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ..ಹೀಗೆ ಹತ್ತು ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಳ್ತಂಗಡಿಯ ಸಮಾಜ ಸೇವಕ ದೀಪಕ್ ಜಿ.ಅವರು ಮಂಗಳೂರು ಪ್ರೆಸ್ ಕ್ಲಬ್‌ನ ೨೦೨೫-೨೬ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ನೇತೃತ್ವದ ಸಮಿತಿ ಆಯ್ಕೆ ನಡೆಸಿದ್ದು, ಪ್ರಶಸ್ತಿಯು ೧೦,೦೦೧ ರು. ನಗದು, ಪ್ರಶಸ್ತಿ ಫಲಕ , ಸ್ಮರಣಿಕೆ ಒಳಗೊಂಡಿದೆ. ಮೇ ೨೪ರಂದು ಮಂಗಳೂರಿನ ರೆಡ್ ಕ್ರಾಸ್ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ದೀಪಕ್ ಜಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಶಕ್ತರ ಸೇವೆಯೇ ಉಸಿರು: ಖಾಸಗಿ ಬಸ್‌ನಲ್ಲಿ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಬಡ ಕುಟುಂಬದ ಹಿನ್ನೆಲೆಯ ದೀಪಕ್ ಜಿ. ಅಶಕ್ತರ ಸೇವೆಯನ್ನೇ ಉಸಿರಾಗಿಸಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಡವರ ಸೇವೆಗಾಗಿ ಪರಿಸರದ ಸಮಾನ ಮನಸ್ಕ ಯುವಕರನ್ನು ಒಗ್ಗೂಡಿಸಿ ರಾಜಕೇಸರಿ ಹೆಸರಿನ ಟ್ರಸ್ಟ್ ಸ್ಥಾಪಿಸಿದ್ದಾರೆ. ದಾನಿಗಳ ನೆರವು ಪಡೆದು ಟ್ರಸ್ಟ್ ಮೂಲಕ ೩೪ ಬಡ ಕುಟುಂಬಗಳಿಗೆ ಉಚಿತವಾಗಿ ಮನೆ ನಿರ್ಮಾಣ, ಸ್ವ ಉದ್ಯೋಗಕ್ಕಾಗಿ ೨೧ ಹೊಲಿಗೆ ಯಂತ್ರ ವಿತರಣೆ, ೩೮ ಮಂದಿ ವಿಕಲಚೇತನರಿಗೆ ವೀಲ್‌ಚೇರ್‌ ವಿತರಣೆ, ಗ್ರಾಮಾಂತರ ಪ್ರದೇಶಗಳಲ್ಲಿ ಆನೇಕ ಉಚಿತ ಆರೋಗ್ಯ ತಪಾಸಣಾ ಶಿಬಿರ, ಅನಾರೋಗ್ಯ ಪೀಡಿತ ಬಡ ಮಕ್ಕಳ ಚಿಕಿತ್ಸೆಗೆ ನೆರವು, ೧೨ ಜೋಡಿಗೆ ಸಾಮೂಹಿಕ ವಿವಾಹ, ಸರ್ಕಾರಿ ಶಾಲೆಗಳ ಉಳಿವಿಗೆ ಹೋರಾಟ, ಕ್ರೀಡೆ, ಕಲೆ, ಸಂಸ್ಕೃತಿ ಬಗ್ಗೆ ಜಾಗೃತಿ ಸಹಿತ ೬೦೦ಕ್ಕೂ ಅಧಿಕ ಸೇವಾ ಯೋಜನೆಗಳನ್ನು ಕಾರ್ಯಗತಗೊಳಿಸಿದ ಸಜ್ಜನ ಸಮಾಜ ಸೇವಕ.ಶಾಲಾ ಶೌಚಾಲಯದ ಸ್ವಚ್ಛತೆ: ಸರ್ಕಾರಿ ಶಾಲೆಯ ಶೌಚಾಲಯಗಳನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿ, ನವೀಕರಿಸುವ ಟ್ರಸ್ಟ್ ಸದಸ್ಯರ ಅಭಿಯಾನದಲ್ಲಿ ಬಂಟ್ವಾಳ, ಬೆಳ್ತಂಗಡಿ, ಮಂಗಳೂರಿನಲ್ಲಿ ಈಗಾಗಲೇ ೧೬ಕ್ಕೂ ಅಧಿಕ ಶೌಚಾಲಯಗಳಿಗೆ ಹೊಸ ರೂಪ ನೀಡಲಾಗಿದೆ. ಸೂರಿಲ್ಲದ ಬಡವರಿಗೆ ಮನೆ ನಿರ್ಮಾಣ ಕಾರ್ಯದಲ್ಲಿ ದೀಪಕ್ ಅವರ ಟ್ರಸ್ಟ್ ತೊಡಗಿಸಿಕೊಂಡಿದೆ. ಇದುವರೆಗೆ ೩೪ ಮನೆ ನಿರ್ಮಿಸಿ ಹಸ್ತಾಂತರ ಮಾಡಿದ್ದಾರೆ. ನೂರಾರು ಮಂದಿಯ ಬಾಳಿಗೆ ಬೆಳಕಾದ ದೀಪಕ್ ಅವರು ಪ್ರಸ್ತುತ ಬೆಳ್ತಂಗಡಿಯಲ್ಲಿ ಆರೋಗ್ಯ ಇಲಾಖೆಯ ಅನುದಾನದಿಂದ ನಡೆಯುತ್ತಿರುವ ಸಾನಿಧ್ಯ ಕೌಶಲ ತರಬೇತಿ ಕೇಂದ್ರದ ಬಸ್ ಚಾಲಕನಾಗಿ ದುಡಿಯುತ್ತಿದ್ದಾರೆ. ಜತೆಗೆ ಬೆಳ್ತಂಗಡಿಯಲ್ಲಿ ತನ್ನದೇ ಆದ ಸಣ್ಣ ವ್ಯಾಪಾರ ನಡೆಸುತ್ತಿದ್ದಾರೆ. ಸಮಾಜ ಸೇವೆಯನ್ನೇ ಉಸಿರಾಗಿಸಿ ದುಡಿಯುತ್ತಿರುವ ದೀಪಕ್ ಅವರ ಸೇವಾ ಕಾರ್ಯಗಳು ಯುವ ಜನತೆಗೆ ಮಾದರಿಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಚ್ಛ ಪುತ್ತೂರು ಪರಿಕಲ್ಪನೆಯಲ್ಲಿ ಮೂಡಿ ಬಂದ ಬಯೋ ಸಿಎನ್‌ಜಿ ಘಟಕ ''''''''ಕಸದಿಂದ ರಸ''''''''
ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜ್‌: ಎನ್‌ಬಿಎ ಮಾನ್ಯತೆ ಮೂರು ವರ್ಷ ವಿಸ್ತರಣೆ