ಯಶಸ್ವಿಯಾದ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ಪ್ರಸ್ತುತ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯವಾಗಿದೆ ಎಂದು ಬಸವ ರಾಜೇಂದ್ರ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಹಾಗೂ ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಎಂ.ಬಸವ ರಾಜೇಂದ್ರ ಹೇಳಿದರು.
ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.ಆರೋಗ್ಯದ ಬಗ್ಗೆ ವಹಿಸಬೇಕಾದ ಕಾಳಜಿಯ ಕುರಿತು ತಿಳಿಸುವುದರ ಜತೆ ರಕ್ತದಾನದ ಮಹತ್ವ ಹಾಗೂ ಶಿಬಿರದ ಉದ್ದೇಶದ ಬಗ್ಗೆ ಬಸವ ರಾಜೇಂದ್ರ ತಿಳಿಸಿದರು.
ಶಿಬಿರದಲ್ಲಿ 300 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿ ಔಷಧಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉಮ್ಮತ್ತೂರು ಗ್ರಾಪಂ ಅಧ್ಯಕ್ಷರಾದ ಸುಧಾ ಮಲ್ಲಣ್ಣ, ಸದಸ್ಯರಾದ ಸಿದ್ದರಾಜು, ಶಿವಣ್ಣ, ಪ್ರಾಥಮಿಕ ಕೃಷಿ ಪತ್ತಿನ ಸದಸ್ಯ ರೇವಣ್ಣ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಿಮಲಪ್ಪ, ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಸುಧಾ ಮಲ್ಲಣ್ಣ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಡಾ. ಶ್ವೇತಾ ಶಶಿಧರ್, ಕಲಾವಿದ ಉಮ್ಮತ್ತೂರು ಬಸವರಾಜ್, ಗ್ರಾಮಸ್ಥರು ಇದ್ದರು.